ಬರೋಬ್ಬರಿ 2 ತಿಂಗಳ ನಂತರ ಔರಂಗಾಬಾದ್ ಕಾರು ಉತ್ಪಾದನಾ ಘಟಕ ತೆರೆದ ಸ್ಕೋಡಾ
ಕರೋನಾ ವೈರಸ್‌ನಿಂದಾಗಿ ಆಟೋ ಉದ್ಯಮವು ಭಾರೀ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ವಿನಾಯ್ತಿ ಪಡೆದುಕೊಂಡಿರುವ ಆಟೋ ಉದ್ಯಮವು ಹೊಸ ಸುರಕ್ಷಾ ಮಾರ್ಗಸೂಚಿ ಅಡಿ ಪುನಾರಂಭಗೊಂಡಿದೆ.

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕೋಡಾ ಕಂಪನಿಯು ಕೂಡಾ ಇದೀಗ ಹೊಸ ಸುರಕ್ಷಾ ಮಾರ್ಗಸೂಚಿ ಅಡಿಯಲ್ಲಿ ಔರಂಗಾಬಾದ್ ಕಾರು ಉತ್ಪಾದನಾ ಘಟಕವನ್ನು ಕಳೆದ 2 ತಿಂಗಳ ನಂತರ ಪುನಾರಂಭಗೊಳಿಸಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಸುರಕ್ಷಾ ಮಾರ್ಗಗಳನ್ನು ಅನುಸರಿಸಿಕೊಂಡು ಉತ್ಪಾದನಾ ಚಟುವಟಿಕೆಗಳಿಗೆ ಚಾಲನೆ ನೀಡಿದೆ.

ಸ್ಕೋಡಾ ಕಂಪನಿಯು ಈಗಾಗಲೇ ಕಾರು ಮಾರಾಟಕ್ಕೆ ಕಳೆದ ವಾರವೇ ಚಾಲನೆ ನೀಡಿದ್ದು, ಹೊಸ ಮಾರ್ಗಸೂಚಿಯೆಂತೆ ಕಾರು ಉತ್ಪಾದನೆ ಮತ್ತು ಮಾರಾಟವನ್ನು ಪುನಾರಂಭಿಸಿರುವ ಸ್ಕೋಡಾ ಕಂಪನಿಯು ವೈರಸ್ ಭೀತಿ ಹಿನ್ನಲೆಯಲ್ಲಿ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.

ಗ್ರಾಹಕರ ಸುರಕ್ಷತೆ ದೃಷ್ಠಿಯಿಂದ ಆನ್‌ಲೈನ್ ಕಾರು ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಮೇರೆಗೆ ಹೊಸ ವಾಹನ ಉತ್ಪನ್ನಗಳನ್ನು ಮತ್ತು ಗ್ರಾಹಕರ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಇನ್ನು ಸಂಕಷ್ಟ ಸಮಯದಲ್ಲೂ ಭಾರತದಲ್ಲಿ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಸರ್ಕಾರದ ಜೊತೆ ಕೈಜೋಡಿರುವ ಸ್ಕೋಡಾ ಕಂಪನಿಯು ರೂ.1 ಕೋಟಿ ದೇಣಿಗೆ ಘೋಷಣೆ ಮಾಡಿದ್ದು, ಕಂಪನಿ ನೀಡಿದ ರೂ.1 ಕೋಟಿ ದೇಣಿಗೆ ಮಾತ್ರವಲ್ಲದೆ ಸಿಬ್ಬಂದಿಯು ಸಹ ತಮ್ಮ ಆದಾಯದಲ್ಲಿ ರೂ.1.20 ಕೋಟಿ ದೇಣಿಗೆ ಸಂಗ್ರಹಿಸಿ ಕರೋನಾ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ್ದಾರೆ.

ಸ್ಕೋಡಾ ಕಂಪನಿಯು ದೇಣಿಗೆ ಹಣದಲ್ಲಿ ಪುಣೆಯಲ್ಲಿರುವ ಸರ್ಕಾರಿ ಆಸ್ಪತ್ರೆಯೊಂದನ್ನು ಉನ್ನತೀಕರಿಸಲು ನೆರವಾಗಿದ್ದು, ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿರುವ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಸುಸಜ್ಜಿತ ಮಾದರಿಯ 1,100 ಬೆಡ್‌ಗಳನ್ನು ಜೋಡಣೆ ಮಾಡಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಜೊತೆಗೆ ಫೇಸ್ ಮಾಸ್ಕ್ ಮತ್ತು ಫೇಸ್ ಶಿಲ್ಡ್‌ಗಳನ್ನು ಕಾರು ಘಟಕದಲ್ಲೇ ಉತ್ಪಾದನೆ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ವೆಂಟಿಲೇಟರ್ ಸೇರಿದಂತೆ ವಿವಿಧ ಮಾದರಿಯ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದೆ.

ಕರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆ ಮಾಡುತ್ತಿವೆ.


Click it and Unblock the Notifications