ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಇಂಡಿಯಾ ಕಂಪನಿಯ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗಾಗಿ ಈಗಾಗಲೇ ಹಲವು ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಇದೇ ತಿಂಗಳು 18ಕ್ಕೆ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಲಿದೆ.

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಟೀಸರ್ ಅನಾವರಣಗೊಳಿಸಿರುವ ರೆನಾಲ್ಟ್ ಕಂಪನಿಯು ಉತ್ಪಾದನಾ ಆವೃತ್ತಿಯನ್ನು ಪ್ರದರ್ಶನಗೊಳಿಸುತ್ತಿದ್ದು, ಹೊಸ ಕಾರು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗಲಿದೆ. ಡಸ್ಟರ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿರುವ ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಪ್ರತಿ ಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಫೀಚರ್ಸ್ ಹೊಂದಿರಲಿದ್ದು, ಬೆಲೆಯಲ್ಲೂ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಸ್ಪೋರ್ಟಿ ಲುಕ್‌ನೊಂದಿಗೆ ಕಟಿಂಗ್ ಎಡ್ಜ್ ವಿನ್ಯಾಸ ಹೊಂದಲಿರುವ ಹೊಸ ಕಿಗರ್ ಕಾರು ಸಬ್ ಫೋರ್ ಮೀಟರ್‌ನೊಂದಿಗೆ ಬಿಡುಗಡೆಯಾಗಲಿದ್ದು, ನಿಸ್ಸಾನ್ ಮ್ಯಾಗ್ನೈಟ್ ಮಾದರಿಯೊಂದಿಗೆ ಕೆಲವು ತಾಂತ್ರಿಕ ಸೌಲಭ್ಯಗಳನ್ನು ಎರವಲು ಪಡೆದುಕೊಳ್ಳಲಿದೆ.

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಬಹುತೇಕ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿವೆ.

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಇದೀಗ ಹೊಸ ತಂತ್ರಜ್ಞಾನ ಮತ್ತು ವಿನೂತನ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗುತ್ತಿರುವ ರೆನಾಲ್ಟ್ ಹೊಚ್ಚ ಹೊಸ ಕಿಗರ್ ಕಾರು ಮಾದರಿಯು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದ್ದು, ಆರಂಭಿಕವಾಗಿ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9 ಲಕ್ಷದೊಳಗೆ ಬಿಡುಗಡೆಯಾಗುವ ನೀರಿಕ್ಷೆಗಳಿವೆ. ಆರಂಭಿಕ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ರೂ. 1 ಲಕ್ಷದಷ್ಟು ಕಡಿಮೆ ಬೆಲೆ ಹೊಂದಿರಲಿದ್ದು, ಹೊಸ ಕಾರು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡಿರುವ ರೆನಾಲ್ಟ್ ಕಂಪನಿಯು ಇದೀಗ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಈಗಷ್ಟೇ ಪೂರ್ಣಗೊಳಿಸುತ್ತಿದ್ದು, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಕಂಪನಿಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಸಹಭಾಗೀತ್ವದ ಕಂಪನಿಯಾದ ನಿಸ್ಸಾನ್ ನಿರ್ಮಾಣದ ಹೊಸ ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಹಂಚಿಕೊಳ್ಳಲಿದ್ದು, ಮಾಗ್ನೈಟ್ ಮತ್ತು ಕಿಗರ್ ಕಾರುಗಳು ತಾಂತ್ರಿಕವಾಗಿ ಒಂದೇ ಮಾದರಿಯ ಕಾರು ಮಾದರಿಗಳಾಗಿದ್ದರೂ ಗ್ರಾಹಕರ ಬೇಡಿಕೆಯೆಂತೆ ವಿಭಿನ್ನವಾದ ಆಕರ್ಷಕ ವಿನ್ಯಾಸಗಳನ್ನು ಹೊಂದಿರಲಿದೆ.

Article Published On: Tuesday, November 17, 2020, 12:52 [IST]
English summary
Renault Kiger Unveil Tomorrow, New teaser released. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+