Just In
Don't Miss!
- Movies
ಜಗ್ಗೇಶ್ ಮನೆಯಲ್ಲಿ ವಿಶೇಷ ಪೂಜೆ: ಭೂವರಹ, ಅಷ್ಟಲಕ್ಷ್ಮೀ, ನವಗ್ರಹ ಹೋಮ
- News
ಬೇಡಪ್ಪಾ ಬೇಡ ಲಸಿಕೆ: ಕೊವ್ಯಾಕ್ಸಿನ್ ಬಗ್ಗೆ ಜನರಲ್ಲಿ ಭಯವೇಕೆ?
- Education
IRCTC Recruitment 2021: ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
- Sports
ಭಾರತ vs ಆಸ್ಟ್ರೇಲಿಯಾ: ಫೀಲ್ಡಿಂಗ್ನಲ್ಲಿ ವಿಶೇಷ ಸಾಧನೆ ಮಾಡಿದ ರೋಹಿತ್ ಶರ್ಮಾ
- Lifestyle
ತ್ವಚೆಯಲ್ಲಿ ಮೊಡವೆ, ನೆರಿಗೆ ತಡೆಗಟ್ಟುವಲ್ಲಿ ಬಿಸಿನೀರು ಹೇಗೆ ಸಹಕಾರಿ?
- Finance
ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಉಪಾಧ್ಯಕ್ಷ ಜೇ ವೈ. ಲೀಗೆ ಮೂರು ವರ್ಷ ಜೈಲು ಶಿಕ್ಷೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇದೇ ತಿಂಗಳು 18ಕ್ಕೆ ಅನಾವರಣಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ
ರೆನಾಲ್ಟ್ ಇಂಡಿಯಾ ಕಂಪನಿಯ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗಾಗಿ ಈಗಾಗಲೇ ಹಲವು ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಇದೇ ತಿಂಗಳು 18ಕ್ಕೆ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಲಿದೆ.

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಟೀಸರ್ ಅನಾವರಣಗೊಳಿಸಿರುವ ರೆನಾಲ್ಟ್ ಕಂಪನಿಯು ಉತ್ಪಾದನಾ ಆವೃತ್ತಿಯನ್ನು ಪ್ರದರ್ಶನಗೊಳಿಸುತ್ತಿದ್ದು, ಹೊಸ ಕಾರು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗಲಿದೆ. ಡಸ್ಟರ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿರುವ ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಪ್ರತಿ ಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಫೀಚರ್ಸ್ ಹೊಂದಿರಲಿದ್ದು, ಬೆಲೆಯಲ್ಲೂ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಸ್ಪೋರ್ಟಿ ಲುಕ್‌ನೊಂದಿಗೆ ಕಟಿಂಗ್ ಎಡ್ಜ್ ವಿನ್ಯಾಸ ಹೊಂದಲಿರುವ ಹೊಸ ಕಿಗರ್ ಕಾರು ಸಬ್ ಫೋರ್ ಮೀಟರ್‌ನೊಂದಿಗೆ ಬಿಡುಗಡೆಯಾಗಲಿದ್ದು, ನಿಸ್ಸಾನ್ ಮ್ಯಾಗ್ನೈಟ್ ಮಾದರಿಯೊಂದಿಗೆ ಕೆಲವು ತಾಂತ್ರಿಕ ಸೌಲಭ್ಯಗಳನ್ನು ಎರವಲು ಪಡೆದುಕೊಳ್ಳಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಬಹುತೇಕ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿವೆ.

ಇದೀಗ ಹೊಸ ತಂತ್ರಜ್ಞಾನ ಮತ್ತು ವಿನೂತನ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗುತ್ತಿರುವ ರೆನಾಲ್ಟ್ ಹೊಚ್ಚ ಹೊಸ ಕಿಗರ್ ಕಾರು ಮಾದರಿಯು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದ್ದು, ಆರಂಭಿಕವಾಗಿ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9 ಲಕ್ಷದೊಳಗೆ ಬಿಡುಗಡೆಯಾಗುವ ನೀರಿಕ್ಷೆಗಳಿವೆ. ಆರಂಭಿಕ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ರೂ. 1 ಲಕ್ಷದಷ್ಟು ಕಡಿಮೆ ಬೆಲೆ ಹೊಂದಿರಲಿದ್ದು, ಹೊಸ ಕಾರು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡಿರುವ ರೆನಾಲ್ಟ್ ಕಂಪನಿಯು ಇದೀಗ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಈಗಷ್ಟೇ ಪೂರ್ಣಗೊಳಿಸುತ್ತಿದ್ದು, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಕಂಪನಿಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

ಕಿಗರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರು ಸಹಭಾಗೀತ್ವದ ಕಂಪನಿಯಾದ ನಿಸ್ಸಾನ್ ನಿರ್ಮಾಣದ ಹೊಸ ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಹಂಚಿಕೊಳ್ಳಲಿದ್ದು, ಮಾಗ್ನೈಟ್ ಮತ್ತು ಕಿಗರ್ ಕಾರುಗಳು ತಾಂತ್ರಿಕವಾಗಿ ಒಂದೇ ಮಾದರಿಯ ಕಾರು ಮಾದರಿಗಳಾಗಿದ್ದರೂ ಗ್ರಾಹಕರ ಬೇಡಿಕೆಯೆಂತೆ ವಿಭಿನ್ನವಾದ ಆಕರ್ಷಕ ವಿನ್ಯಾಸಗಳನ್ನು ಹೊಂದಿರಲಿದೆ.