Just In
- 1 hr ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 1 hr ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 1 hr ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 2 hrs ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋ ಎಕ್ಸ್ಪೋ 2020: ರೆನಾಲ್ಟ್ ಟ್ರೈಬರ್ ಎಎಂಟಿ ಅನಾವರಣ
ಎಂಟ್ರಿ ಲೆವಲ್ ಎಂಪಿವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ರೆನಾಲ್ಟ್ ಟ್ರೈಬರ್ ಕಾರು ಶೀಘ್ರದಲ್ಲೇ ಆಟೋಮ್ಯಾಟಿಕ್ ಆಯ್ಕೆಯನ್ನು ಪಡೆದುಕೊಳ್ಳಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ 2020 ಆಟೋ ಎಕ್ಸ್ಪೋದಲ್ಲಿ ಅನಾವರಣಗೊಂಡಿದೆ.
ರೆನಾಲ್ಟ್ ಟ್ರೈಬರ್ ಕಾರು ಮಾದರಿಯು ಸದ್ಯ ಸಾಮಾನ್ಯ ಪೆಟ್ರೋಲ್ ಮ್ಯಾನುವಲ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗುತ್ತಿದ್ದು, ಶೀಘ್ರದಲ್ಲೇ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಜೊತೆಗೆ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ಪಡೆದುಕೊಳ್ಳಲಿದೆ. ಕಳೆದ ಅಗಸ್ಟ್ 28 ರಂದು ಬಿಡುಗಡೆಯಾಗಿದ್ದ ಟ್ರೈಬರ್ ಕಾರು 1.0-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದು, ಅಧಿಕ ಪರ್ಫಾಮೆನ್ಸ್ ನೀಡಬಲ್ಲ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಜೊತೆಗೆ ಆಟೋಮ್ಯಾಟಿಕ್ ಆವೃತ್ತಿಗಾಗಿ ಹೆಚ್ಚಿನ ಸಂಖ್ಯೆಯ ಗ್ರಾಹಕರು ಬೇಡಿಕೆ ಸಲ್ಲಿಸುತ್ತಿದ್ದಾರೆ.
1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಸಹಾಯದೊಂದಿಗೆ 71-ಬಿಎಚ್ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
ಹೊಸದಾಗಿ ಪರಿಚಯಿಸಲಾಗುತ್ತಿರುವ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ನೊಂದಿಗೆ 95-ಬಿಎಚ್ಪಿ ಉತ್ಪಾದನಾ ಸಾಮಾರ್ಥ್ಯ ಹೊಂದಿದ್ದು, ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ. ಟ್ರೈಬರ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಆರ್ಎಕ್ಸ್ಇ, ಆರ್ಎಕ್ಸ್ಎಲ್, ಆರ್ಎಕ್ಸ್ಎಸ್ ಮತ್ತು ಎರ್ಎಕ್ಸ್ಜೆಡ್ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ.
ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು ರೂ. 6.49 ಲಕ್ಷ ಬೆಲೆ ಹೊಂದಿದ್ದು, ಇದೀಗ ಬಿಡುಗಡೆಯಾಗಲಿರುವ ಎಎಂಟಿ ಆವೃತ್ತಿಯು ತುಸು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.
ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್ಪ್ಲೇ, 8-ಇಂಚಿನ ಟಚ್ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.
ಟ್ರೈಬರ್ ಕಾರಿನ ಟಾಪ್ ಎಂಡ್ನಲ್ಲಿ 15-ಇಂಚಿನ ಅಲಾಯ್ ವೀಲ್ಹ್ ಮತ್ತು ಇನ್ನುಳಿದ ಆವೃತ್ತಿಗಳಲ್ಲಿ 14-ಇಂಚಿನ ಅಲಾಯ್ ವೀಲ್ಹ್ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.
7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದಾಗಿದೆ.