ಆಟೋ ಎಕ್ಸ್‌ಪೋ 2020: ಜನರ ಗಮನಸೆಳೆದ ಕಾರುಗಳಿವು
2020ರ ಆಟೋ ಎಕ್ಸ್‌ಪೋ ಗ್ರೇಟರ್ ನೋಯ್ಡಾದಲ್ಲಿ ನಡೆಯುತ್ತಿದೆ. ಈ ಆಟೋ ಎಕ್ಸ್ ಪೋದಲ್ಲಿ ಹಲವಾರು ಜನಪ್ರಿಯ ವಾಹನ ಉತ್ಪಾದನಾ ಕಂಪನಿಗಳು ಭಾಗವಹಿಸಿದೆ. ಈ ಬಾರಿಯ ಆಟೋ ಎಕ್ಸ್ ಪೋದಲ್ಲಿ ಒಂದೇ ದಿನ 1 ಲಕ್ಷ ಜನ ಆಗಮಿಸಿದ್ದಾರೆ.

2020ರ ಆಟೋ ಎಕ್ಸ್ ಪೋದಲ್ಲಿ 30 ವಾಹನ ಉತ್ಪಾದನಾ ಕಂಪನಿಗಳು ಭಾಗವಹಿಸಿದೆ. ಆಟೋ ಎಕ್ಸ್ ಪೋದಲ್ಲಿ ಜನಪ್ರಿಯ ಕಾರು ತಯಾರಕ ಕಂಪನಿಗಳು ತಮ್ಮ ಸರಣಿಯಲ್ಲಿರುವ ಪ್ರಮುಖ ಮಾದರಿಗಳನ್ನು ಪ್ರದರ್ಶನ ಪಡಿಸಿದೆ. ಕಾರು ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಮತ್ತು ಕಾನ್ಸೆಪ್ಟ್ ಕಾರುಗಳು ಸೇರಿ ಹಲವಾರು ಮಾದರಿಗಳನ್ನು ಪ್ರದರ್ಶನ ಪಡಿಸಿದೆ. ಇದರ ಪ್ರಮುಖವಾಗಿ ಜನರ ಗಮನ ಸೆಳೆದ ಕಾರುಗಳ ಪಟ್ಟೆ ಇಲ್ಲಿದೆ.

ಮಾರುತಿ ಸುಜುಕಿ ಜಿಮ್ನಿ
2020ರ ಆಟೋ ಎಕ್ಸ್ ಪೋದಲ್ಲಿ ಹೆಚ್ಚಿನ ಜನರ ಗಮನಸೆಳೆದ ಕಾರುಗಳ ಪಟ್ಟಿಯಲ್ಲಿ ಜಿಮ್ನಿ ಅಗ್ರ ಸ್ಥಾನವನ್ನು ಪಡೆದುಕೊಳ್ಳುತ್ತದೆ. ಒಂದು ಕಾಲದಲ್ಲಿ ಭಾರತೀಯ ರಸ್ತೆಗಳಲ್ಲಿ ರಾಜನಂತೆ ಮೆರದ ಜನಪ್ರಿಯ ಜಿಪ್ಸಿ ಉತ್ತರಧಿಕಾರಿಯಾಗಿ ಜಿಮ್ನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಮಾರುತಿ ಸುಜುಕಿ ಸಂಸ್ಥೆಯ ಜಿಮ್ನಿ ಮಿನಿ-ಎಸ್‌ಯುವಿಯನ್ನು 2020ರ ಆಟೋ ಎಕ್ಸ್‌ಪೋದಲ್ಲಿ ಅನಾವಣಗೊಳಿಸಿದರು. ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಈ ಮಿನಿ ಎಸ್‍ಯುವಿಯಲ್ಲಿ 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಮಿನಿ ಎಸ್‍ಯುವಿಯನ್ನು ಡೀಸೆಲ್ ಅಥವಾ ಹೈಬ್ರಿಡ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವುದಿಲ್ಲ.

ಹೊಸ ಹ್ಯುಂಡೈ ಕ್ರೆಟಾ
ಹ್ಯುಂಡೈ ಇಂಡಿಯಾ ಎರಡನೇ ತಲೆಮಾರಿನ ಕ್ರೆಟಾ ಎಸ್‌ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಕಳೆದ ವರ್ಷ ಈ ಕಾರ್ ಅನ್ನು ಚೀನಾದಲ್ಲಿ ಹೊಸ ತಲೆಮಾರಿನ ಐಎಕ್ಸ್ 25 ಎಂಬ ಹೆಸರಿನಲ್ಲಿ ಅನಾವರಣಗೊಳಿಸಲಾಗಿತ್ತು

ಹ್ಯುಂಡೈ ಕಂಪನಿಯು ಸೆಲ್ಟೋಸ್ ಕಾರಿನಲ್ಲಿರುವಂತಹ 140 ಬಿಹೆಚ್‌ಪಿ ಪವರ್ ಉತ್ಪಾದಿಸುವ, 1.4-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಈ ಕಾರಿನಲ್ಲಿ ಅಳವಡಿಸುವ ಸಾಧ್ಯತೆಗಳಿವೆ. ಹ್ಯುಂಡೈ ಕ್ರೆಟಾದ ಇಂಟಿರಿಯರ್ ಹಾಗೂ ಉಳಿದ ವಿವರಗಳನ್ನು ಬಿಡುಗಡೆಗೂ ಮುನ್ನ ಬಹಿರಂಗಗೊಳಿಸಲಾಗುವುದು. ಈ ಹೊಸ ಕಾರ್ ಅನ್ನು ಮಾರ್ಚ್ ಮಧ್ಯಭಾಗದಲ್ಲಿ ಬಿಡುಗಡೆಗೊಳಿಸಲಾಗುವುದು. ಈ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.10ಲಕ್ಷದಿಂದ-ರೂ.16 ಲಕ್ಷಗಳಾಗುವ ಸಾಧ್ಯತೆಗಳಿವೆ.

ಕಿಯಾ ಸೊನೆಟ್ ಕಾನ್ಸೆಪ್ಟ್
ಸ್ಪೋಟಿ ಲುಕ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ. ಸದ್ಯ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಹೊಸ ಕಾರು 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್, 1.6-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಮತ್ತು 1.4-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಪಡೆಯುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.6.50 ಲಕ್ಷದಿಂದ ರೂ.8 ಲಕ್ಷ ಬೆಲೆ ಅಂತರ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಮುಂದಿನ ಎರಡರಿಂದ ಮೂರು ತಿಂಗಳ ಅವಧಿಯೊಳಗೆ ಬಿಡುಗಡೆಯಾಗಲಿದೆ.

ಟಾಟಾ ಸಿಯೆರಾ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರು
ಟಾಟಾ ಮೋಟಾರ್ಸ್ ಸಿಯೆರಾ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರ್ ಅನ್ನು 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದೆ. ಈ ಮೂಲಕ ಟಾಟಾ ಮೋಟಾರ್ಸ್, 1990ರ ದಶಕದಲ್ಲಿದ್ದ ಸಿಯೆರಾವನ್ನು ಮತ್ತೊಮ್ಮೆ ದೇಶಿಯ ಮಾರುಕಟ್ಟೆಗೆ ತಂದಿದೆ. ಆದರೆ ಈ ಬಾರಿ ಎಲೆಕ್ಟ್ರಿಕ್ ವಾಹನದ ರೂಪದಲ್ಲಿ ತಂದಿದೆ.

ಹೊಸ ಟಾಟಾ ಸಿಯೆರಾ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರಿನಲ್ಲಿ ಟಾಟಾ ಮೋಟಾರ್ಸ್‍ನ ಹೊಸ ಇಂಪ್ಯಾಕ್ಟ್ 2.0 ಡಿಸೈನ್ ಲ್ಯಾಂಗ್ವೇಜ್ ಅನ್ನು ಅಳವಡಿಸಲಾಗಿದೆ. ಈ ಕಾನ್ಸೆಪ್ಟ್ ಕಾರು, ಎಚ್‌ಬಿಎಕ್ಸ್ ಮಿನಿ-ಎಸ್‌ಯುವಿ ಮತ್ತು ಆಲ್ಟ್ರೊಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್‍ಗಳಂತೆ ಟಾಟಾದ ಆಲ್ಫಾ ಆರ್ಕಿಟೆಕ್ಚರ್ ಅನ್ನು ಆಧರಿಸಿದೆ.

ಎಂಜಿ ಗ್ಲೊಸ್ಟರ್
ಎಂಜಿ ಮೋಟಾರ್ಸ್ ಸಂಸ್ಥೆಯು ಬಹುನೀರಿಕ್ಷಿತ ಲಗ್ಷುರಿ ಎಸ್‌ಯುವಿ ಆವೃತ್ತಿಯಾದ ಗ್ಲೊಸ್ಟರ್ ಅನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಭಾರತದಲ್ಲಿ ಮಾರಾಟವಾಗುತ್ತಿರುವ ಇತರೆ ಫುಲ್ ಸೈಜ್ ಎಸ್‌ಯುವಿ ಮಾದರಿಗಳಿಂತಲೂ ಬಲಿಷ್ಠ ವಿನ್ಯಾಸ ಹೊಂದಿರುವ ಗ್ಲೊಸ್ಟರ್ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಎಸ್‍ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ವಿಷನ್ ಇನ್ ಕಾನ್ಸೆಪ್ಟ್ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಈ ಹೊಸ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ನೇರ ಪೈಪೋಟಿಯನ್ನು ನೀಡಲಿದೆ.


Click it and Unblock the Notifications








