2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಭವಿಷ್ಯದ ಕಾರುಗಳ ನಿರ್ಮಾಣ ಪ್ರಕ್ರಿಯೆಯಲ್ಲಿ ಭಾರೀ ಬದಲಾವಣೆ ತರುತ್ತಿರುವ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಸಂಸ್ಥೆಗಳು ಸಹಭಾಗಿತ್ವದ ಯೋಜನೆಯಡಿ ವಿವಿಧ ಮಾದರಿಯ ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಸಹ ಬಿಡುಗಡೆಯ ಪಟ್ಟಿಯಲ್ಲಿ ಸ್ಥಾನಪಡೆದಿವೆ.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಇಂಡಿಯಾ 2.0 ಪ್ರೋಜೆಕ್ಟ್ ಯೋಜನೆ ಚಾಲನೆ ನೀಡಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು ಸ್ಕೋಡಾ ಹೊಸ ಕಾರುಗಳ ನಿರ್ಮಾಣದ ಮೇಲೂ ಹೂಡಿಕೆ ಮಾಡುತ್ತಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸ್ಕೋಡಾ ಸಂಸ್ಥೆಯು ವಿವಿಧ ಐದು ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಇದರಲ್ಲಿ ವಿಷನ್-ಐ ಕಾನ್ಸೆಪ್ಟ್ ಕಾರು ಪ್ರಮುಖವಾಗಿದ್ದು, ಇದರ ಜೊತೆಯಲ್ಲೇ ಮತ್ತೊಂದು ಬಹುನೀರಿಕ್ಷಿತ ಎಲೆಕ್ಟ್ರಿಕ್ ಎಸ್‌ಯುವಿ ಕೂಡಾ ಬಿಡುಗಡೆಯಾಗಲಿದೆ.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯ ಬಿಡುಗಡೆಯ ಕುರಿತಂತೆ ನೆಮ್ ಪ್ಲೇಟ್ ಟೀಸರ್ ಒಂದನ್ನು ಬಿಡುಗಡೆ ಮಾಡಿರುವ ಸ್ಕೋಡಾ ಸಂಸ್ಥೆಯು ಹೊಸ ಕಾರಿನ ಅಧಿಕೃತ ಹೆಸರನ್ನು ಮಾತ್ರವೇ ಬಹಿರಂಗಪಡಿಸಿದೆ.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಟೀಸರ್‌ನಲ್ಲಿ ಹೊಸ ಕಾರಿನ ಹೆಸರನ್ನು ಎನ್‌ಯಾಕ್(ENYAQ) ಎಂದು ನಮೂದಿಸಲಾಗಿದ್ದು, ಕಾರಿನ ಹೆಸರಿನ ಹೊರತಾಗಿ ಯಾವುದೇ ರೀತಿಯ ತಾಂತ್ರಿಕ ಅಂಶಗಳ ಕುರಿತಾಗಿ ಮಾಹಿತಿ ನೀಡಿಲ್ಲ. ಆದರೆ ಹೊಸ ಕಾರು ಎಸ್‌ಯುವಿ ಮಾದರಿಯಾಗಿರಲಿದ್ದು, ವಿಷನ್-ಐ ಕಾನ್ಸೆಪ್ಟ್ ಮಾದರಿಯಲ್ಲೇ ಸಿದ್ದಗೊಳ್ಳಲಿದೆ.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಗೆ ಪೈಪೋಟಿ ಮಾರಾಟಗೊಳ್ಳುವ ಸಾಧ್ಯತೆಗಳಿದ್ದು, ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ 350 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ. ಆದರೆ ಹೊಸ ಕಾರಿನ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಹೊಸ ಕಾರು ಮಾತ್ರ ಪ್ರೀಮಿಯಂ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ ಎನ್ನಬಹುದು.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಇನ್ನು ಸ್ಕೋಡಾ ಸಂಸ್ಥೆಯು ಕಾರು ಗುಣಮಟ್ಟ ಮತ್ತು ಉತ್ಪಾದನಾ ವೆಚ್ಚಗಳನ್ನು ತಗ್ಗಿಸಲು ಫೋಕ್ಸ್‌ವ್ಯಾಗನ್ ಜೊತೆಗೂಡಿ ಎಂಕ್ಯೂಬಿ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಕಾರುಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಫೋಕ್ಸ್‌ವ್ಯಾಗನ್ ಕಾರುಗಳು ಸಹ ಇದೇ ಪ್ಲ್ಯಾಟ್‌ಫಾರ್ಮ್ ಅಡಿ ಉತ್ಪಾದನೆಗೊಳ್ಳಲಿವೆ.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಡೀಸೆಲ್ ಗೇಟ್ ಹಗರಣದ ನಂತರ ಭಾರತದಲ್ಲಿನ ಕಾರು ಮಾರಾಟದಲ್ಲಿ ಭಾರೀ ಬದಲಾವಣೆ ತರುತ್ತಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು ಡೀಸೆಲ್ ಎಂಜಿನ್ ಕಾರುಗಳ ಉತ್ಪಾದನೆಯನ್ನು ಪರಿಣಾಮಕಾರಿ ತಗ್ಗಿಸುತ್ತಿದ್ದು, ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಹೂಡಿಕೆ ಮಾಡುತ್ತಿದೆ.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಇಂಡಿಯಾ 2.0 ಪ್ರೋಜೆಕ್ಟ್ ಯೋಜನೆಗಾಗಿ ಫೋಕ್ಸ್‌ವ್ಯಾಗನ್ ಸಂಸ್ಥೆಯು ಭಾರತದಲ್ಲಿ ಬರೋಬ್ಬರಿ ರೂ. 7,900 ಕೋಟಿ( 1 ಬಿಲಿಯನ್ ಯುರೋ ಡಾಲರ್) ಹೂಡಿಕೆ ಮಾಡಿದ್ದು, ಹೊಸ ಯೋಜನೆ ಅಡಿ ಕಾರು ಅಭಿವೃದ್ದಿ ಮತ್ತು ಮಾರಾಟ ಮಳಿಗೆಗಳ ಉನ್ನತೀಕರಣದ ಜೊತೆ ಮಾರುಕಟ್ಟೆ ವಿಸ್ತರಣೆಯೂ ಸೇರಿದೆ.

2021ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸ್ಕೋಡಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರು

ಹೀಗಾಗಿ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಅಭಿವೃದ್ದಿಗೊಳ್ಳುತ್ತಿರುವ ಭವಿಷ್ಯದ ಕಾರು ಮಾದರಿಗಳು ಹೊಸ ಸಂಚಲನ ಮೂಡಿಸುವ ತವಕದಲಿದ್ದು, 2021ರ ವೇಳೆಗೆ ಎಲೆಕ್ಟ್ರಿಕ್ ಮಾದರಿಗಳ ಸದ್ದು ಜೋರಾಗಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Auto has revealed that its first electric SUV will be unveiled globally soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X