Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಜನವರಿಯಲ್ಲಿ ಅನಾವರಣಗೊಳ್ಳಲಿದೆ ಸ್ಕೋಡಾ ವಿಷನ್-ಇನ್ ಕಾನ್ಸೆಪ್ಟ್
ಸ್ಕೋಡಾ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ವಿಷನ್-ಇನ್ ಕಾನ್ಸೆಪ್ಟ್ ಮಾದರಿಯ ಬಿಡುಗಡೆಗಾಗಿ ಸಿದ್ದವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಉತ್ಪಾದನಾ ಆವೃತ್ತಿಯನ್ನು ಅಧಿಕೃತ ಹೆಸರಿನೊಂದಿಗೆ ಅನಾವರಣಗೊಳಿಸಲು ಸಜ್ಜಾಗಿದೆ.

ಕಾನ್ಸೆಪ್ಟ್ ಮಾದರಿಯಾಗಿರುವ ವಿಷನ್-ಇನ್ ಕಾರನ್ನು ಉತ್ಪಾದನಾ ಆವೃತ್ತಿಯೊಂದಿಗೆ 2021ರ ಜನವರಿಯಲ್ಲಿ ಅನಾವರಣಗೊಳಿಸಲಿರುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರನ್ನು ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಪೂರ್ಣಗೊಳಿಸುತ್ತಿದೆ.

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ವಿಷನ್ ಇನ್ ಕಾನ್ಸೆಪ್ಟ್ ಮಾದರಿಯನ್ನು ಹೊಸ ಹೆಸರಿನೊಂದಿಗೆ ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಹೊಸ ಕಾರನ್ನು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಬಿಡುಗಡೆ ಮಾಡಲಿದೆ.

ಹೊಸ ಕಂಪ್ಯಾಕ್ಟ್ ಎಸ್‌ಯವಿ ಕಾರು ಕ್ಲಿಕ್ ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರಿಗಾಗಿ ಅಧಿಕೃತ ಹೆಸರನ್ನು ಈಗಾಗಲೇ ಸ್ಕೋಡಾ ಕಂಪನಿಯು ಅಂತಿಮಗೊಳಿಸಿ ಪೇಟೆಂಟ್(ಹಕ್ಕುಸ್ವಾಮ್ಯ) ದಾಖಲಿಸಿದೆ.

ಹಕ್ಕುಸ್ವಾಮ್ಯ ಪಡೆದಿರುವ ಪ್ರತಿಯಲ್ಲಿ ಕ್ಲಿಕ್(kliq) ಎಂದು ನಮೂದಿಸಲಾಗಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಾಗಿ ಕ್ಲಿಕ್ ಹೆಸರು ಬಳಕೆ ಮಾಡಲಿದೆ ಎನ್ನುವ ಖಚಿತತೆ ಇನ್ನು ಕೂಡಾ ಲಭ್ಯವಾಗಿಲ್ಲ. ಉತ್ಪಾದನಾ ಆವೃತ್ತಿಯ ಅನಾವರಣ ಸಂದರ್ಭದಲ್ಲೇ ಹೊಸ ಕಾರಿನ ಅಧಿಕೃತ ಹೆಸರು ಮತ್ತು ಎಂಜಿನ್ ಆಯ್ಕೆಯ ಮಾಹಿತಿ ಲಭ್ಯವಾಗಲಿದೆ. ವಿಷನ್-ಇನ್ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍ಯುವಿಯ ಮಾದರಿಯನ್ನು ಆಧರಿಸಿದ್ದು, ಹೊಸ ಎಸ್‍ಯುವಿಯು ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಅನ್ನು ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.

ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‍ಯುವಿಯ ಸೈಡ್ ಪ್ರೊಫೈಲ್‍ನಲ್ಲೂ ಶಾರ್ಪ್ ಲೈನ್‍ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೈಲ್‍ಲೈಟ್‍ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಎಸ್‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.

ಎಂಜಿನ್ ಸಾಮರ್ಥ್ಯ
ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ವಿಷನ್-ಇನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುವ ಸಾಧ್ಯೆತೆಗಳಿದ್ದು, ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.