ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ ಕಾರಿನ ಹೊಸ ಟೀಸರ್ ಬಿಡುಗಡೆ ಮಾಡಿದ ಸ್ಕೋಡಾ

ಸ್ಕೋಡಾ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರಿನ ಉತ್ಪಾದನಾ ಆವೃತ್ತಿಯ ಅನಾವರಣಕ್ಕೂ ಮುನ್ನ ಕಾರಿನ ವಿನ್ಯಾಸ ಕುರಿತು ವಿವಿಧ ಟೀಸರ್ ಚಿತ್ರಗಳನ್ನು ಬಹಿರಂಗಪಡಿಸಿದೆ.

ಎನ್ಯಾಕ್ ಇವಿ ಕಾರಿನ ಹೊಸ ಟೀಸರ್ ಬಿಡುಗಡೆ ಮಾಡಿದ ಸ್ಕೋಡಾ

ಯುರೋಪ್ ಮಾರುಕಟ್ಟೆಗಾಗಿ ಈಗಾಗಲೇ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯ ಬಿಡುಗಡೆಯ ಕುರಿತಂತೆ ನೆಮ್ ಪ್ಲೇಟ್ ಟೀಸರ್ ಒಂದನ್ನು ಬಿಡುಗಡೆ ಮಾಡಿರುವ ಸ್ಕೋಡಾ ಕಂಪನಿಯು ಸೆಡಾನ್ ಮತ್ತು ಎಸ್‌ಯುವಿ ಮಾದರಿಯೊಂದನ್ನು ಎಲೆಕ್ಟ್ರಿಕ್ ಮಾದರಿಯಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಮುಂದಿನ ತಿಂಗಳು ಸೆಪ್ಟೆಂಬರ್ 1ರಂದು ಅಧಿಕೃತವಾಗಿ ಜಾಗತಿಕ ಮಾರುಕಟ್ಟೆಗಾಗಿ ಅನಾವರಣಗೊಳಿಸುವ ಸಿದ್ದತೆ ನಡೆಸಿದೆ.

ಸ್ಕೋಡಾ ಹೊಸ ಇವಿ ಕಾರು ಎನ್ಯಾಕ್(ENYAQ) ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಲಾಂಗ್ ವೀಲ್ಹ್ ಬೆಸ್‌ನೊಂದಿಗೆ ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾಗಿ ಬಿಡುಗಡೆಗೊಳ್ಳುವುದು ಕಾರಿನ ರೇಖಾಚಿತ್ರಗಳಲ್ಲಿ ಸ್ಪಷ್ಟವಾಗಿದೆ.

ಸದ್ಯ ಕಾನ್ಸೆಪ್ಟ್ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸ್ಕೋಡಾ ಕಂಪನಿಯು ಸೆಪ್ಟೆಂಬರ್ 1ರಂದು ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಪ್ರದರ್ಶನಗೊಳಿಸಲಿದ್ದು, ಕಳೆದ ವಾರವಷ್ಟೇ ಎನ್ಯಾಕ್ ಕಾರಿನ ಇಂಟಿರಿಯರ್ ಡಿಸೈನ್ ಬಗೆಗಿನ ಮಾಹಿತಿಯನ್ನು ಬಹಿರಂಗಪಡಿಸಿತ್ತು.

ಎಸ್‌ಯುವಿ ಕಾರುಗಳಲ್ಲೇ ಹೊಸ ಮಾದರಿಯ ವಿನ್ಯಾಸ ಹೊಂದಿರುವ ಎನ್ಯಾಕ್ ಕಾರು 4,648-ಎಂಎಂ ಉದ್ದ, 1,877-ಎಂಎಂ ಅಗಲ, 1,618-ಎಂಎಂ ಎತ್ತರದೊಂದಿಗೆ ಉತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಮಾಹಿತಿಗಳ ಪ್ರಕಾರ, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ.

ಹೊಸ ಎಲೆಕ್ಟ್ರಿಕ್ ಕಾರು ಪ್ರತಿ ಚಾರ್ಜ್‌ಗೆ ಆರಂಭಿಕ ಆವೃತ್ತಿಯು 340ಕಿ.ಮೀ, ಮಧ್ಯಮ ಕ್ರಮಾಂಕದ ಕಾರು ಮಾದರಿಯು 390 ಕಿ.ಮೀ ಮತ್ತು ಟಾಪ್ ಎಂಡ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 500ಕಿ.ಮೀ ಮೈಲೇಜ್ ರೇಂಜ್ ಹೊಂದಿದೆ.

ವೆರಿಯೆಂಟ್‌ಗಳಿಗೆ ಅನುಗುಣವಾಗಿ 55kWh, 62kWh ಮತ್ತು 82kWh ಬ್ಯಾಟರಿ ಒದಗಿಸಲಾಗಿದ್ದು, ಫೋಕ್ಸ್‌ವ್ಯಾಗನ್ ನಿರ್ಮಾಣ ಐ.ಡಿ ಕ್ರಾಝ್ ಎಲೆಕ್ಟ್ರಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆಯಲಾಗಿದೆ.

ಹೊಸ ಎಲೆಕ್ಟ್ರಿಕ್ ಯುರೋಪ್ ಮಾರುಕಟ್ಟೆಗಳಲ್ಲಿ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಭಾರತದಲ್ಲೂ ಬಿಡುಗಡೆಯಾಗಲಿರುವ ಈ ಹೊಸ ಕಾರು 2022ರ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ. ಬ್ಯಾಟರಿ ಸಾಮರ್ಥ್ಯ ಮತ್ತು ಐಷಾರಾಮಿ ಫೀಚರ್ಸ್‌ಗಳಿಗೆ ಅನುಗುಣವಾಗಿ ಹೊಸ ಕಾರು ಆರಂಭಿಕವಾಗಿ ರೂ.30 ಲಕ್ಷದಿಂದ ರೂ. 40 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Article Published On: Sunday, August 23, 2020, 8:45 [IST]
English summary
Skoda Enyaq iV Official Teaser. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+