ಸಿಯಾಮ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡ ಮಾರುತಿ ಸುಜುಕಿ ಸಿಇಒ ಕೆನಿಚಿ ಆಯುಕಾವ
ದೇಶಿಯ ಆಟೋ ಉತ್ಪಾದನಾ ಉದ್ಯಮವನ್ನು ನಿರ್ವಹಿಸುವ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘವು ತನ್ನ 60ನೇ ವಾರ್ಷಿಕೋತ್ಸವದಲ್ಲಿ ಮಾರುತಿ ಸುಜುಕಿ ಸಿಇಒ ಕೆನಿಚಿ ಆಯುಕಾವ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘವು ಹೊಸ ಅಧ್ಯಕ್ಷರ ಆಯ್ಕೆಯೊಂದಿಗೆ ಆಟೋ ಉದ್ಯಮ ಸುಧಾರಣೆಗಾಗಿ ಕೇಂದ್ರ ಸರ್ಕಾರದೊಂದಿಗೆ ಮಹತ್ವದ ಚರ್ಚೆಗಳನ್ನು ನಡೆಸುತ್ತಿದ್ದು, ಕರೋನಾ ವೈರಸ್ ಪರಿಣಾಮ ನೆಲಕಚ್ಚಿರುವ ವಿವಿಧ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಬೇಡಿಕೆಗಳನ್ನು ಮಂಡಿಸುವ ಮೂಲಕ ಜಿಟಿಎಸ್ ವಿನಾಯ್ತಿ ಪಡೆದುಕೊಳ್ಳುವ ಭರವಸೆ ವ್ಯಕ್ತಪಡಿಸಿದೆ.

ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘದಲ್ಲಿ ದೇಶದ ಪ್ರಮುಖ ಆಟೋ ಕಂಪನಿಗಳು ಸದಸ್ಯತ್ವ ಹೊಂದಿದ್ದು, ಅಧ್ಯಕ್ಷ ಸ್ಥಾನಕ್ಕೆ ಕೆನಿಚಿ ಆಯುಕಾವ ಆಯ್ಕೆಗೊಂಡಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ್ ಲೇಲ್ಯಾಂಡ್ ಸಿಇಒ ವಿಪಿನ್ ಸೊಂದಿ ಮತ್ತು ಖಜಾಂಚಿಯಾಗಿ ಐರಿಷ್ ಕರ್ಮಷಿಲ್ ವೆಹಿಕಲ್ ವಿಭಾಗದ ಎಂಡಿ ವಿನೋದ್ ಅಗರವಾಲ್ ಆಯ್ಕೆಗೊಂಡಿದ್ದಾರೆ.

ಹೊಸ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಆಯ್ಕೆಯೊಂದಿಗೆ ಕೇಂದ್ರ ಸರ್ಕಾರದ ಮುಂದೆ ಮತ್ತಷ್ಟು ಹೊಸ ಬೇಡಿಕೆಗಳನ್ನು ಸಲ್ಲಿಸಿರುವ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘವು ಆಟೋ ಉದ್ಯಮ ಸುಧಾರಣೆಗಾಗಿ ಹಲವಾರು ವಿನಾಯ್ತಿಗಳಿಗೆ ಪಟ್ಟುಹಿಡಿದಿದೆ.

ಸಿಯಾಮ್ ಬೇಡಿಕೆಗಳ ಆಧಾರದ ಮೇಲೆ ಭಾರತದಲ್ಲೇ ಹೊಸ ವಾಹನಗಳ ಉತ್ಪಾದನೆಗೆ ಉತ್ತೇಜನ ನೀಡಲು ಹಲವಾರು ಹೊಸ ಯೋಜನೆಗಳನ್ನು ರೂಪಿಸಿರುವ ಕೇಂದ್ರ ಸರ್ಕಾರವು ಆಮದು ಕಾರುಗಳ ಮೇಲೆ ಮತ್ತಷ್ಟು ನಿರ್ಬಂಧಗಳನ್ನು ಹೇರಲು ಮುಂದಾಗಿದ್ದು, ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಆಮದು ಸುಂಕ ವಿಧಿಸಲು ಮುಂದಾಗಿದೆ.

ಭಾರತ ಮತ್ತು ಚೀನಾ ಗಡಿ ತಗಾದೆ ನಂತರ ಚೀನಿ ಆಟೋ ಉತ್ಪಾದನಾ ಬಿಡಿಭಾಗಗಳ ಮೇಲೆ ಅವಲಂಬನೆಯನ್ನು ತಗ್ಗಿಸುತ್ತಿರುವ ಬಹುತೇಕ ಆಟೋ ಕಂಪನಿಗಳು ಭಾರತದಲ್ಲೇ ಅಭಿವೃದ್ದಿಗೊಂಡ ವಾಹನ ಬಿಡಿಭಾಗಗಳ ಬಳಕೆಗೆ ಆದ್ಯತೆ ನೀಡುತ್ತಿದ್ದು, ಮುಂಬರುವ 4 ನಾಲ್ಕು ವರ್ಷಗಳಲ್ಲಿ ಸಂಪೂರ್ಣವಾಗಿ ಭಾರತದಲ್ಲೇ ಉತ್ಪಾದನೆಯಾದ ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಂಡ ವಾಹನ ಮಾರಾಟಕ್ಕೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಮಹತ್ವದ ನಿರ್ಧಾರ ತಗೆದುಕೊಳ್ಳಲಾಗುತ್ತಿದೆ.

ಇದಕ್ಕಾಗಿ ಈಗಿನಿಂದಲೇ ಆಮದು ವಾಹನ ಮಾದರಿಗಳ ಮಾರಾಟವನ್ನು ತಗ್ಗಿಸುವ ನಿಟ್ಟಿನಲ್ಲಿ ಆಮದು ಸುಂಕ ಹೆಚ್ಚಿಸುವುದು ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ವಾಹನ ಬಿಡಿಭಾಗಗಳನ್ನು ಭಾರತದಲ್ಲೇ ಅಭಿವೃದ್ದಿಗೊಳಿಸುವುದು ಹೊಸ ಯೋಜನೆಯ ಪ್ರಮುಖ ಭಾಗವಾಗಿದೆ.

ಈ ಕುರಿತಂತೆ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘದ 60ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿರುನ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯುಷ್ ಗೋಯಲ್ ಅವರು ದೇಶಿಯ ಮಾರುಕಟ್ಟೆಯಲ್ಲಿನ ಆಟೋ ಉತ್ಪಾದನೆಯು ಹೆಚ್ಚಿಸುವುದರ ಜೊತೆಗೆ ರಫ್ತು ಪ್ರಮಾಣವನ್ನು ಹೆಚ್ಚಿಸಲು ಹಲವು ಕ್ರಮಗಳು ಅಗತ್ಯವಿರುವುದಾಗಿ ಅಭಿಪ್ರಾಯಪಟ್ಟಿದ್ದಾರೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದರಲ್ಲಿ ಆಮದು ವಾಹನ ಮೇಲೆ ಸುಂಕ ಹೆಚ್ಚಿಸುವುದು ಮತ್ತು ಬಿಡಿಭಾಗಗಳನ್ನು ಪೂರ್ಣಪ್ರಮಾಣದಲ್ಲಿ ಭಾರತದಲ್ಲೇ ಅಭಿವೃದ್ದಿಗೊಳಿಸಿ ಬಳಕೆಗೆ ಆದ್ಯತೆ ನೀಡುವಂತೆ ಆಟೋ ಕಂಪನಿಗಳಿಗೆ ಸಲಹೆ ನೀಡಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಆಟೋ ಉತ್ಪಾದನಾ ಪ್ರಕ್ರಿಯೆಯು ಸಹಜ ಸ್ಥಿತಿಯತ್ತ ಮರಳಲಿದೆ ಎಂದಿದ್ದಾರೆ.

ಜೊತೆಗೆ ಆದಾಯ ಕ್ರೂಢೀಕರಣಕ್ಕಾಗಿ ವಿವಿಧ ಆದಾಯ ಮೂಲಗಳನ್ನು ಉತ್ತೇಜಿಸಲು ಹೊಸ ವಾಹನಗಳ ಖರೀದಿ ಮೇಲೆ ಜಿಎಸ್‌ಟಿ ವಿನಾಯ್ತಿ ನೀಡುವುದು ಬಹುತೇಕ ಖಚಿತವಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕೇಂದ್ರದ ಭಾರೀ ಕೈಗಾರಿಕಾ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ವಾಹನ ಉದ್ಯಮಕ್ಕೆ ತಾತ್ಕಲಿಕವಾಗಿ ಪರಿಹಾರ ನೀಡಲು ಸರ್ಕಾರ ಚಿಂತನೆ ನಡೆಸರುವುದಾಗಿ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್ ಸಂಘದ ಸಭೆಯಲ್ಲಿಯೇ ಮಾತನಾಡಿದ್ದು, ದ್ವಿಚಕ್ರ ವಾಹನ ಮಾತ್ರವಲ್ಲ ಎಲ್ಲಾ ಬಗೆಯ ವಾಹನಗಳ ಮೇಲೂ ಶೇ.10 ರಷ್ಟು ಜಿಎಸ್‌ಟಿ ವಿನಾಯ್ತಿ ನೀಡಬಹುದಾಗಿದೆ ಎಂಬ ಹೇಳಿಕೆ ನೀಡಿದ್ದಾರೆ.


Click it and Unblock the Notifications