Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ವರ್ಷದಿಂದ ಎಲ್ಲಾ ಮಾದರಿಯ ಕಾರುಗಳ ಬೆಲೆ ಏರಿಕೆ ಮಾಡಲಿದೆ ಸ್ಕೋಡಾ
ಭಾರತದಲ್ಲಿ ಕರೋನಾ ಸೋಂಕಿನ ಆರ್ಭಟ ಇಳಿಮುಖವಾಗುತ್ತಿರುವಾಗ ಕಾರುಗಳ ಮಾರಾಟದಲ್ಲಿ ಹಲವು ತಿಂಗಳುಗಳ ಬಳಿಕ ಚೇತರಿಕೆಯನ್ನು ಕಾಣುತ್ತಿದೆ. ವರ್ಷಾಂತ್ಯದಲ್ಲಿ ಹಲವು ವಾಹನ ಕಂಪನಿಗಳು ತಮ್ಮ ಕಾರುಗಳ ಮೇಲೆ ಆಕರ್ಷಕ ಆಫರ್ ನೀಡುವ ಮೂಲಕ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ.

ಆದರೆ ವೆಚ್ಚ ನಿರ್ವಹಣೆಗಾಗಿ ಹಲವು ಕಾರು ತಯಾರಕ ಕಂಪನಿಗಳು ತಮ್ಮ ಸರಣಿಯಲ್ಲಿರುವ ವಿವಿಧ ಮಾದರಿಗಳ ಬೆಲೆಯನ್ನು ಹೆಚ್ಚಿಸಲು ಮುಂದಾಗಿದೆ. ಇದರ ನಡುವೆ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದು ಮತ್ತು ನಿರ್ವಹಣೆ ವೆಚ್ಚವನ್ನು ಸರಿದೂಗಿಸಲು ಜನವರಿ 1 ರಿಂದ ತನ್ನ ಸರಣಿಯಲ್ಲಿರುವ ಎಲ್ಲಾ ಮಾದರಿಗಳ ಬೆಲೆಯನ್ನು ಶೇ.2.5 ರಷ್ಟು ಹೆಚ್ಚಿಸುವುದಾಗಿ ಸ್ಕೋಡಾ ಆಟೋ ಇಂಡಿಯಾ ಕಂಪನಿ ಹೇಳಿದೆ.

ಸ್ಕೋಡಾ ಆಟೋ ಇಂಡಿಯಾ ಕಂಫನಿಯು ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ರ‍್ಯಾಪಿಡ್, ಆಕ್ಟೀವಿಯಾ ಆರ್‌ಎಸ್ 245, ಸೂಪರ್ಬ್ ಮತ್ತು ಕರೋಕ್ ಎಂಬ ನಾಲ್ಕು ಮಾದರಿಗಳನ್ನು ಮಾರಾಟ ಮಾಡಲಾಗುತ್ತಿದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಇತ್ತೀಚಿನ ದಿನಗಳಲ್ಲಿ ಜಾಗತಿಕ ಸರಕುಗಳ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಲ್ಲಿನ ಗಮನಾರ್ಹ ಏರಿಳಿಕೆಯಿಂದ ಉತ್ಪಾದನೆಯ ವೆಚ್ಚವು ಅಧಿಕವಾಗಿದೆ. ಇದರಿಂದ ತನ್ನ ಎಲ್ಲಾ ಮಾದರಿಗಳ ಬೆಲೆಯನ್ನು ಹೊಸ ವರ್ಷದಿಂದ ಶೇ.2.5 ರಷ್ಟು ಬೆಲೆ ಏರಿಕೆಯನ್ನು ಮಾಡಲಾಗುತ್ತದೆ ಎಂದು ಸ್ಕೋಡಾ ಕಂಪನಿಯು ಹೇಳಿದೆ.

ಇನ್ನು ಸ್ಕೋಡಾ ಕರೋಕ್ ಎಸ್‍ಯುವಿಯ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಇತ್ತೀಚೆಗೆ ಕರೋಕ್ ದುಬಾರಿಯಾಗಿದೆ ಎಂಬ ಟ್ವಿಟ್ಟರ್ ನಲ್ಲಿ ಒಬ್ಬರ ಪ್ರಶ್ನೆಗೆ ಉತ್ತರಿಸಿದ ಸ್ಕೋಡಾ ಆಟೋ ಇಂಡಿಯಾದ ಸೇಲ್ಸ್, ಸರ್ವಿಸ್ & ಮಾರ್ಕೆಟಿಂಗ್ ನಿರ್ದೇಶಕ ಜ್ಯಾಕ್ ಹೋಲಿಸ್ ಅವರು ಎಫ್‌ಬಿಯುನಂತೆ 1,000 ಕಾರುಗಳು ಮಾತ್ರ ಇದ್ದವು ಮತ್ತು ಅವೆಲ್ಲವನ್ನೂ ಮಾರಾಟ ಮಾಡಲಾಗಿದೆ ಎಂದು ಉತ್ತರಿಸಿದ್ದಾರೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಕರೋಕ್ ಎಸ್‍ಯುವಿಯು ಭಾರತಕ್ಕೆ ಸಿಬಿಯು ಆಗಿ ತರಲಾಗಿದೆ. ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಗೆ ಹೋಲಿಸಿದರೆ ಪ್ರೀಮಿಯಂ ಬೆಲೆಗೆ ಮಾರಾಟ ಮಾಡಲಾಗಿದೆ. ಆದರೆ ಈ ಸಂಕಷ್ಟದ ಸಮಯದಲ್ಲಿಯು ಸ್ಕೋಡಾ ಕಂಪನಿಯು ಸಿಬಿಯು ಮೂಲಕ ತರಲಾದ ಕರೋಕ್ 1000 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ .

ಕರೋಕ್ ಎಸ್‍ಯುವಿಯು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇನ್ನು ಸ್ಕೋಡಾ ಸರಣಿಯ ಆಕ್ಟೀವಿಯಾ ಆರ್‍ಎಸ್ 245 ಕಾರು ಪರ್ಫಾಮೆನ್ಸ್ ಮಾದರಿಯಾಗಿದೆ. ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ 2.0 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 242 ಬಿಹೆಚ್‍ಪಿ ಪವರ್ ಮತ್ತು 370 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಇಂಡಿಯಾ 2.0 ಯೋಜನೆಯ ಭಾಗವಾಗಿ ಸ್ಕೋಡಾ ಕೆಲವು ಹೊಸ ಮಾದರಿಗಳನ್ನು ಪರಿಚಯಿಸಲಿದೆ. ಸ್ಕೋಡಾ ಕಂಪನಿಯು ಈಗಾಗಲೇ ಕೊನಾರ್ಕ್, ಕ್ಲಿಕ್, ಕಾರ್ಮಿಕ್, ಕೊಸ್ಮಿಕ್, ಮತ್ತು ಕುಶಾಕ್ ಸೇರಿದಂತೆ ಐದು ಹೊಸ ಹೆಸರುಗಳನ್ನು ಭಾರತದಲ್ಲಿ ಈಗಾಗಲೇ ಟ್ರೇಡ್‌ಮಾರ್ಕ್ ಮಾಡಿದ್ದಾರೆ.

ಇದರಲ್ಲಿ ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಎಸ್‍ಯುವಿಯು ಇದರಲ್ಲಿ ಯಾವುದಾದರು ಒಂದು ಹೆಸರನ್ನು ಹೊಂದಿರಬಹುದು. ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಹೊಸ ಮಾದರಿಗಳನ್ನು ಬಿಡುಗಡೆಗೊಳಿಸುವ ಗುರಿಯನ್ನು ಹೋಂಡಾ ಹೊಂದಿದೆ.