ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಭಾರತೀಯ ಆಟೋ ಉದ್ಯಮವು ಕರೋನಾ ಸಂಕಷ್ಟಕ್ಕೆ ಸಿಲುಕಿ ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಹಲವಾರು ಆಟೋ ಕಂಪನಿಗಳ ಹೊಸ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿದೆ.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

2020ರ ಸೆಪ್ಟೆಂಬರ್ ಅವಧಿಯಲ್ಲಿನ ವಿವಿಧ ಕಂಪನಿಗಳ ಕಾರು ಮಾರಾಟದಲ್ಲಿ ಶೇ.31 ರಷ್ಟು ಬೆಳವಣಿಗೆ ಕಂಡುಬಂದಿದ್ದು, ಒಟ್ಟು 2,92,894 ಯನಿಟ್ ಕಾರುಗಳನ್ನು ಮಾರಾಟ ಮಾಡಿವೆ. ಸಂಕಷ್ಟದಲ್ಲೂ ಕಾರು ಮಾರಾಟವು ಚೇತರಿಸಿಕೊಂಡಿರುವ ಆಟೋ ಕಂಪನಿಗಳಲ್ಲಿ ಮತ್ತಷ್ಟು ಬಲತುಂಬಿದ್ದು, ದೀಪಾವಳಿ ಸಂಭ್ರಮಾಚರಣೆಗೆ ಹೊತ್ತಿಗೆ ಮತ್ತಷ್ಟು ಹೊಸ ವಾಹನಗಳು ಮಾರಾಟಗೊಳ್ಳುವ ನೀರಿಕ್ಷೆಗಳಿವೆ.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ರೆನಾಲ್ಟ್ ಇಂಡಿಯಾ ಕೂಡಾ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ರೆನಾಲ್ಟ್ ವಿವಿಧ ಕಾರುಗಳ ಖರೀದಿಯ ಮೇಲೆ ಗರಿಷ್ಠ ರೂ. 70 ಸಾವಿರದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್ ಪಡೆದುಕೊಳ್ಳಬಹುದು.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ರೆನಾಲ್ಟ್ ಕಂಪನಿಯು ಸದ್ಯ ಮಾರಾಟ ಮಾಡುತ್ತಿರುವ ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಮೇಲೆ ಹೊಸ ಆಫರ್‌ಗಳು ಲಭ್ಯವಿದ್ದು, ಹೊಸ ಆಫರ್‌ಗಳನ್ನು ಈ ತಿಂಗಳ ಕೊನೆಯ ತನಕ ಪಡೆದುಕೊಳ್ಳಬಹುದಾಗಿದೆ.

ಕ್ವಿಡ್ ಹ್ಯಾಚ್‌ಬ್ಯಾಕ್

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲೆ ರೂ. 40 ಸಾವಿರದಷ್ಟು ಆಫರ್ ಲಭ್ಯವಿದ್ದು, ರೂ.40 ಸಾವಿರದಲ್ಲಿ ರೂ.15 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.15 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ.10 ಸಾವಿರ ಲೊಯಾಲಿಟಿ ಆಫರ್ ನೀಡಲಾಗುತ್ತಿದೆ.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಇದಲ್ಲದೆ ಕ್ವಿಡ್ ಕಾರು ಖರೀದಿಯ ಮೇಲೆ ರೂ. 9 ಸಾವಿರದಷ್ಟು ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ರೂ. 5 ಸಾವಿರದಷ್ಟು ಗ್ರಾಮೀಣ ಭಾಗದ ಗ್ರಾಹಕರಿಗೆ ಹೆಚ್ಚುವರಿಯಾಗಿ ಆಫರ್ ನೀಡಲಾಗುತ್ತಿದ್ದು, ಹೊಸ ಕಾರು ಖರೀದಿಗಾಗಿ ಆಕರ್ಷಕ ಶೇ.3.99 ಬಡ್ಡಿದರ ಸಾಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಟ್ರೈಬರ್ ಎಂಪಿವಿ

ಬಜೆಟ್ ಬೆಲೆಯ ಎಂಪಿವಿ ಮಾದರಿಯಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟ್ರೈಬರ್ ಕಾರಿನ ಖರೀದಿ ಮೇಲೂ ಆಕರ್ಷಕ ಆಫರ್‌ಗಳು ಲಭ್ಯವಿದ್ದು, ಗರಿಷ್ಠ ರೂ.30 ಸಾವಿರದಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇದರಲ್ಲಿ ರೂ.20 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ.10 ಸಾವಿರದಷ್ಟು ಲೊಯಾಲಿಟಿ ಬೋನಸ್‌ನೊಂದಿಗೆ ರೂ.4 ಸಾವಿರ ಗ್ರಾಮೀಣ ಭಾಗದ ಗ್ರಾಹಕರಿಗೆ ಹೆಚ್ಚುವರಿ ಕ್ಯಾಶ್ ಡಿಸ್ಕೌಂಟ್ ನೀಡುತ್ತಿದೆ.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಇದಲ್ಲದೇ ಹೊಸ ಕಾರು ಖರೀದಿಗಾಗಿ ಶೇ.3.99 ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು 2 ವರ್ಷಗಳ ಅವಧಿಗೆ ಒದಗಿಸಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.12 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 7.34 ಲಕ್ಷ ಬೆಲೆಯೊಂದಿಗೆ 1.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಡಸ್ಟರ್ ಎಸ್‌ಯುವಿ

ರೆನಾಲ್ಟ್ ಕಂಪನಿಯು ಡಸ್ಟರ್ ಕಾರು ಖರೀದಿ ಮೇಲೆ ರೂ. 70 ಸಾವಿರದಷ್ಟು ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಆಫರ್‌ನಲ್ಲಿ ರೂ.25 ಸಾವಿರ ಎಕ್ಸ್‌ಚೆಂಜ್ ಆಫರ್, ರೂ.25 ಸಾವಿರ ಕ್ಯಾಶ್ ಡಿಸ್ಕೌಂಟ್(ಆರ್‌ಎಕ್ಸ್ಎಸ್ ಮಾದರಿಯ ಮೇಲೆ ಮಾತ್ರ), ರೂ.20 ಸಾವಿರ ಲೊಯಾಲಿಟಿ ಆಫರ್‌ಗಳು ಒಳಗೊಂಡಿವೆ.

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಜೊತೆಗೆ ಇತ್ತೀಚೆಗೆ ಬಿಡುಗಡೆಯಾದ ಡಸ್ಟರ್ ಟರ್ಬೋ ಕಾರಿನ ಮೇಲೂ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಡಿಸ್ಕೌಂಟ್ ದರ ನಿಗದಿಯಾಗುತ್ತದೆ. ಡಸ್ಟರ್ ಕಾರು ಮಾದರಿಯು ಸದ್ಯ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟವಾಗುತ್ತಿದ್ದು, 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮಾದರಿಲ್ಲಿ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಡಸ್ಟರ್ ಕಾರು ಆರಂಭಿಕವಾಗಿ ರೂ. 8.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.59 ಲಕ್ಷ ಬೆಲೆ ಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ದೀಪಾವಳಿ ಸಂಭ್ರಮ: ರೆನಾಲ್ಟ್ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್

ಇದರಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.49 ಲಕ್ಷದಿಂದ ರೂ.9.99 ಲಕ್ಷ ಬೆಲೆ ಹೊಂದಿದ್ದರೆ, 1.3-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.49 ಲಕ್ಷದಿಂದ ರೂ.13.59 ಲಕ್ಷ ಬೆಲೆ ಹೊಂದಿದೆ. ಬಿಎಸ್-6 ಜಾರಿ ನಂತರ ರೆನಾಲ್ಟ್ ಕಾರುಗಳಲ್ಲಿ ಡೀಸೆಲ್ ಎಂಜಿನ್ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಕೇವಲ ಪೆಟ್ರೋಲ್ ಮಾದರಿಗಳಲ್ಲಿ ಮಾತ್ರ ಮಾರಾಟಮಾಡಲಾಗುತ್ತಿದೆ.

More from DriveSpark

Article Published On: Tuesday, October 6, 2020, 10:00 [IST]
English summary
Renault Offers Discounts Other Benefits On Models In October. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+