Just In
- 5 hrs ago
ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ
- 7 hrs ago
ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್
- 7 hrs ago
ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ್ರ
- 9 hrs ago
ಒಂದೂವರೆ ವರ್ಷದಲ್ಲಿ ದಾಖಲೆ ಸಂಖ್ಯೆಯ ಕಾರುಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್
Don't Miss!
- News
ಹಿರಿಯೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಹೊಸ ರೂಪ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Sports
ಅಪರೂಪದ ಖಾಯಿಲೆಗೆ ಭಾರತದ ಮಾಜಿ ಗೋಲ್ ಕೀಪರ್ ಪ್ರಶಾಂತ ಬಲಿ
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮರಳುಗಾಡಿನಲ್ಲಿ ಅದ್ಭುತ ಪ್ರದರ್ಶನ ತೋರಿದ ರೋಲ್ಸ್ ರಾಯ್ಸ್ ಕಲಿನಿಯನ್ ಎಸ್ಯುವಿ
ರೋಲ್ಸ್ ರಾಯ್ಸ್ ಕಂಪನಿಯು ಜಾಗತಿಕ ಮಾರುಕಟ್ಟೆಗಳಲ್ಲಿ ತನ್ನ ಬಹುನೀರಿಕ್ಷಿತ ಕಲಿನಿಯನ್ ಕಾರನ್ನು ಮಾರಾಟಗೊಳಿಸುತ್ತಿದ್ದು, ಕಂಪನಿಯ ಮೊದಲ ಎಸ್ಯುವಿ ಕಾರು ಮಾದರಿಯಾಗಿರುವ ಕಲಿನಿಯನ್ ಕಾರು ಮಾದರಿಯು ಹಲವಾರು ವಿಶೇಷತೆಗಳಿಗೆ ಕಾರಣವಾಗಿದೆ.

ಐಷಾರಾಮಿ ಸೆಡಾನ್ ಕಾರುಗಳ ನಿರ್ಮಾಣದಲ್ಲಿ ಹೆಸರುವಾಸಿವಾಗಿರುವ ರೋಲ್ಸ್ ರಾಯ್ಸ್ ಸಂಸ್ಥೆಯು ಇದೇ ಮೊದಲ ಬಾರಿಗೆ ಎಸ್ಯುವಿ ಕಾರು ಮಾದರಿಗಳ ನಿರ್ಮಾಣಕ್ಕೆ ಕೈಹಾಕಿದ್ದು, ಕೇವಲ ಐಷಾರಾಮಿ ಅಷ್ಟೇ ಅಲ್ಲದೇ ಆಪ್ ರೋಡ್ ವೈಶಿಷ್ಟ್ಯತೆಗಳನ್ನು ಹೊತ್ತು ಬಂದಿರುವ ಕಲಿನಿಯನ್ ಕಾರು ನೂರಕ್ಕೂ ಹೆಚ್ಚು ವಿನೂತನ ಸೌಲಭ್ಯಗಳೊಂದಿಗೆ ಜಗತ್ತಿನಲ್ಲಿ ಇದುವರೆಗೆ ಉತ್ಪಾದನೆಯಾದ ಇತರೆ ಐಷಾರಾಮಿ ಎಸ್ಯುವಿ ಕಾರುಗಳಿಂತಲೂ ಇದು ವಿಶೇಷ ಎನ್ನಿಸಲಿದೆ.

ಕಲಿನಿಯನ್ ಕಾರುಗಳು 5-ಸೀಟರ್ ಸೌಲಭ್ಯ ಹೊಂದಿರುವ ಎಸ್ಯುವಿ ಮಾದರಿಯಾಗಿದ್ದು, 22 ಇಂಚಿನ ಚಕ್ರಗಳನ್ನು ಹೊಂದಿದೆ. ಜೊತೆಗೆ ಅಲ್ಯೂಮಿನಿಯಂ ಪ್ಯಾಟ್ಫಾರ್ಮ್ ಮೇಲೆ ಸಿದ್ದವಾಗಿರುವ ಕಲಿನಿಯನ್ ಕಾರು ಫ್ಯಾಂಟಮ್ ಮಾದರಿಯಲ್ಲೇ ಎಂಜಿನ್ ಡಿಸೈನ್ ಪಡೆದಿದೆ.

ಜೊತೆಗೆ ಆಧುನಿಕ ಐಷಾರಾಮಿ ಎಸ್ಯುವಿ ಎಂದೇ ಬಿಂಬಿತವಾಗಿರುವ ಕಲಿನಿಯನ್ ಕಾರುಗಳು ಸೈಡ್ ಪ್ರೋಫೈಲ್ನಲ್ಲಿ ಬಲವಾದ ಭುಜ ರೇಖೆಗಳನ್ನು ಹೊಂದಿದ್ದು, ಇದು ಈ ಹಿಂದೆ 1930ರಲ್ಲಿ ನಿರ್ಮಾಣವಾಗಿದ್ದ 'ಡಿ ಬ್ಲ್ಯಾಕ್' ಕಾರಿನ ಕೆಲವು ವಿನ್ಯಾಸಗಳನ್ನು ಸಹ ಇದರಲ್ಲಿ ಎರವಲು ಪಡೆದುಕೊಳ್ಳಲಾಗಿದೆ.

ಕಲಿನಿಯನ್ ಕಾರು 6.75-ಲೀಟರ್(6,750 ಸಿಸಿ) ಟ್ವಿನ್ ಟರ್ಬೋ ವಿ12 ಪೆಟ್ರೋಲ್ ಎಂಜಿನ್ ಹೊಂದಿದ್ದು, 571-ಬಿಎಚ್ಪಿ ಮತ್ತು 650-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು. ಹೀಗಾಗಿ ಕಾರಿನ ವೇಗವನ್ನು ಪ್ರತಿ ಗಂಟೆಗೆ 250 ಕಿ.ಮೀ ಟಾಪ್ ಸ್ಪೀಡ್ ಇರಿಸಲಾಗಿದೆ. ಇದಲ್ಲದೇ ರೋಲ್ಸ್ ರಾಯ್ಸ್ ಸಂಸ್ಥೆಯು ಮೊದಲ ಬಾರಿಗೆ ಕಲಿನಿಯನ್ ಕಾರುಗಳನ್ನು ಆಲ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ ಬಿಡುಗಡೆ ಮಾಡಿದ್ದು, ಆಪ್ ರೋಡ್ಗಳಲ್ಲೂ ಇದು ತನ್ನ ಕೌಶಲ್ಯ ಪ್ರದರ್ಶನ ಮಾಡಬಲ್ಲದು.

ಹೊಸ ಕಾರಿನಲ್ಲಿ ವಿವಿಧ ರೀತಿಯ ಡ್ರೈವಿಂಗ್ ಮೊಡ್ಗಳನ್ನು ಒದಗಿಸಲಾಗಿದ್ದು, ಇತ್ತೀಚೆಗೆ ದುಬೈನಲ್ಲಿರುವ ಮರಳುಗಾಡಿನಲ್ಲಿ ಹೊಸ ಕಾರಿನ ಆಫ್ ಕೌಶಲ್ಯವನ್ನು ಪ್ರದರ್ಶಿಸಲಾಗಿದೆ. ಸಾಮಾನ್ಯ ರಸ್ತೆಗಳಲ್ಲಿ ಮಾತ್ರವಲ್ಲ ಆಫ್ ರೋಡ್ಗಳಲ್ಲೂ ಅದ್ಭುತ ಪ್ರದರ್ಶನ ನೀಡುವ ಹೊಸ ಕಾರು ಸ್ಯಾಂಡ್ ಮೋಡ್ನಲ್ಲಿ ವಿವಿಧ ಕೌಶಲ್ಯಗಳನ್ನು ಪ್ರದರ್ಶಿಸಿದೆ.
ಜೊತೆಗೆ ಆಧುನಿಕ ಒಳವಿನ್ಯಾಸದೊಂದಿಗೆ ಸಿದ್ದವಾಗಿರುವ ರೋಲ್ಸ್ ರಾಯ್ಸ್ ಕಲಿನಿಯನ್ ಕಾರಿನಲ್ಲಿ ಬಳಕೆ ಮಾಡಿರುವ ಐಷಾರಾಮಿ ವೈಶಿಷ್ಟ್ಯತೆಗಳು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಕಾರಿನ ಒಳಗೆ ಪ್ರವೇಶ ಮಾಡಿದ್ದಲ್ಲಿ ಸ್ಪರ್ಗಕ್ಕೆ ಮೂರೇ ಗೇಣು ಎನ್ನುವ ಭಾವನೆ ಮೂಡದೇ ಇರಲಾರದು.

5-ಸೀಟರ್ ಸಾಮರ್ಥ್ಯವಿರುವ ಈ ಕಾರಿನಲ್ಲಿ ಪ್ರತಿ ಸೀಟುಗಳು ಸಹ ಪ್ರತ್ಯೇಕವಾಗಿ ಎಲೆಕ್ಟ್ರಿಕ್ ಆಪರೇಟ್ ಸೌಲಭ್ಯ ಹೊಂದಿದ್ದು, ನಿಮಗೆ ಬೇಕಾದ ರೀತಿಯಲ್ಲಿ ಹೋಂದಾಣಿಕೆ ಮಾಡಿಕೊಳ್ಳಬಹುದು. ಜೊತೆಗೆ ಬೆರಳುಗಳ ತುದಿಯಲ್ಲೇ ನಿಯಂತ್ರಣ ಮಾಡಬಹುದಾದ ಇನ್ಪೋಟೈನ್ಮೆಂಟ್ ಮತ್ತು ಎಂಟರ್ಟೈನ್ಮೆಂಟ್ ಸೌಲಭ್ಯ ಇದಲ್ಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಕಲಿನಿಯನ್ ಕಾರು ಮಾದರಿಯನ್ನು ರೋಲ್ಸ್ ರಾಯ್ಸ್ ಕಂಪನಿಯು ತ್ರಿ ಬಾಕ್ಸ್ ಎಸ್ಯುವಿ ಎಂದು ನಮೂದಿಸಿದ್ದು, ಇದಕ್ಕೆ ಕಾರಣ ಈ ಕಾರಿನಲ್ಲಿ ಎಂಜಿನ್ ರೂಂ, ಕ್ಯಾಬಿನ್ ಮತ್ತು ಬೂಟ್ ಎಂದು ಮೂರು ವಿಭಾಗಗಳನ್ನು ಪ್ರತ್ಯೇಕಿಸಿದೆ. ಇದನ್ನೇ ತ್ರಿ ಬಾಕ್ಸ್ ಎಸ್ಯುವಿ ಎನ್ನಲಾಗಿದೆ.

ಇದು ಇತರೆ ಎಸ್ಯುವಿಗಳಲ್ಲಿ ಎಂಜಿನ್ ರೂಂ ಮತ್ತು ಕ್ಯಾಬಿನ್ಗಳು ಮಾತ್ರ ಇರುತ್ತವೆ. ಕ್ಯಾಬಿನ್ಗಳ ಒಳಗೆಯೇ ಬೂಟ್ ಸ್ಪೆಸ್ ಇರುತ್ತದೆ. ಹೀಗಾಗಿ ಅವು ಟು ಬಾಕ್ಸ್ ಎಸ್ಯುವಿಗಳಾಗಿವೆ. ಹಾಗೆಯೇ ಎಸ್ಯುವಿ ಹೆಸರಿಗೆ ತಕ್ಕಂತೆ ಅತಿ ಎತ್ತರದ ಬಾಡಿ ಕಿಟ್ ಹೊಂದಿರುವ ಕಲಿನಿಯನ್ ಕಾರು 5,341ಎಂಎಂ ಉದ್ದ, 2,164ಎಂಎಂ ಅಗಲ, 1,834ಎಂಎಂ ಎತ್ತರದೊಂದಿಗೆ 3,295ಎಂಎಂ ವೀಲ್ಹ್ ಬೆಸ್ ಸೌಲಭ್ಯ ಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಹೊಸ ಕಾರು ಭಾರತೀಯ ಮಾರುಕಟ್ಟೆಯಲ್ಲೂ ನೂರಕ್ಕೂ ಹೆಚ್ಚು ಯುನಿಟ್ಗೆ ಬುಕ್ಕಿಂಗ್ ದಾಖಲಾಗಿದ್ದು, ಹೊಸ ಕಾರು ಭಾರತದಲ್ಲಿ ಎಕ್ಸ್ಶೋರೂಂ ಪ್ರಕಾರ ರೂ.6.95 ಕೋಟಿ ಬೆಲೆಯೊಂದಿಗೆ ಆರ್ಕಿಟೆಕ್ಚರ್ ಆಫ್ ಲಗ್ಷುರಿ ಕಾರು ಉತ್ಪಾದನಾ ಪ್ಲ್ಯಾಟ್ಫಾರ್ಮ್ ಅಡಿಯಲ್ಲಿ ಸಿದ್ದಗೊಳ್ಳುತ್ತಿದೆ.