ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ರಾಯಲ್ ಎನ್‍‍ಫೀಲ್ಡ್ ಕಂಪನಿಯು ತನ್ನ ಕ್ಲಾಸಿಕ್ 350 ಬೈಕ್ ಅನ್ನು ಬಿ‍ಎಸ್ 6 ಎಂಜಿನ್‍‍ನೊಂದಿಗೆ ಇತ್ತೀಚಿಗೆ ಬಿಡುಗಡೆಗೊಳಿಸಿತ್ತು. ಇನ್ನು ರಾಯಲ್‍ ಎನ್‍‍ಫೀಲ್ಡ್ ಕಂಪನಿಯ ಜನಪ್ರಿಯ ಮಾದರಿಗಳಾದ ಥಂಡರ್‍‍‍ಬರ್ಡ್, ಬುಲೆಟ್, ಹಿಮಾಲಯನ್ ಮತ್ತು 650 ಟ್ವಿನ್ ಬೈಕ್‍‍ಗಳನ್ನು ಬಿಎಸ್-6 ಎಂಜಿನ್‍‍ನೊಂದಿಗೆ ಶೀಘ್ರದಲ್ಲೇ ಬಿಡುಗಡೆಗೊಳಿಸಲಿವೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟೆರ್ 650 ಬಿಎಸ್-4 ಮಾದರಿಗಳ ಯುನಿ‍‍ಟ್‍ಗಳು ಎಲ್ಲಾ ಡೀಲರ್‍‍ಗಳ ಬಳಿ ಬಹುತೇಕ ಮಾರಾಟವಾಗಿದೆ. ಈ ಹಿನ್ನಲೆಯಲ್ಲಿ ಹೊಸ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕಿನ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಬಿಎಸ್-6 ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟೆರ್ 650 ಬೈಕ್‍‍ಗಾಗಿ ರೂ.10 ಸಾವಿರ ಪಾವತಿಸಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದುದಾಗಿದೆ.ಆದರೆ ಕೆಲವು ವರದಿಗಳ ಪ್ರಕಾರ ಆಯ್ದ ಡೀಲರ್‍‍‍ಗಳ ಬಳಿ ಮಾತ್ರ ಬುಕ್ಕಿಂಗ್ ಪ್ರಾರಂಭವಾಗಿರುವುದು.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಕಂಪನಿಯು ಬಿಎಸ್-6 ಇಂಟರ್‍‍ಸೆಪ್ಟೆರ್ 650 ಬೈಕ್ ಅನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ. ಹೊಸ ಬಿಎಸ್-6, ಇಂಟರ್‍‍ಸೆಪ್ಟೆರ್ 650 ಬೈಕಿನಲ್ಲಿ ಕಾಸ್ಮೆಟಿಕ್ ನವೀಕರಣಗಳನ್ನು ಮಾಡಿಲ್ಲವಾದರೂ, ರಾಯಲ್ ಎನ್‍‍ಫೀಲ್ಡ್ ಮಾಲೀಕರಿಗೆ ಬೇಕಾದರೆ ಡೀಲರ್‍‍‍ಗಳು ಮಾರ್ಪಾಡು ಮಾಡಿ ಕೊಡುತ್ತಾರೆಂಬ ನಿರೀಕ್ಷೆಗಳಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಬೈಕಿನ ಇಂಜಿನ್ ಸಾಮರ್ಥ್ಯ ಮತ್ತು ಹಲವಾರು ವೈಶಿಷ್ಟ್ಯಗಳಿಂದ ಕೂಡಿರುವ ಕಾರಣ ದೇಶಿಯ ಮಾರುಕಟ್ಟೆ ಗ್ರಾಹಕರು ಈ ಬೈಕ್‍‍ಗೆ ಫಿದಾ ಆದರು. ಈ ಬೈಕ್ ಪ್ಯಾರೆಲೆಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇಂಟರ್‍‍ಸೆಪ್ಟೆರ್ 650 ಬೈಕ್ 649 ಸಿಸಿ ಏರ್/ಆಯಿಲ್ -ಕೂಲ್ಡ್ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 47 ಬಿ‍ಹೆಚ್‍ಪಿ ಪವರ್ ಮತ್ತು 52 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಎಂಜಿನ್‍‍ನೊಂದಿಗೆ ಸ್ಟ್ಯಾಂಡರ್ಡ್ ಅಸಿಸ್ಟ್ ಕ್ಲಚ್‍‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟೆರ್ 650 ಬೈಕನ ಮೂಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿವೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇಂಟರ್‍‍ಸೆಪ್ಟರ್ 650 ಬೈಕಿನ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ಕ್ರಮವಾಗಿ ರೂ.2.51 ಲಕ್ಷಗಳಾಗಿದೆ. ಈ ಬೈಕ್ ಆಧುನಿಕ ಕ್ಲಾಸಿಕ್ ಲುಕ್ ಅನ್ನು ಹೊಂದಿವೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇಂಟರ್‍‍ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ. ಈ ಬೈಕ್ 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್, 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್‍‍ಗಳನ್ನು ಹೊಂದಿವೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ರಾಯಲ್ ಎನ್‍ಫೀಲ್ಡ್ ಕಂಪನಿಯ ಹಳೆಯ ತಲೆಮಾರಿನ ಬೈಕ್‍‍ಗಳಾದ ದಿ ಕ್ಲಾಸಿಕ್, ಬುಲೆಟ್ ಮತ್ತು ಥಂಡರ್ ಬರ್ಡ್ ಇವುಗಳು ಹೊಸ ಅಲೆಯನ್ನು ಸೃಷ್ಟಿಸಿದ ಬೈಕ್‍‍ಗಳಾಗಿವೆ. ಕಂಪನಿಯು ಅದೇ ಹಳೆಯ ಪ್ರಸಿದ್ದಿಯನ್ನು ಪಡೆಯಲು ಏನಾದರೂ ಮಾಡಬೇಕಾಗಿದೆ ಎಂದು ಯೋಚಿಸಿ ಹೊಸ ಇಂಟರ್‍‍ಸೆಪ್ಟರ್ 650 ಬೈಕ್ ಅನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲು ನಿರ್ಧರಿಸಿದೆ.

Most Read Articles

Kannada
English summary
Go Book Your BS6 Royal Enfield Interceptor. Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X