ಬರೋಬ್ಬರಿ 50 ದಿನಗಳ ನಂತರ ಕಾರು ಮಾರಾಟ ಮಳಿಗೆಗಳ ಬಾಗಿಲು ತೆರೆದ ರೆನಾಲ್ಟ್
ರೆನಾಲ್ಟ್ ಇಂಡಿಯಾ ಕಂಪನಿಯು ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಕಾರು ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿರುವುದಲ್ಲದೆ ಮಾರಾಟ ಮಳಿಗೆಗಳನ್ನು ಸಹ ಪುನಾರಂಭಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಪ್ರಮಾಣದ ಸುರಕ್ಷಾ ಕ್ರಮಗಳನ್ನು ಜಾರಿಗೊಳಿಸಿದೆ.

ಕೇಂದ್ರ ಸರ್ಕಾರ ನೀಡಿರುವ ಹೊಸ ಸುರಕ್ಷಾ ಮಾರ್ಗಸೂಚಿಯ ಪ್ರಕಾರ, ಹಸಿರು ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನಾರಂಭಿಸಲು ಅನುಮತಿ ನೀಡಲಾಗುತ್ತಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ. ಹೊಸ ಮಾರ್ಗಸೂಚಿ ಅನ್ವಯ ಕಾರು ಉತ್ಪಾದನೆ ಮತ್ತು ಮಾರಾಟ ಶುರು ಮಾಡಿರುವ ರೆನಾಲ್ಟ್ ಕಂಪನಿಯು ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಮಾತ್ರವೇ ಕಾರು ಮಾರಾಟ ಮಳಿಗೆಗಳ ಬಾಗಿಲು ತೆರಿದಿದೆ.

ಸದ್ಯ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ಪಡೆದುಕೊಂಡಿರುವ ಆಟೋ ಕಂಪನಿಗಳು ಕೇವಲ ಶೇ.50ಕ್ಕಿಂತ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯವಾಗಿ ಬಳಕೆಮಾಡುತ್ತಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಈ ನಿಟ್ಟಿನಲ್ಲಿ ಹೊಸ ನಿಯಮ ಅನ್ವಯ ರೆನಾಲ್ಟ್ ಇಂಡಿಯಾ ಕೂಡಾ ಗರಿಷ್ಠ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದು, ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ವ್ಯವಹಾರಗಳ ಮೂಲಕ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಕಾರು ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದೆ.

ಕಾರು ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ಔಷಧಿಗಳನ್ನು ಸಿಂಪರಣೆಯ ನಂತರವೇ ಗ್ರಾಹಕರಿಗೆ ಉತ್ಪನ್ನಗಳನ್ನು ಹಸ್ತಾಂತರ ಮಾಡಲಿದ್ದು, ಈ ವೇಳೆ ಗ್ರಾಹಕರ ಮತ್ತು ಉದ್ಯೋಗಿಗಳಿಗೆ ಯಾವುದೇ ರೀತಿಯ ಸೋಂಕು ಹರಡುವಿಕೆಯನ್ನು ತಡೆಯಲು ಗರಿಷ್ಠ ಎಚ್ಚರಿಕೆ ಕೈಗೊಳ್ಳಲಾಗುತ್ತಿದೆ.

ಇನ್ನು ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದ್ದು, ಹೀಗಿರುವಾಗ ವ್ಯಾಪಾರ ಅಭಿವೃದ್ದಿಯು ಇದೀಗ ಒಂದು ಹೊಸ ಸವಾಲಾಗಿ ಪರಿಣಮಿಸಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಕಳೆದ ಒಂದೂವರೆ ತಿಂಗಳಿನಿಂದ ವಿಧಿಸಲಾಗಿರುವ ಲಾಕ್‌ಡೌನ್‌ನಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಪ್ರತಿಯೊಬ್ಬರಲ್ಲೂ ಕಾಡತೊಡಗಿದೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಹೀಗಿರುವಾಗ ಹೊಸ ವಾಹನ ಖರೀದಿಗೆ ಹಿಂದೇಟು ಹಾಕುತ್ತಿರುವ ಗ್ರಾಹಕರು ವಾಹನ ಖರೀದಿಯ ನಂತರ ಆರ್ಥಿಕ ಪರಿಸ್ಥಿತಿಯ ಮತ್ತಷ್ಟು ಕುಸಿತವಾದರೆ ಎನ್ನುವ ಭಯದಲ್ಲಿದ್ದು, ಕನಿಷ್ಠ ಮಟ್ಟದ ವಾಹನಗಳು ಸಹ ಮಾರಾಟವಾಗದಿರುವುದು ಆಟೋ ಕಂಪನಿಗಳಿಗೆ ಭಾರೀ ಪ್ರಮಾಣದ ನಷ್ಟದ ಭಯಕಾಡತೊಡಗಿದೆ.


Click it and Unblock the Notifications