ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

2019ರ ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಗೊಂಡಿದ್ದ ಟ್ರೈಬರ್ ಎಂಪಿವಿ ಕಾರು ರೆನಾಲ್ಟ್ ನಿರ್ಮಾಣದ ಕಾರುಗಳ ಮಾರಾಟದಲ್ಲಿ ನಂ.1 ಸ್ಥಾನಕ್ಕೇರಿದ್ದು, ಡಿಸೆಂಬರ್ ಅವಧಿಯಲ್ಲಿ 11,964 ಯುನಿಟ್ ಮಾರಾಟದ ಮೂಲಕ ಶೇ.65 ರಷ್ಟು ಮುನ್ನಡೆ ಕಾಯ್ದುಕೊಂಡಿದೆ.

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

2018ರ ಡಿಸೆಂಬರ್ ಅವಧಿಯಲ್ಲಿನ ಮಾರಾಟಕ್ಕಿಂತ 2019ರ ಡಿಸೆಂಬರ್ ಅವಧಿಯ ಕಾರು ಮಾರಾಟದಲ್ಲಿ ಶೇ.65ರಷ್ಟು ಮುನ್ನಡೆ ಕಾಯ್ದುಕೊಂಡಿದ್ದು, ಟ್ರೈಬರ್ ಎಂಪಿವಿ ಕಾರು ಮಾರಾಟವು ರೆನಾಲ್ಟ್ ಕಾರುಗಳ ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ತದನಂತರದ ಸ್ಥಾನದಲ್ಲಿರುವ ಕ್ವಿಡ್ ಫೇಸ್‌ಲಿಫ್ಟ್, ಡಸ್ಟರ್ ಫೇಸ್‌ಲಿಫ್ಟ್ ಕಾರುಗಳು ಸಾಧಾರಣ ಬೇಡಿಕೆ ಹೊಂದಿದ್ದು, ಇನ್ನೇರಡು ಕಾರು ಮಾದರಿಗಳಾದ ಕ್ಯಾಚ್ಚರ್ ಮತ್ತು ಲೊಡ್ಜಿ ಕಾರುಗಳು ಮಾರಾಟದಲ್ಲಿ ತೀವ್ರ ಹಿನ್ನಡೆ ಅನುಭವಿಸಿವೆ.

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಈ ಮೂಲಕ ರೆನಾಲ್ಟ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿರುವ ಟ್ರೈಬರ್ ಎಂಪಿವಿಯು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಇನ್ನು ಬಿಎಸ್-6 ನಿಯಮವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರು ಮಾದರಿಗಳು ಮಾರಾಟದಿಂದ ಸ್ಥಗಿತಗೊಳ್ಳಲಿವೆ. ಇದರಲ್ಲಿ ರೆನಾಲ್ಟ್ ನಿರ್ಮಾಣ ಕಾರು ಮಾದರಿಗಳು ಸಹ ಇದ್ದು, ಡೀಸೆಲ್ ಎಂಜಿನ್ ಕಾರುಗಳ ಆಯ್ಕೆಗೆ ಗುಡ್ ಬೈ ಹೇಳುತ್ತಿದೆ.

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಗೆ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು 2020ರಿಂದಲೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುತ್ತಿವೆ. ಡೀಸೆಲ್ ಎಂಜಿನ್ ವಾಹನಗಳು ಮಾಲಿನ್ಯ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಬಿಎಸ್-6 (ಭಾರತ್ ಸ್ಟೇಜ್) ನಿಯಮವು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಉತ್ಪಾದನೆಗೆ ಬ್ರೇಕ್ ಹಾಕಲಿದೆ.

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ರೆನಾಲ್ಟ್, ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಕೈಬಿಟ್ಟು ಪೆಟ್ರೋಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಆವೃತ್ತಿಗಳ ಉತ್ಪಾದನೆಯತ್ತ ಹೆಚ್ಚಿನ ಗಮನಹರಿಸಲು ಮುಂದಾಗಿವೆ.

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಈಗಾಗಲೇ ಮಾರುತಿ ಸುಜುಕಿ ಸಂಸ್ಥೆಯು ಅಧಿಕೃತವಾಗಿಯೇ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್‌ ಕಾರುಗಳ ಮಾರಾಟವನ್ನು 2020ರ ಏಪ್ರಿಲ್‌ನಿಂದ ಬಂದ್ ಮಾಡುವುದಾಗಿ ಹೇಳಿಕೊಂಡಿದ್ದು, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದೆ.

MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಇದೀಗ ರೆನಾಲ್ಟ್ ಕೂಡಾ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವುದಾಗಿ ಅಧಿಕೃತವಾಗಿಯೇ ಹೇಳಿಕೊಂಡಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಜ್ಜಾಗುತ್ತಿರುವ ನೆಕ್ಸ್ಟ್ ಜನರೇಷನ್ ಡಸ್ಟರ್ ಆವೃತ್ತಿಗಳಲ್ಲೂ ಡೀಸೆಲ್ ಎಂಜಿನ್ ಆಯ್ಕೆಗಳನ್ನು ತಗ್ಗಿಸಿ ಪೆಟ್ರೋಲ್ ಆವೃತ್ತಿಗಳ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆಯೆಂತೆ.

MOST READ: ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

MOST READ: ಬರಲಿದೆ ದುಬಾರಿ ಬೆಲೆಯ ಹಾರಾಡುವ ಬೈಕ್..!

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಸಂಸ್ಥೆಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.1.50 ಲಕ್ಷ ರೂ. 2 ಲಕ್ಷ ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ.

ಟ್ರೈಬರ್ ಎಂಪಿವಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದ ಟಾಪ್ ಲಿಸ್ಟ್‌ನಲ್ಲಿ ರೆನಾಲ್ಟ್..!

ಇದಕ್ಕಾಗಿಯೇ ರೆನಾಲ್ಟ್ ಸಂಸ್ಥೆಯು 1.5-ಲೀಟರ್ ಸಾಮರ್ಥದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈ ಕೈಬಿಟ್ಟು, ಹೊಸದಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು1.6-ಲೀಟರ್ ಇನ್-ಲೈನ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಉನ್ನತೀಕರಿಸಿ ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

Article Published On: Saturday, January 4, 2020, 18:23 [IST]
English summary
French car maker, Renault sold 11,964 cars in India December 2019.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+