ಟ್ರೈಬರ್ ಕಾರು ಮಾರಾಟದ ಮೂಲಕ ಭರ್ಜರಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್
ಫ್ರೆಂಚ್ ಕಾರು ಉತ್ಪಾದನಾ ಕಂಪನಿ ರೆನಾಲ್ಟ್ ಭಾರತದಲ್ಲಿನ ಜೂನ್ ಅವಧಿಯ ಕಾರು ಮಾರಾಟ ವರದಿಯನ್ನು ಬಿಡುಗಡೆ ಮಾಡಿದ್ದು, ಲಾಕ್‌ಡೌನ್ ಸಂಕಷ್ಟದ ನಡುವೆಯೂ 4,634 ಯುನಿಟ್ ಮಾಡುವ ಮೂಲಕ ಶೇ.163ರಷ್ಟು ಬೆಳವಣಿಗೆ ಕಂಡಿದೆ.

ಲಾಕ್‌ಡೌನ್ ಸಡಿಲಿಕೆ ನಂತರ ಕಾರು ಉತ್ಪಾದನೆ ಮತ್ತು ಮಾರಾಟ ಹೊಸ ಸುರಕ್ಷಾ ಮಾರ್ಗಸೂಚಿ ಆರಂಭಿಸಿರುವ ರೆನಾಲ್ಟ್ ಕಂಪನನಿಯು ಮೇ ಅವಧಿಗಿಂತ ಜೂನ್ ಅವಧಿಯ ಕಾರು ಮಾರಾಟದಲ್ಲಿ ಶೇ.163ರಷ್ಟು ಬೆಳವಣಿಗೆಯೊಂದಿಗೆ 4,634 ಯುನಿಟ್ ಮಾರಾಟ ಮಾಡಿದ್ದು, ಹೊಸದಾಗಿ ಬಿಡುಗಡೆ ಮಾಡಿರುವ ಟ್ರೈಬರ್ ಎಂಪಿವಿ ಕಾರು ಮಾದರಿಯು ರೆನಾಲ್ಟ್ ಕಂಪನಿಗೆ ಭಾರೀ ಲಾಭದಾಯಕ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಟ್ರೈಬರ್ ಜೊತೆಗೆ ಕ್ವಿಡ್ ಮತ್ತು ಡಸ್ಟರ್ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರು ಮಾರಾಟವು ಮತ್ತಷ್ಟು ಬೆಳವಣಿಗೆ ಕಾಣುವ ವಿಶ್ವಾಸದಲ್ಲಿವೆ.

ಜೊತೆಗೆ ರೆನಾಲ್ಟ್ ಕಂಪನಿಯು ಟ್ರೈಬರ್ ಕಾರು ಮಾದರಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿರುವುದು ಗ್ರಾಹಕರ ಆಯ್ಕೆ ಹೆಚ್ಚಿಸಿದ್ದು, ಮಿನಿ ಎಂಪಿವಿ ಆವೃತ್ತಿಯಾಗಿರುವ ರೆನಾಲ್ಟ್ ಟ್ರೈಬರ್ ಕಾರು ಸದ್ಯ ಬಹುಬೇಡಿಕೆ ಮಾದರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಪ್ಯಾಸೆಂಜರ್ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಕಾರು ಕಂಪನಿಗಳು ಕೂಡಾ ಎಎಂಟಿ ಆಯ್ಕೆ ಹೆಚ್ಚಿಸುತ್ತ ಹೊಸ ಯೋಜನೆಗಳಿಗೆ ಚಾಲನೆ ನೀಡಿವೆ. ಇದರಲ್ಲಿ ರೆನಾಲ್ಟ್ ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಎಂಜಿನ್ ಆಯ್ಕೆಗಳ ಹೆಚ್ಚಿಸುವುದರ ಜೊತೆಗೆ ಎಎಂಟಿ ಆಯ್ಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಇದೀಗ ಟ್ರೈಬರ್ ಮಾದರಿಯಲ್ಲೂ ಹೊಸ ಮಾದರಿಯನ್ನು ಬಿಡುಗಡೆ ಮಾಡಿದೆ.

ಟ್ರೈಬರ್ ಕಾರು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಂಡ ನಂತರ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.4.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 7.22 ಲಕ್ಷ ಬೆಲೆ ಪಡೆದುಕೊಂಡಿರುತ್ತದೆ. ಇದರಲ್ಲಿ ಎಎಂಟಿ ಮಾದರಿಯು ಆರಂಭಿಕವಾಗಿ ರೂ.6.18 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ.7.22 ಲಕ್ಷ ಬೆಲೆ ಹೊಂದಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಈ ಮೂಲಕ ಸಾಮಾನ್ಯ ಮ್ಯಾನುವಲ್ ಆವೃತ್ತಿಗಿಂತ ಆರಂಭಿಕವಾಗಿ ರೂ.4 ಸಾವಿರ ಮತ್ತು ಟಾಪ್ ಮಾದರಿಯಲ್ಲಿ ರೂ.40 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರುವ ಆಟೋಮ್ಯಾಟಿಕ್ ಆವೃತ್ತಿಯು ತಾಂತ್ರಿಕವಾಗಿ ಯಾವುದೇ ಬದಲಾವಣೆ ಹೊಂದಿಲ್ಲ.

ಬಿಎಸ್-6 ವೈಶಿಷ್ಟ್ಯತೆಯ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸಹಾಯದೊಂದಿಗೆ 72-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಇನ್ನು ಟ್ರೈಬರ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಎಸ್ ಮತ್ತು ಎರ್‌ಎಕ್ಸ್‌ಜೆಡ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಯಲ್ಲೂ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.


Click it and Unblock the Notifications








