ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

ಮಿನಿ ಎಂಪಿವಿ ಆವೃತ್ತಿಯಾಗಿರುವ ರೆನಾಲ್ಟ್ ಟ್ರೈಬರ್ ಕಾರು ಸದ್ಯ ಬಹುಬೇಡಿಕೆ ಮಾದರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಶೀಘ್ರದಲ್ಲೇ ಹೊಸ ಕಾರು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಬಿಡುಗಡೆಗೊಳ್ಳುತ್ತಿದೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

ಸದ್ಯ ಮ್ಯಾನುವಲ್ ವರ್ಷನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಟ್ರೈಬರ್ ಕಾರು ಇದೀಗ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಇದೇ ತಿಂಗಳು 18ರಂದು ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ. ಇದಲ್ಲದೇ ಹೊಸ ಕಾರಿನಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಟರ್ಬೋ ಪೆಟ್ರೋಲ್ ಆವೃತ್ತಿ ಕೂಡಾ ಬಿಡುಗಡೆಯಾಗಲಿದ್ದು, ಮುಂಬರುವ ಕೆಲವೇ ತಿಂಗಳಿನಲ್ಲಿ ಟರ್ಬೋ ಪೆಟ್ರೋಲ್ ಕೂಡಾ ಮಾರುಕಟ್ಟೆ ಪ್ರವೇಶಿಸಲಿದೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

ಟ್ರೈಬರ್ ಕಾರು ಸದ್ಯ 1.0-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಅಧಿಕ ಪರ್ಫಾಮೆನ್ಸ್ ನೀಡಬಲ್ಲ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಜೊತೆಗೆ ಆಟೋಮ್ಯಾಟಿಕ್ ಆವೃತ್ತಿಗಾಗಿ ಹೆಚ್ಚಿನ ಸಂಖ್ಯೆಯ ಗ್ರಾಹಕರು ಬೇಡಿಕೆ ಸಲ್ಲಿಸುತ್ತಿದ್ದಾರೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

ಇದೀಗ ಬಿಡುಗಡೆಯಾಗಲಿರುವ ಆಟೋಮ್ಯಾಟಿಕ್ ಆವೃತ್ತಿಯು ತುಸು ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ನೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು 90-ಬಿಎಚ್‌ಪಿ ಉತ್ಪಾದನಾ ಶಕ್ತಿ ಹೊಂದಿದೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

ಇನ್ನು ಟ್ರೈಬರ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಎಸ್ ಮತ್ತು ಎರ್‌ಎಕ್ಸ್‌ಜೆಡ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು ರೂ. 6.49 ಲಕ್ಷ ಬೆಲೆ ಹೊಂದಿದೆ. ಇದೀಗ ಬಿಡುಗಡೆಯಾಗಲಿರುವ ಎಎಂಟಿ ಆವೃತ್ತಿಯು ತುಸು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

ಟ್ರೈಬರ್ ಕಾರಿನ ಟಾಪ್ ಎಂಡ್‌ನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ ಮತ್ತು ಇನ್ನುಳಿದ ಆವೃತ್ತಿಗಳಲ್ಲಿ 14-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

ಮೇ 18ರಂದು ಬಿಡುಗಡೆಯಾಗಲಿದೆ ರೆನಾಲ್ಟ್ ಟ್ರೈಬರ್ ಆಟೋಮ್ಯಾಟಿಕ್ ವರ್ಷನ್

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದಾಗಿದೆ.

More from DriveSpark

Article Published On: Sunday, May 10, 2020, 13:34 [IST]
English summary
According to the report, Renault is planning to launch Triber AMT model in India on May 18, 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+