ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ರೆನಾಲ್ಟ್ ಇಂಡಿಯಾ ಕಂಪನಿಯು ಕುಸಿದಿರುವ ವ್ಯಾಪಾರ ವಹಿವಾಟು ಸುಧಾರಿಸಲು ತನ್ನ ವಿವಿಧ ಕಾರುಗಳ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಹೊಸ ಆಫರ್‌ಗಳು ಜುಲೈ 31ರ ಒಳಗಾಗಿ ಕಾರು ಖರೀದಿಸುವ ವಾಹನ ಮೇಲೆ ಮಾತ್ರ ಅನ್ವಯವಾಗಲಿವೆ.

ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಕೂಡಾ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದ್ದು, ಹೊಸ ವಾಹನ ಖರೀದಿದಾರರಿಗೆ ಇಎಂಐ ದರ ತಗ್ಗಿಸಿ ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ಲಾಕ್‌ಡೌನ್‌ಗೂ ಮೊದಲು ವಾಹನ ಖರೀದಿಯ ಯೋಜನೆಯಲ್ಲಿದ್ದ ಬಹುತೇಕ ಗ್ರಾಹಕರು ಕಾರು ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಉದ್ಯೋಗದ ಅಭದ್ರತೆ ಮತ್ತು ಆದಾಯಕ್ಕಿಂತ ಖರ್ಚು ಹೆಚ್ಚುತ್ತಿರುವುದು ಹೊಸ ವಾಹನಗಳ ಖರೀದಿಯ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ.

ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ಇದರಿಂದ ಗ್ರಾಹಕರನ್ನು ಸೆಳೆಯಲು ಪ್ರಮುಖ ಆಟೋ ಕಂಪನಿಗಳು ಅತಿ ಸುಲಭವಾದ ಸಾಲಸೌಲಭ್ಯಗಳನ್ನು ನೀಡುತ್ತಿದ್ದು, ರೆನಾಲ್ಟ್ ಇಂಡಿಯಾ ಕೂಡಾ ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮೇಲೆ ವಿಶೇಷ ಆಫರ್‌ಗಳನ್ನು ನೀಡಿದೆ.

ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ರೆನಾಲ್ಟ್ ಹೊಸ ಕಾರುಗಳನ್ನು ಖರೀದಿಸುವ ಗ್ರಾಹಕರು ಅತಿ ಸುಲಭ ಹಣಕಾಸು ಸೌಲಭ್ಯದೊಂದಿಗೆ ಮಾಲೀಕತ್ವದ ಹೊಂದಬಹುದಾಗಿದ್ದು, "ಬೈ ನವ್ ಪೇ ಲೇಟರ್" ಯೋಜನೆ ಅಡಿ ಕಾರು ಖರೀದಿ ಮಾಡಿದ ಮೊದಲ ಮೂರು ತಿಂಗಳು ಇಎಂಐ ವಿನಾಯ್ತಿಯೊಂದಿಗೆ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ಜೊತೆಗೆ ಆಯ್ದ ಕಾರು ಖರೀದಿ ಮೇಲೆ ಗರಿಷ್ಠ ಮಟ್ಟದ ಕ್ಯಾಶ್‌ಬ್ಯಾಕ್ ಆಫರ್, ಎಕ್ಸ್‌ಚೆಂಜ್ ಆಫರ್ ಮತ್ತು ಕಾರ್ಪೋರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದ್ದು, ಗ್ರಾಮೀಣ ಭಾಗದ ಕಾರು ಖರೀದಿದಾರರಿಗೆ ಹೆಚ್ಚಿನ ಮಟ್ಟದ ಕ್ಯಾಶ್‌ಬ್ಯಾಕ್ ಆಫರ್ ನೀಡಲಾಗಿದೆ.

ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ಮಾಹಿತಿಗಳ ಪ್ರಕಾರ, ಕ್ವಿಡ್ ಕಾರು ಖರೀದಿ ಮೇಲೆ ರೂ.35 ಸಾವಿರದಷ್ಟು ಆಫರ್ ಘೋಷಣೆ ಮಾಡಿದ್ದರೆ, ಟ್ರೈಬರ್ ಕಾರು ಖರೀದಿಸುವ ಗ್ರಾಹಕರಿಗೆ ರೂ.30 ಸಾವಿರದಷ್ಟು ಆಫರ್ ದೊರೆಯಲಿದೆ. ಹಾಗೆಯೇ ಡಸ್ಟರ್ ಕಾರು ಖರೀದಿ ಮೇಲೆ ರೂ.60 ಸಾವಿರದಷ್ಟು ಆಫರ್ ಲಭ್ಯವಿದ್ದು, ಗ್ರಾಮೀಣ ಭಾಗದ ಗ್ರಾಹಕರಿಗೆ ಹಲವು ಹೊಸ ಆಫರ್ ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ರೆನಾಲ್ಟ್

ಇದು ಸದ್ಯ ಆರ್ಥಿಕ ಸಂಕಷ್ಟದಿಂದ ಕಾರು ಖರೀದಿ ಯೋಜನೆಯನ್ನು ಮುಂದೂಡಿರುವ ಗ್ರಾಹಕರಿಗೆ ಸಾಕಷ್ಟು ಅನುಕೂಲಕರವಾಗಲಿದ್ದು, ಹೊಸ ಆಫರ್‌ಗಳನ್ನು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.

Article Published On: Thursday, July 9, 2020, 12:52 [IST]
English summary
Renault Offers Discounts, Exchange Bonuses & Other Benefits. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+