ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ
ರೆನಾಲ್ಟ್ ಕಂಪನಿಯು ತನ್ನ ಬಹುನೀರಿಕ್ಷಿತ ಟ್ರೈಬರ್ ಆಟೋಮ್ಯಾಟಿಕ್ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಖರೀದಿಗಾಗಿ ಇಂದಿನಿಂದಲೇ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಪ್ಯಾಸೆಂಜರ್ ಕಾರು ಮಾದರಿಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಕಾರು ಕಂಪನಿಗಳು ಕೂಡಾ ಎಎಂಟಿ ಆಯ್ಕೆ ಹೆಚ್ಚಿಸುತ್ತ ಹೊಸ ಯೋಜನೆಗಳಿಗೆ ಚಾಲನೆ ನೀಡಿವೆ. ಇದರಲ್ಲಿ ರೆನಾಲ್ಟ್ ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಎಂಜಿನ್ ಆಯ್ಕೆಗಳ ಹೆಚ್ಚಿಸುವುದರ ಜೊತೆಗೆ ಎಎಂಟಿ ಆಯ್ಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಇದೀಗ ಟ್ರೈಬರ್ ಮಾದರಿಯಲ್ಲೂ ಹೊಸ ಮಾದರಿಯನ್ನು ಬಿಡುಗಡೆ ಮಾಡಿದೆ.

ಮಿನಿ ಎಂಪಿವಿ ಆವೃತ್ತಿಯಾಗಿರುವ ರೆನಾಲ್ಟ್ ಟ್ರೈಬರ್ ಕಾರು ಸದ್ಯ ಬಹುಬೇಡಿಕೆ ಮಾದರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವುದು ಮತ್ತಷ್ಟು ಬೇಡಿಕೆ ಹೆಚ್ಚಳವಾಗುವ ನೀರಿಕ್ಷೆಯಿದೆ.

ಮಿನಿ ಎಂಪಿವಿ ಆವೃತ್ತಿಯಾಗಿರುವ ರೆನಾಲ್ಟ್ ಟ್ರೈಬರ್ ಕಾರು ಸದ್ಯ ಬಹುಬೇಡಿಕೆ ಮಾದರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವುದು ಮತ್ತಷ್ಟು ಬೇಡಿಕೆ ಹೆಚ್ಚಳವಾಗುವ ನೀರಿಕ್ಷೆಯಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಟ್ರೈಬರ್ ಕಾರು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಂಡ ನಂತರ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.4.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 7.22 ಲಕ್ಷ ಬೆಲೆ ಪಡೆದುಕೊಂಡಿರುತ್ತದೆ. ಇದರಲ್ಲಿ ಎಎಂಟಿ ಮಾದರಿಯು ಆರಂಭಿಕವಾಗಿ ರೂ.6.18 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ.7.22 ಲಕ್ಷ ಬೆಲೆ ಹೊಂದಿದೆ.

ಈ ಮೂಲಕ ಸಾಮಾನ್ಯ ಮ್ಯಾನುವಲ್ ಆವೃತ್ತಿಗಿಂತ ಆರಂಭಿಕವಾಗಿ ರೂ.4 ಸಾವಿರ ಮತ್ತು ಟಾಪ್ ಮಾದರಿಯಲ್ಲಿ ರೂ.40 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರುವ ಆಟೋಮ್ಯಾಟಿಕ್ ಆವೃತ್ತಿಯು ತಾಂತ್ರಿಕವಾಗಿ ಯಾವುದೇ ಬದಲಾವಣೆ ಹೊಂದಿಲ್ಲ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಬಿಎಸ್-6 ವೈಶಿಷ್ಟ್ಯತೆಯ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸಹಾಯದೊಂದಿಗೆ 72-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಇನ್ನು ಟ್ರೈಬರ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಎಸ್ ಮತ್ತು ಎರ್‌ಎಕ್ಸ್‌ಜೆಡ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಯಲ್ಲೂ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಮುಂಬರುವ ಟ್ರೈಬರ್ ಆವೃತ್ತಿಯು ಅಧಿಕ ಬಿಎಚ್‌ಪಿ ಪ್ರೇರಣೆಯ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಸಹ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಬಜೆಟ್ ಬೆಲೆಯಲ್ಲಿ ಅಚ್ಚುಕಟ್ಟಾಗಿ 7 ಸೀಟರ್ ಸೌಲಭ್ಯವನ್ನು ಪಡೆದುಕೊಂಡಿರುವುದು ಬೇಡಿಕೆ ಹೆಚ್ಚಳಕ್ಕೆ ಪ್ರಮಖ ಕಾರಣವಾಗಿದೆ.


Click it and Unblock the Notifications