ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ರೆನಾಲ್ಟ್ ಇಂಡಿಯಾ ಸಂಸ್ಥೆಯು ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸದಾಗಿ ಬಿಡುಗಡೆಯಾಗಿರುವ ಟ್ರೈಬರ್ ಮತ್ತು ಕ್ವಿಡ್ ಫೇಸ್‌ಲಿಫ್ಟ್ ಆವೃತ್ತಿಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿವೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

2019ರ ಫೆಬ್ರುವರಿ ಅವಧಿಯಲ್ಲಿ 6,241 ಯುನಿಟ್ ಮಾರಾಟ ಮಾಡಿದ್ದ ರೆನಾಲ್ಟ್ ಸಂಸ್ಥೆಯು 2020ರ ಫೆಬ್ರುವರಿ ಅವಧಿಯಲ್ಲಿ 8,784 ಯುನಿಟ್ ಮಾರಾಟಗೊಳಿಸುವ ಮೂಲಕ ಶೇ.40.7 ರಷ್ಟು ಮುನ್ನಡೆ ಕಾಯ್ದುಕೊಂಡಿದ್ದು, ಟ್ರೈಬರ್ ಮಿನಿ ಎಂಪಿವಿ ಮತ್ತು ಫೇಸ್‌ಲಿಫ್ಟ್ ಕ್ವಿಡ್ ಕಾರು ಮಾರಾಟದಲ್ಲಿ ಗಣನೀಯ ಬೇಡಿಕೆ ಪಡೆದುಕೊಳ್ಳುವ ಮೂಲಕ ಮಾರುತಿ ಸುಜುಕಿ, ಹ್ಯುಂಡೈ,ಕಿಯಾ ಮೋಟಾರ್ಸ್, ಮಹೀಂದ್ರಾ, ಟಾಟಾ ಮೋಟಾರ್ಸ್ ನಂತರ 6ನೇ ಅತಿ ದೊಡ್ಡ ಕಾರು ಮಾರಾಟ ಸಂಸ್ಥೆಯಾಗಿ ಹೊರಹೊಮ್ಮಿದೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಟ್ರೈಬರ್ ಎಂಪಿವಿ ಕಾರು ಮಾರಾಟವು ರೆನಾಲ್ಟ್ ಸಂಸ್ಥೆಯ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ತದನಂತರದ ಸ್ಥಾನದಲ್ಲಿರುವ ಕ್ವಿಡ್ ಫೇಸ್‌ಲಿಫ್ಟ್, ಡಸ್ಟರ್ ಫೇಸ್‌ಲಿಫ್ಟ್ ಕಾರುಗಳು ಕೂಡಾ ಉತ್ತಮ ಬೇಡಿಕೆ ಪಡೆದುಕೊಂಡಿವೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಈ ಮೂಲಕ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿರುವ ಟ್ರೈಬರ್ ಎಂಪಿವಿಯು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಮಾರಾಟಕ್ಕೆ ಲಭ್ಯವಾಗುತ್ತಿರುವುದು ರೆನಾಲ್ಟ್ ಮಾರಾಟ ಪ್ರಮಾಣವು ಹಲವು ಜನಪ್ರಿಯ ಕಾರುಗಳಿಗೆ ತೀವ್ರ ಪೈಪೋಟಿ ನೀಡುತ್ತಿದೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಇನ್ನು ಬಿಎಸ್-6 ನಿಯಮವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರು ಮಾದರಿಗಳು ಮಾರಾಟದಿಂದ ಸ್ಥಗಿತಗೊಳ್ಳಲಿವೆ. ಇದರಲ್ಲಿ ರೆನಾಲ್ಟ್ ನಿರ್ಮಾಣ ಕಾರು ಮಾದರಿಗಳು ಸಹ ಇದ್ದು, ಡೀಸೆಲ್ ಎಂಜಿನ್ ಕಾರುಗಳ ಆಯ್ಕೆಗೆ ಗುಡ್ ಬೈ ಹೇಳುತ್ತಿದೆ. ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಗೆ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಏಪ್ರಿಲ್ 1 ಪ್ರಮುಖ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುತ್ತಿವೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಡೀಸೆಲ್ ಎಂಜಿನ್ ವಾಹನಗಳು ಮಾಲಿನ್ಯ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಜಾರಿಗೆ ಬರುತ್ತಿರುವ ಬಿಎಸ್-6 (ಭಾರತ್ ಸ್ಟೇಜ್) ಎಮಿಷನ್ ನಿಯಮವು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಉತ್ಪಾದನೆಗೆ ಬ್ರೇಕ್ ಹಾಕಲಿದೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ರೆನಾಲ್ಟ್, ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಕೈಬಿಟ್ಟು ಪೆಟ್ರೋಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಆವೃತ್ತಿಗಳ ಉತ್ಪಾದನೆಯತ್ತ ಹೆಚ್ಚಿನ ಗಮನಹರಿಸಲು ಮುಂದಾಗಿವೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಮಾರುತಿ ಸುಜುಕಿ ಸಂಸ್ಥೆಯು ಈಗಾಗಲೇ ಅಧಿಕೃತವಾಗಿಯೇ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್‌ ಕಾರುಗಳ ಮಾರಾಟವನ್ನು 2020ರ ಏಪ್ರಿಲ್‌ನಿಂದಲೇ ಬಂದ್ ಮಾಡುವುದಾಗಿ ಹೇಳಿಕೊಂಡಿದ್ದು, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಇದೀಗ ರೆನಾಲ್ಟ್ ಕೂಡಾ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವುದಾಗಿ ಅಧಿಕೃತವಾಗಿಯೇ ಹೇಳಿಕೊಂಡಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಜ್ಜಾಗುತ್ತಿರುವ ನೆಕ್ಸ್ಟ್ ಜನರೇಷನ್ ಡಸ್ಟರ್ ಆವೃತ್ತಿಗಳಲ್ಲೂ ಕೂಡಾ ಡೀಸೆಲ್ ಎಂಜಿನ್ ಆಯ್ಕೆ ಸ್ಥಗಿತಗೊಳಿಸಿ ಪೆಟ್ರೋಲ್ ಆವೃತ್ತಿಗಳ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ.80 ಸಾವಿರದಿಂದ ರೂ.1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಸಂಸ್ಥೆಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.80 ಸಾವಿರದಿಂದ ಲಕ್ಷ ರೂ. 1.50 ಲಕ್ಷ ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ.

ಫೆಬ್ರುವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್

ಇದಕ್ಕಾಗಿಯೇ ರೆನಾಲ್ಟ್ ಸಂಸ್ಥೆಯು 1.5-ಲೀಟರ್ ಸಾಮರ್ಥದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈ ಕೈಬಿಟ್ಟು, ಹೊಸದಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು1.6-ಲೀಟರ್ ಇನ್-ಲೈನ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಉನ್ನತೀಕರಿಸಿ ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

Most Read Articles

Kannada
English summary
Renault Sales Registers Growth. Read in Kannada.
Story first published: Wednesday, March 4, 2020, 13:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X