ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಎಲೆಕ್ಟ್ರಿಕ್ ವಾಹನಗಳಿಗೆ ಪ್ರಪಂಚದಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ಎಲ್ಲಾ ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಘೋಷಿಸುತ್ತಿವೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಗ್ರಾಹಕರು ಪೆಟ್ರೋಲ್, ಡೀಸೆಲ್ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಬಹುದು.

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಇಂಗ್ಲೆಂಡ್ ಸರ್ಕಾರವು ಶೀಘ್ರದಲ್ಲೇ ಹೊಸ ಕಾರ್ ಸ್ಕ್ರಾಪೇಜ್ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ. ವರದಿಗಳ ಪ್ರಕಾರ ಈ ಯೋಜನೆಯಡಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳನ್ನು ವಿನಿಮಯ ಮಾಡಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಮೊತ್ತವನ್ನು ಮರಳಿಸಲಾಗುವುದು.

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪೆಟ್ರೋಲ್ ಬದಲಿಗೆ ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವವರಿಗೆ 6000 ಪೌಂಡ್ (ಸುಮಾರು ರೂ.5.7 ಲಕ್ಷ ರೂಪಾಯಿ) ಸಬ್ಸಿಡಿ ನೀಡಲು ಚಿಂತನೆ ನಡೆಸಿದ್ದಾರೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚಾಗುವ ಸಾಧ್ಯತೆಗಳಿವೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಎಲೆಕ್ಟ್ರಿಕ್ ವಾಹನಗಳ ಮಾರಾಟದ ಜೊತೆಗೆ, ಕೋವಿಡ್ -19ನಿಂದ ತತ್ತರಿಸಿರುವ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲು ಈ ಹೊಸ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಲಾಕ್‌ಡೌನ್‌ನಿಂದಾಗಿ ವಾಹನ ವಾಹನಗಳ ಮಾರಾಟವು ತೀವ್ರವಾಗಿ ಕುಸಿದಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಜನರು ಸ್ವಂತ ವಾಹನಗಳನ್ನು ಬಳಸಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವಂತೆ ಉತ್ತೇಜಿಸಲು ಇಂಗ್ಲೆಂಡ್ ಸರ್ಕಾರವು ಮುಂದಾಗಿದೆ. ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್‌ರವರು ಜುಲೈ 6ರಂದು ಹೊಸ ಕಾರ್ ಸ್ಕ್ರ್ಯಾಪ್ ಯೋಜನೆಯನ್ನು ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಭಾರತದಲ್ಲಿಯೂ ಸಹ ವಾಹನ ಸ್ಕ್ರ್ಯಾಪಿಂಗ್ ನೀತಿಯನ್ನು ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು. ಈ ನೀತಿಯಿಂದ ವಾಹನ ತಯಾರಕ ಕಂಪನಿಗಳಿಗೆ ಪ್ರಯೋಜನವಾಗಲಿದೆ. ಕೇಂದ್ರ ಗೃಹ ಕಾರ್ಯದರ್ಶಿಗಳ ಸಹಯೋಗದಲ್ಲಿ ಈ ನೀತಿಯನ್ನು ಸಿದ್ಧಪಡಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೊಸ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ, ನೋಂದಣಿ ಶುಲ್ಕದ ಮೇಲೆ ವಿನಾಯಿತಿ ಹಾಗೂ ಚಾರ್ಜರ್‌ಗಳ ಜಿಎಸ್‌ಟಿ ದರವನ್ನು ಕಡಿಮೆಗೊಳಿಸಲಾಗಿದೆ.

Most Read Articles

Kannada
English summary
Rs5 Lakh subsidy offerd to EV customers in UK. Read in Kannada.
Story first published: Monday, June 15, 2020, 16:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X