ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ರೆನಾಲ್ಟ್ ಕಾರುಗಳ ಬೇಡಿಕೆಯನ್ನೇ ಬದಲಿಸಿರುವ ಟ್ರೈಬರ್ ಮಿನಿ ಎಂಪಿವಿ ಆವೃತ್ತಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡಿದ್ದು, ಕಾರು ಮಾರಾಟದಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ರೆನಾಲ್ಟ್ ಸಂಸ್ಥೆಗೆ ಮರುಜೀವ ನೀಡಿದೆ ಎನ್ನಬಹುದು.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

2019ರ ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಗೊಂಡಿದ್ದ ಟ್ರೈಬರ್ ಎಂಪಿವಿ ಕಾರು ರೆನಾಲ್ಟ್ ನಿರ್ಮಾಣದ ಕಾರುಗಳ ಮಾರಾಟದಲ್ಲಿ ನಂ.1 ಸ್ಥಾನಕ್ಕೇರಿದ್ದು, ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಕಾರು ಮಾರಾಟ ದಾಖಲಿಸಿರುವ ಮೂಲಕ ರೆನಾಲ್ಟ್ ಸಂಸ್ಥೆಯು ದೇಶದ 5ನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿದೆ. 2018ರ ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ 2019ರ ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.65ರಷ್ಟು ಮುನ್ನಡೆ ಕಾಯ್ದುಕೊಂಡಿರುವ ರೆನಾಲ್ಟ್ ಸಂಸ್ಥೆಯು ಟ್ರೈಬರ್ ಮಿನಿ ಎಂಪಿವಿ ಮಾರಾಟದಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ಈ ಮೂಲಕ ರೆನಾಲ್ಟ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿರುವ ಟ್ರೈಬರ್ ಎಂಪಿವಿಯು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿರುವ ಟ್ರೈಬರ್ ಕಾರು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ಹಲವು ವಿಭಿನ್ನ ವೈಶಿಷ್ಟಯತೆಗಳನ್ನು ಹೊಂದಿದ್ದು, 4 ಮೀಟರ್‌ನಲ್ಲಿಯೇ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವನ್ನು ಸಂಪೂರ್ಣ ಬದಲಾವಣೆಗೊಳಿಸಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಟ್ರೈಬರ್ ಎಂಪಿವಿ ಕಾರು ಕೂಡಾ ಹೊಸ ತಂತ್ರಜ್ಞಾನದಡಿಯಲ್ಲೇ ಅಭಿವೃದ್ಧಿಗೊಳಿಸಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಈ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ವಿಭಿನ್ನ ಎನ್ನಿಸುವ ಹೊಸ ಕಾರು ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಸ್, ಪವರ್ ವಿಂಡೋ, ಕೀ ಲೆಸ್ ಎಂಟ್ರಿ, ಮೂರು ಸಾಲುಗಳಲ್ಲೂ ಎಸಿ ವೆಂಟ್ಸ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮೊಬೈಲ್ ಫೋನ್ ಚಾರ್ಜ್ ಸಾಕೆಟ್‌ ಮತ್ತು ರಿಯರ್ ವಾಷ್ ವೈಪರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ಟ್ರೈಬರ್ ವೈಶಿಷ್ಟ್ಯತೆಗಳು

ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ಇನ್ನು ಹೊಸ ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ಆಸನ ಸೌಲಭ್ಯ

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದು. ಹೀಗಾಗಿ ಮೂರನೇ ಸಾಲನ್ನು ಮಡಿಕೆ ಮಾಡಿದ್ದಲ್ಲಿ 625-ಲೀಟರ್‌ನಷ್ಟು ಸ್ಥಳಾವಕಾಶ ಮಾಡಿಕೊಳ್ಳಬಹುದಾಗಿದ್ದು, ಬೇಡವಾದಲ್ಲಿ 84-ಲೀಟರ್‌ನಷ್ಟು ಸ್ಥಳಾವಕಾಶ ಸಿಗಲಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ಎಂಜಿನ್ ಸಾಮರ್ಥ್ಯ

ಸದ್ಯಕ್ಕೆ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿದೆ.

ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಯುನಿಟ್ ಮಾರಾಟಗೊಂಡ ರೆನಾಲ್ಟ್ ಟ್ರೈಬರ್

ಸುರಕ್ಷಾ ಸೌಲಭ್ಯಗಳು

ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.

Article Published On: Wednesday, January 8, 2020, 14:37 [IST]
English summary
Renault Triber MPV sales have crossed 20,000 units in India since its launch. Read more in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+