ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಟ್ರೈಬರ್ ಮಿನಿ ಎಂಪಿವಿ, ಡಸ್ಟರ್ ಫೇಸ್‌ಲಿಫ್ಟ್ ಮತ್ತು ಕ್ವಿಡ್ ಫೇಸ್‌ಲಿಫ್ಟ್ ಕಾರುಗಳ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ರೆನಾಲ್ಟ್ ಸಂಸ್ಥೆಯು ಸದ್ಯದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ವಿನೂತನ ವಿನ್ಯಾಸದ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಉನ್ನತೀಕರಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಡೀಸೆಲ್ ಕಾರುಗಳ ಮಾರಾಟ ಬಂದ್ ಮಾಡುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಪೆಟ್ರೋಲ್ ಎಂಜಿನ್ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ. ಹೀಗಾಗಿ ರೆನಾಲ್ಟ್ ಬಿಡುಗಡೆ ಮಾಡಲಿರುವ ಹೊಸ ಪೆಟ್ರೋಲ್ ಕಾರುಗಳಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳಷ್ಟೇ ಅಲ್ಲದೇ ಇನ್ನು ಕೆಲವು ಹೊಸ ಮಾದರಿಗಳು ಸಹ ಗ್ರಾಹಕರನ್ನು ಸೆಳೆಯಲಿವೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿನ ಹೊಸ ಕಾರುಗಳ ಮಾರಾಟದಲ್ಲಿ ಸಾಕಷ್ಟು ಬದಲಾವಣೆ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಕೆಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಟ್ರೈಬರ್ ಆವೃತ್ತಿಯ ಮೂಲಕ ಎಂಪಿವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಸಂಸ್ಥೆಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಿಗರ್ ಕಾರು ಮಾದರಿಯ ಮೂಲಕ ಭಾರತದಲ್ಲಿ ಮತ್ತಷ್ಟು ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹ್ಯುಂಡೈ ವೆನ್ಯೂ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪೈಪೋಟಿಯಾಗಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ರಸ್ತೆಗಿಳಿಯಲಿದ್ದು, ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ಹೊಸ ಕಾರನ್ನು ಸದ್ಯ ಟೆಸ್ಟಿಂಗ್ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ರೆನಾಲ್ಟ್ ಸಂಸ್ಥೆಯು ಸಾರಿಗೆ ಇಲಾಖೆಯಲ್ಲಿ ಹೊಸ ಕಾರಿನ ಅಧಿಕೃತ ಹೆಸರನ್ನು ನೋಂದಣಿ ಮಾಡಿಸಿದ್ದು, ಇದರಲ್ಲಿ 'ಕಿಗರ್' ಎಂದು ನಮೂದಿಸಲಾಗಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಕಿಗರ್ ಕಾರು ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಗ್ರಾಹಕರ ಬೇಡಿಕೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಸದ್ಯ ಭಾರೀ ಪ್ರಮಾಣದ ಬೇಡಿಕೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದು, ಇದೇ ಕಾರಣಕ್ಕಾಗಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ವಿಭಾಗದ ಮೇಲೆ ಹೆಚ್ಚಿನ ಗಮನಹರಿಸಿರುವ ರೆನಾಲ್ಟ್ ಸಂಸ್ಥೆಯು ಕಿಗರ್ ಬಿಡುಗಡೆಗೆ ಸಜ್ಜಾಗಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಿಗರ್ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿನ್ ಸಾಮರ್ಥ್ಯ

ಬಿಡುಗಡೆಯಾಗುತ್ತಿರುವ ಹೊಸ ಕಿಗರ್ ಕಾರು ಟ್ರೈಬರ್ ಹೊಸ ಕಾರಿನಲ್ಲಿ ಹೊಸದಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಆಕರ್ಷಕ ನೋಟ ಮತ್ತು ಬಲಿಷ್ಠ ಬಾಡಿ ಕಿಟ್ ಜೋಡಣೆಯೊಂದಿಗೆ ರಸ್ತೆಗಿಳಿಯಲಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಹೊಸ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಕೂಡಾ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದುವುದು ಬಹುತೇಕ ಖಚಿತ ಎನ್ನಲಾಗಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ರೆನಾಲ್ಟ್ ಸಂಸ್ಥೆಯು ಹೊಸ ಕಾರನ್ನು ಮುಂದಿನ ತಿಂಗಳು ಫೆಬ್ರುವರಿ 7ರಿಂದ ನಡೆಯಲಿರುವ ದೆಹಲಿ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿ ಬಿಡುಗಡೆಗೊಳಿಸಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

Article Published On: Friday, January 24, 2020, 8:45 [IST]
English summary
Renault sub 4 meter SUV spy details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+