ಮಾರುತಿ ಸುಜುಕಿಗೆ ಮತ್ತಷ್ಟು ಪೈಪೋಟಿ ನೀಡಲಿವೆ ರೆನಾಲ್ಟ್ ಹೊಸ ಕಾರುಗಳು
ಎಂಟ್ರಿ ಲೆವಲ್ ಕಾರುಗಳ ಮೂಲಕ ಜನಪ್ರಿಯಗೊಂಡಿರುವ ಮಾರುತಿ ಸುಜುಕಿ ಕಂಪನಿಗೆ ಪೈಪೋಟಿ ನೀಡಲು ಮುಂದಾಗಿರುವ ರೆನಾಲ್ಟ್ ಕಂಪನಿಯು ಭಾರತದಲ್ಲಿ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಮೀಣ ವಿಭಾಗದ ಗ್ರಾಹಕರ ಗುರಿಯಾಗಿಸಿ ಎಂಟ್ರಿ ಲೆವಲ್ ಕಾರುಗಳನ್ನು ರಸ್ತೆಗಿಳಿಸಲು ಮುಂದಾಗಿದೆ.

ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ಕಾರು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ಮಾಹಾನಗರಗಳಲ್ಲಿ ಮಾತ್ರವಲ್ಲದೆ ಗ್ರಾಮೀಣ ವಿಭಾಗದಲ್ಲೂ ಕೂಡಾ ಕಾರು ಖರೀದಿಯ ಭರಾಟೆ ಜೋರಾಗುತ್ತಿದೆ. ಇದಕ್ಕಾಗಿ ಹೊಸ ಯೋಜನೆಗಳನ್ನು ರೂಪಿಸುತ್ತಿರುವ ಫ್ರೆಂಚ್ ಆಟೋ ಉತ್ಪಾದನಾ ಕಂಪನಿಯಾದ ರೆನಾಲ್ಟ್ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೊಸ ಎಂಟ್ರಿ ಲೆವಲ್ ಕಾರುಗಳ ಬಿಡುಗಡೆಗೆ ಮುಂದಾಗಿದೆ.

ಸದ್ಯ ಮಾರುಕಟ್ಟೆಯಲ್ಲಿ ಕ್ವಿಡ್, ಟ್ರೈಬರ್, ಡಸ್ಟರ್ ಮತ್ತು ಕ್ಯಾಪ್ಚರ್ ಕಾರುಗಳನ್ನು ಮಾರಾಟ ಮಾಡುತ್ತಿರುವ ರೆನಾಲ್ಟ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಜೆಟ್ ಬೆಲೆಯಲ್ಲಿಯೇ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಇದಕ್ಕಾಗಿ ವಿವಿಧ ಹಂತದ ಮಾರುಕಟ್ಟೆ ಅಧ್ಯಯನ ನಡೆಸಿರುವ ರೆನಾಲ್ಟ್ ಕಂಪನಿಯು ಹೊಸ ಕಾರುಗಳ ಉತ್ಪನ್ನಗಳೊಂದಿಗೆ ಹೊಸದಾಗಿ 330 ಹೊಸ ಕಾರು ಮಾರಾಟ ಮಳಿಗೆಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ತೆರೆಯಲು ಸಿದ್ದವಾಗಿವೆ.

ಗ್ರಾಮೀಣ ವಿಭಾಗದ ಗ್ರಾಹಕರನ್ನೇ ಗುರಿಯಾಗಿಸಿ ವಿವಿಧ ಮಾದರಿಯ ಬಜೆಟ್ ಕಾರುಗಳನ್ನು ಸಿದ್ದಪಡಿಸುತ್ತಿರುವುದಾಗಿ ಸಂದರ್ಶನದೊಂದರಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಮಾರುತಿ ಸುಜುಕಿ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟ್ರೈಬರ್ ಮತ್ತು ಕ್ವಿಡ್ ಕಾರು ಮಾದರಿಗಳ ಮಾರಾಟ ಮೂಲಕ ಕಾರು ಮಾರಾಟದಲ್ಲಿ ಟಾಪ್ 6 ಸ್ಥಾನಕ್ಕೇರಿರುವ ರೆನಾಲ್ಟ್ ಕಂಪನಿಯು ಶೀಘ್ರದಲ್ಲೇ ಟ್ರೈಬರ್ ಟರ್ಬೋ ಪೆಟ್ರೋಲ್, ಕಿಗರ್ ಕಂಪ್ಯಾಕ್ಟ್ ಎಸ‌್‌ಯುವಿ, ಡಸ್ಟರ್ ಟರ್ಬೋ ಪೆಟ್ರೋಲ್ ಮತ್ತು ಕ್ಯಾಪ್ಟರ್ ಬಿಎಸ್-6 ಮಾದರಿಯು ಬಿಡುಗಡೆಯಾಗಿ ಸಿದ್ದವಾಗಿವೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ಡಸ್ಟರ್ ಟರ್ಬೋ ಪೆಟ್ರೋಲ್ ಮಾದರಿಯು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಗಮನಸೆಳೆಯಲಿದೆ.

ರೆನಾಲ್ಟ್ ಕಂಪನಿಯು ತನ್ನ ಹೊಸ ಕಾರುಗಳ ಉತ್ಪಾದನೆ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿದ್ದು, ಬಿಎಸ್-6 ಎಮಿಷನ್ ಜಾರಿ ನಂತರ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯ ಕಾರುಗಳನ್ನು ಮಾತ್ರವೇ ಮಾರಾಟ ಮಾಡುತ್ತಿರುವ ರೆನಾಲ್ಟ್ ಕಂಪನಿಯು ಗ್ರಾಮೀಣ ಭಾಗದ ಗ್ರಾಹಕರನ್ನು ಗುರಿಯಾಗಿ ಬಜೆಟ್ ಬೆಲೆಯ ಕಾರುಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಹೊಸ ಕಾರುಗಳು ಮಾರುತಿ ಸುಜುಕಿ ಕಾರುಗಳಿಗೆ ಮತ್ತಷ್ಟು ನೀಡಲಿವೆ ಎನ್ನಲಿವೆ.


Click it and Unblock the Notifications