ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್ ಟ್ರೈಬರ್

ಕಳೆದ ಫೆಬ್ರುವರಿಯಲ್ಲಿ ಬಿಡುಗಡೆಗೊಂಡಿದ್ದ ಬಿಎಸ್-6 ಟ್ರೈಬರ್ ಆವೃತ್ತಿಯ ಬೆಲೆಯಲ್ಲಿ ಮತ್ತೆ ಹೆಚ್ಚಳ ಮಾಡಲಾಗಿದ್ದು, ಹೊಸ ಎಂಜಿನ್ ಜೋಡಣೆ ನಂತರ ಇದೀಗ ಮತ್ತೆ ರೂ.4 ಸಾವಿರದಷ್ಟು ಬೆಲೆ ಹೆಚ್ಚಿಸಲಾಗಿದೆ.

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

ಬಿಎಸ್-4 ಆವೃತ್ತಿಯನ್ನು ಹೊಸ ಎಂಜಿನ್‌ನೊಂದಿಗೆ ಬಿಡುಗಡೆ ಮಾಡಿದ್ದ ಸಂದರ್ಭದಲ್ಲಿ ರೂ.15 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದ ಟ್ರೈಬರ್ ಕಾರು ಮಾದರಿಯು ಇದೀಗ ಮತ್ತಷ್ಟು ದುಬಾರಿಯಾಗಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.4 ಸಾವಿರ ಹೆಚ್ಚಳ ಮಾಡಲಾಗಿದೆ. ಆದರೆ ಆರಂಭಿಕ ಮಾದರಿಯ ಬೆಲೆಯಲ್ಲಿ ಯಾವುದೇ ಬೆಲೆ ಬದಲಾವಣೆ ಮಾಡದ ರೆನಾಲ್ಟ್ ಕಂಪನಿಯು ಉತ್ಪಾದನಾ ವೆಚ್ಚ ನಿರ್ವಹಣೆಗಾಗಿ ಬೆಲೆ ಹೆಚ್ಚಳ ಮಾಡಿದೆ.

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

ಬೆಲೆ ಹೆಚ್ಚಳ ನಂತರ ಟ್ರೈಬರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.4.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 6.82 ಲಕ್ಷ ಬೆಲೆ ಹೊಂದಿದ್ದು, ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

ಇನ್ನು ಎಂಟ್ರಿ ಲೆವಲ್ ಎಂಪಿವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ರೆನಾಲ್ಟ್ ಟ್ರೈಬರ್ ಕಾರು ಮುಂದಿನ ಕೆಲವೇ ದಿನಗಳಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಬಿಡುಗಡೆಯಾಗುತ್ತಿದ್ದು, ಹೊಸ ಕಾರಿನಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಅಭಿವೃದ್ದಿಗೊಳಿಸಲಾಗಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

ಟ್ರೈಬರ್ ಕಾರು ಮಾದರಿಯು ಸದ್ಯ ಸಾಮಾನ್ಯ ಪೆಟ್ರೋಲ್ ಮ್ಯಾನುವಲ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗುತ್ತಿದ್ದು, ಶೀಘ್ರದಲ್ಲೇ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದುಕೊಳ್ಳಲಿದೆ. ಕಳೆದ ಅಗಸ್ಟ್ 28 ರಂದು ಬಿಡುಗಡೆಯಾಗಿದ್ದ ಟ್ರೈಬರ್ ಕಾರು 1.0-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಅಧಿಕ ಪರ್ಫಾಮೆನ್ಸ್ ನೀಡಬಲ್ಲ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಜೊತೆಗೆ ಆಟೋಮ್ಯಾಟಿಕ್ ಆವೃತ್ತಿಗಾಗಿ ಹೆಚ್ಚಿನ ಸಂಖ್ಯೆಯ ಗ್ರಾಹಕರು ಬೇಡಿಕೆ ಸಲ್ಲಿಸುತ್ತಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

ಟ್ರೈಬರ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಎಸ್ ಮತ್ತು ಆರ್‌ಎಕ್ಸ್‌ಜೆಡ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು,ಇದೀಗ ಬಿಡುಗಡೆಯಾಗಲಿರುವ ಎಎಂಟಿ ಆವೃತ್ತಿಯು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

ಟ್ರೈಬರ್ ಕಾರಿನ ಟಾಪ್ ಎಂಡ್‌ನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ ಮತ್ತು ಇನ್ನುಳಿದ ಆವೃತ್ತಿಗಳಲ್ಲಿ 14-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

MOST READ: ಲಾಕ್‌ಡೌನ್‌ನಿಂದ ಸಂಕಷ್ಟ: ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಬೆಲೆ ಹೆಚ್ಚಳ ಪಡೆದುಕೊಂಡ ರೆನಾಲ್ಟ್

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದಾಗಿದೆ.

More from DriveSpark

Article Published On: Wednesday, April 22, 2020, 16:49 [IST]
English summary
Renault Triber MPV Prices Increased In India Yet Again. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+