ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

2019-20ರ ಹಣಕಾಸು ವರ್ಷದಲ್ಲಿ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಡಿಮೆ ಪ್ರಮಾಣದ ವಾಹನ ಮಾರಾಟ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ರೆನಾಲ್ಟ್ ಕಾರುಗಳ ಮಾರಾಟದಲ್ಲಿ ಮಾತ್ರವೇ ಅಚ್ಚರಿಯ ರೀತಿಯಲ್ಲಿ ಬೆಳವಣಿಗೆ ಕಂಡುಬಂದಿದೆ.

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

2019ರ ಏಪ್ರಿಲ್ 1ರಿಂದ 2020ರ ಮಾರ್ಚ್ ಅವಧಿಯೊಳಗೆ ಒಟ್ಟು 89,534 ಯುನಿಟ್ ಮಾರಾಟ ಮಾಡಿದ್ದು, 2018-19ರ ಹಣಕಾಸು ವರ್ಷದಲ್ಲಿ 79,654 ಯುನಿಟ್ ಮಾರಾಟಗೊಂಡಿದ್ದವು. ಈ ಮೂಲಕ 2019-20ರ ಹಣಕಾಸು ವರ್ಷದಲ್ಲಿ ಶೇ.12ರಷ್ಟು ಮುನ್ನಡೆ ಕಾಯ್ದುಕೊಂಡಿರುವ ರೆನಾಲ್ಟ್ ಕಂಪನಿಯು ಕಳೆದ ಅಗಸ್ಟ್ ಅವಧಿಯಲ್ಲಿ ಬಿಡುಗಡೆಗೊಳಿಸಿದ್ದ ಟ್ರೈಬರ್ ಮಿನಿ ಎಂಪಿವಿ ಮೂಲಕ ಉತ್ತಮ ಬೇಡಿಕೆ ದಾಖಲಿಸುತ್ತಿದೆ.

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಹಾಗೆಯೇ ಡಸ್ಟರ್ ಫೇಸ್‌ಲಿಫ್ಟ್ ಮತ್ತು ಕ್ವಿಡ್ ಫೇಸ್‌ಲಿಫ್ಟ್ ಕಾರುಗಳು ಸಹ ರೆನಾಲ್ಟ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳ ಮಾರಾಟದಲ್ಲಿ ರೆನಾಲ್ಟ್ ಕಂಪನಿಯು ಹಲವಾರು ಬದಲಾಣೆಗಳನ್ನು ಪರಿಚಯಿಸಿರುವುದು ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಇನ್ನು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ನಿಯಮ ಅನುಗುಣವಾಗಿ ಎಂಜಿನ್ ಆಯ್ಕೆಯಲ್ಲಿ ಬದಲಾವಣೆ ಪರಿಚಯಿಸಿರುವ ರೆನಾಲ್ಟ್ ಕಂಪನಿಯು ಹೊಸ ನಿಯಮ ಪಾಲನೆ ಸಾಧ್ಯವಿಲ್ಲದ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದೆ.

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೆ ಸಿದ್ದವಾಗಿರುವ ಡಸ್ಟರ್ ಆವೃತ್ತಿಯಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾತ್ರ ಪರಿಚಯಿಸಲಾಗಿದ್ದು, 1.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಸದ್ಯಕ್ಕೆ ಡಸ್ಟರ್ ಬಿಎಸ್-6 ಪೆಟ್ರೋಲ್‌ನಲ್ಲಿ ಈ ಹಿಂದಿನ 1.5-ಲೀಟರ್ ಎಂಜಿನ್ ಮಾದರಿಯನ್ನೇ ಮುಂದುವರಿಸಲಾಗುತ್ತಿದ್ದು, 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ 1.3-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಬಿಎಸ್-6 ಪೆಟ್ರೋಲ್ ಎಂಜಿನ್ ಹೊಂದಿರುವ ಡಸ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8.49 ಲಕ್ಷ ಬೆಲೆ ಹೊಂದಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರಿನ ಬೆಲೆಯಲ್ಲಿ ರೂ.10 ಸಾವಿರದಿಂದ ರೂ. 50 ಸಾವಿರದಷ್ಟು ಬೆಲೆ ಏರಿಕೆ ಮಾಡಲಾಗಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತೊಂದು ಹೈ ಎಂಡ್ ವೆರಿಯೆಂಟ್(ಆರ್‌ಎಕ್ಸ್‌ಜೆಡ್) ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ವೆರಿಯೆಂಟ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9.99 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿದ್ದ ಹೊಸ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ನ್ಯೂ ಜನರೇಷನ್ ಡಸ್ಟರ್‌ನಲ್ಲಿ ಅಳವಡಿಸಲು ನಿರ್ಧರಿಸಲಾಗಿದ್ದು, ಸದ್ಯಕ್ಕೆ ಈ ಹಿಂದಿನ ಎಂಜಿನ್ ಆಯ್ಕೆಯನ್ನೇ ಮುಂದುವರಿಸಲಾಗಿದೆ.

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಇದರೊಂದಿಗೆ ಟ್ರೈಬರ್ ಮಿನಿ ಎಂಪಿವಿ ಆವೃತ್ತಿಯಲ್ಲೂ ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿರುವ ರೆನಾಲ್ಟ್ ಕಂಪನಿಯು ಶೀಘ್ರದಲ್ಲೇ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆಗೆ ಎಎಂಟಿ ಗೇರ್‌ಬಾಕ್ಸ್ ಆಯ್ಕೆ ನೀಡುತ್ತಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡ ರೆನಾಲ್ಟ್

ಈ ಮೂಲಕ ಕಾಲಕಾಲಕ್ಕೆ ಗ್ರಾಹಕರ ಬೇಡಿಕೆಗಳಿಗೆ ತಕ್ಕಂತೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ರೆನಾಲ್ಟ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ಮಧ್ಯಮ ಗಾತ್ರದ ಕಾರುಗಳ ಮಾರಾಟ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

Most Read Articles

Kannada
English summary
Renault India Sales In FY 2019-20 Registers 12% Growth: Only Brand To Register Sales Growth. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X