Just In
- 57 min ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 14 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 15 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 16 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
Don't Miss!
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೀಗಿರಲಿದೆ ಸ್ಕೋಡಾ ಬಿಡುಗಡೆ ಮಾಡುತ್ತಿರುವ ಮೊದಲ ಎಲೆಕ್ಟ್ರಿಕ್ ಎಸ್ಯುವಿ
ಜೆಕ್ ಮೂಲದ ಕಾರು ಉತ್ಪಾದನಾ ಕಂಪನಿ ಸ್ಕೋಡಾ ತನ್ನ ಮೊದಲ ಎಲೆಕ್ಟ್ರಿಕ್ ಎಸ್ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಅಧಿಕೃತ ಬಿಡುಗಡೆಗೂ ಮುನ್ನ ಹೊಸ ಕಾರಿನ ವಿನ್ಯಾಸ ಕುರಿತಾದ ವಿನ್ಯಾಸಗಳ ರೇಖಾಚಿತ್ರಗಳನ್ನು ಬಹಿರಂಗಗೊಳಿಸಿದೆ.
ಯುರೋಪ್ ಮಾರುಕಟ್ಟೆಗಾಗಿ ಈಗಾಗಲೇ ಹೊಸ ಎಲೆಕ್ಟ್ರಿಕ್ ಎಸ್ಯುವಿ ಮಾದರಿಯ ಬಿಡುಗಡೆಯ ಕುರಿತಂತೆ ನೆಮ್ ಪ್ಲೇಟ್ ಟೀಸರ್ ಒಂದನ್ನು ಬಿಡುಗಡೆ ಮಾಡಿರುವ ಸ್ಕೋಡಾ ಕಂಪನಿಯು ಸೆಡಾನ್ ಮತ್ತು ಎಸ್ಯುವಿ ಮಾದರಿಯೊಂದನ್ನು ಎಲೆಕ್ಟ್ರಿಕ್ ಮಾದರಿಯಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಮುಂದಿನ ತಿಂಗಳು ಸೆಪ್ಟೆಂಬರ್ 1ರಂದು ಅಧಿಕೃತವಾಗಿ ಜಾಗತಿಕ ಮಾರುಕಟ್ಟೆಗಾಗಿ ಅನಾವರಣಗೊಳಿಸುವ ಸಿದ್ದತೆ ನಡೆಸಿದೆ.
ಸ್ಕೋಡಾ ಹೊಸ ಇವಿ ಕಾರು ಎನ್ಯಾಕ್(ENYAQ) ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಲಾಂಗ್ ವೀಲ್ಹ್ ಬೆಸ್ನೊಂದಿಗೆ ಕ್ರಾಸ್ ಓವರ್ ಎಸ್ಯುವಿ ಮಾದರಿಯಾಗಿ ಬಿಡುಗಡೆಗೊಳ್ಳುವುದು ಕಾರಿನ ರೇಖಾಚಿತ್ರಗಳಲ್ಲಿ ಸ್ಪಷ್ಟವಾಗಿದೆ.
ಸದ್ಯ ಕಾನ್ಸೆಪ್ಟ್ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸ್ಕೋಡಾ ಕಂಪನಿಯು ಸೆಪ್ಟೆಂಬರ್ 1ರಂದು ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಪ್ರದರ್ಶನಗೊಳಿಸಲಿದ್ದು, ಕಳೆದ ವಾರವಷ್ಟೇ ಎನ್ಯಾಕ್ ಕಾರಿನ ಇಂಟಿರಿಯರ್ ಡಿಸೈನ್ ಬಗೆಗಿನ ಮಾಹಿತಿಯನ್ನು ಬಹಿರಂಗಪಡಿಸಿತ್ತು.
ಎಸ್ಯುವಿ ಕಾರುಗಳಲ್ಲೇ ಹೊಸ ಮಾದರಿಯ ವಿನ್ಯಾಸ ಹೊಂದಿರುವ ಎನ್ಯಾಕ್ ಕಾರು 4,648-ಎಂಎಂ ಉದ್ದ, 1,877-ಎಂಎಂ ಅಗಲ, 1,618-ಎಂಎಂ ಎತ್ತರದೊಂದಿಗೆ ಉತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಮಾಹಿತಿಗಳ ಪ್ರಕಾರ, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಮೂರು ವೆರಿಯೆಂಟ್ಗಳಲ್ಲಿ ಬಿಡುಗಡೆಯಾಗಲಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಹೊಸ ಎಲೆಕ್ಟ್ರಿಕ್ ಕಾರು ಪ್ರತಿ ಚಾರ್ಜ್ಗೆ ಆರಂಭಿಕ ಆವೃತ್ತಿಯು 340ಕಿ.ಮೀ, ಮಧ್ಯಮ ಕ್ರಮಾಂಕದ ಕಾರು ಮಾದರಿಯು 390 ಕಿ.ಮೀ ಮತ್ತು ಟಾಪ್ ಎಂಡ್ ಮಾದರಿಯು ಪ್ರತಿ ಚಾರ್ಜ್ಗೆ ಗರಿಷ್ಠ 500ಕಿ.ಮೀ ಮೈಲೇಜ್ ರೇಂಜ್ ಹೊಂದಿದೆ.
ವೆರಿಯೆಂಟ್ಗಳಿಗೆ ಅನುಗುಣವಾಗಿ 55kWh, 62kWh ಮತ್ತು 82kWh ಬ್ಯಾಟರಿ ಒದಗಿಸಲಾಗಿದ್ದು, ಫೋಕ್ಸ್ವ್ಯಾಗನ್ ನಿರ್ಮಾಣ ಐ.ಡಿ ಕ್ರಾಝ್ ಎಲೆಕ್ಟ್ರಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆಯಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..
ಹೊಸ ಎಲೆಕ್ಟ್ರಿಕ್ ಯುರೋಪ್ ಮಾರುಕಟ್ಟೆಗಳಲ್ಲಿ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಭಾರತದಲ್ಲೂ ಬಿಡುಗಡೆಯಾಗಲಿರುವ ಈ ಹೊಸ ಕಾರು 2022ರ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ. ಬ್ಯಾಟರಿ ಸಾಮರ್ಥ್ಯ ಮತ್ತು ಐಷಾರಾಮಿ ಫೀಚರ್ಸ್ಗಳಿಗೆ ಅನುಗುಣವಾಗಿ ಹೊಸ ಕಾರು ಆರಂಭಿಕವಾಗಿ ರೂ.30 ಲಕ್ಷದಿಂದ ರೂ. 40 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.