ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕ್ವಿಡ್ ಹ್ಯಾಚ್‌ಬ್ಯಾಕ್ ಆವೃತ್ತಿಯು ರೆನಾಲ್ಟ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ವಿಡ್ ಕಾರು ಇದೀಗ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ.

ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ಕ್ವಿಡ್ ಕಾರು ಮಾರಾಟ ಆರಂಭವಾದ ನಂತರ ಇದುವರೆಗೆ ದೇಶಿಯ ಮಾರುಕಟ್ಟೆಯಲ್ಲಿ 3.50 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ್ದು, ಇದೀಗ ಹೊಸ ಕಾರು ಮತ್ತಷ್ಟು ಹೊಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ. ಕ್ವಿಡ್ ಫೇಸ್‌ಲಿಫ್ಟ್ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಕಂಪನಿಯು ಹೊಸ ಕಾರನ್ನು ಸದ್ಯ ಬಿಎಸ್-6 ಎಂಜಿನ್‌ನೊಂದಿಗೆ ಮಾರಾಟ ಮಾಡುತ್ತಿದೆ.

ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ರೆನಾಲ್ಟ್ ಇಂಡಿಯಾ ಕಂಪನಿಯು ಸದ್ಯ ಬಿಎಸ್-6 ಕ್ವಿಡ್ ಆರ್‌ಎಕ್ಸ್‌ಎಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಮಾರಾಟ ಮಾಡುತ್ತಿದ್ದು, ಹೊಸ ಕ್ವಿಡ್ ಆರ್‌ಎಕ್ಸ್‌ಎಲ್ ಆವೃತ್ತಿಯು ಆರಂಭಿಕವಾಗಿ ಎಕ್ಸ್ ಶೋರೂಂ ಪ್ರಕಾರ ರೂ. 4.16 ಲಕ್ಷ ಬೆಲೆ ಹೊಂದಿದೆ.

ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ರೆನಾಲ್ಟ್ ಕ್ವಿಡ್ ಆರ್‌ಎಕ್ಸ್ಎಲ್ ಆವೃತ್ತಿಯು 1.0-ಲೀಟರ್ ಎಂಜಿನ್‌ನೊಂದಿಗೆ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದ್ದು, ಇದರಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಕ್ವಿಡ್ ಆರ್‌ಎಕ್ಸ್‌ಎಲ್ 1.0-ಲೀಟರ್ ಆವೃತ್ತಿಯ ಬೆಲೆಯು ತುಸು ದುಬಾರಿಯಾಗಿದೆ.

ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ಆಟೋಮ್ಯಾಟಿಕ್ ಆವೃತ್ತಿಯ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 4.48 ಲಕ್ಷ ಬೆಲೆ ಹೊಂದಿದ್ದು, 999 ಸಿಸಿ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 67-ಬಿಹೆಚ್‌ಪಿ ಮತ್ತು 91-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ಹೊಸ ಎಂಜಿನ್‌ನಲ್ಲಿ ಗ್ರಾಹಕರ ಬೇಡಿಕೆಯೆಂತೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದ್ದು, ಕ್ವಿಡ್ 1.0-ಲೀಟರ್ ಆರ್‌ಎಕ್ಸ್‌ಎಲ್‌ನ ಎಎಮ್‌ಟಿ ಆವೃತ್ತಿಯು ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿಯಲ್ಲಿದೆ.

ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ಭಾರತದಲ್ಲಿ ಕ್ವಿಡ್ ಕಾರು ಸದ್ಯ ಆರು ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಎಸ್‌ಟಿಡಿ, ಆರ್‌ಎಕ್ಸ್‌ಇ, ಆರ್‌ಎಕ್ಸ್‌ಎಲ್, ಆರ್‌ಎಕ್ಸ್‌ಟಿ, ಆರ್‌ಎಕ್ಸ್‌ಟಿ (ಒ) ಮತ್ತು ಕ್ಲೈಂಬರ್ (ಒ) ಆವೃತ್ತಿಯನ್ನು ಖರೀದಿಸಬಹುದಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕ್ವಿಡ್ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ರೆನಾಲ್ಟ್ ಹೊಸ ದಾಖಲೆ

ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳ ಪೈಕಿ ಅಗ್ರಸ್ಥಾನದಲ್ಲಿರುವ ಕ್ವಿಡ್ ಕಾರನ್ನು ಇದೀಗ ಹೊಸ ಆವೃತ್ತಿಯಲ್ಲಿ ಬಿಡುಗಡೆಗೊಳಿಸಿರುವುದರಿಂದ ಮತ್ತಷ್ಟು ಗ್ರಾಹಕರನ್ನು ಆಕರ್ಷಿಸಲಿದ್ದು, ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿಗೆ ಇದು ನೇರ ಪೈಪೋಟಿ ನೀಡುತ್ತದೆ.

More from DriveSpark

Article Published On: Wednesday, July 8, 2020, 21:20 [IST]
English summary
Renault Kwid Hatchback Crossed 3.5 Lakh Sales Milestone In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+