2025ರ ವೇಳೆಗೆ ವಾರ್ಷಿಕವಾಗಿ 1 ಲಕ್ಷ ಕಾರು ಮಾರಾಟ ಮಾಡಲಿದೆ ಸ್ಕೋಡಾ ಇಂಡಿಯಾ
ಭಾರತದಲ್ಲಿ ಫೋಕ್ಸ್‌ವ್ಯಾಗನ್ ಜೊತೆಗೂಡಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿರುವ ಸ್ಕೋಡಾ ಇಂಡಿಯಾ ಕಂಪನಿಯು ವಿವಿಧ ಮಾದರಿಯ ಹಲವು ಹೊಸ ಕಾರುಗಳನ್ನು ಪರಿಚಯಿಸುತ್ತಿದ್ದು, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಬಜೆಟ್ ಕಾರು ಮಾದರಿಗಳನ್ನು ಪರಿಚಯಿಸುವ ಯೋಜನೆಯಲ್ಲಿದೆ.

ಸ್ಕೋಡಾ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಇಂಡಿಯಾ 2.0 ಪ್ರೋಜೆಕ್ಟ್‌ಗೆ ಚಾಲನೆ ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಸುಮಾರು ರೂ.7,500 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಯುರೋಪ್ ಮಾರುಕಟ್ಟೆಯಲ್ಲಿರುವ ಹಲವು ಕಾರುಗಳನ್ನು ಭಾರತದಲ್ಲೂ ಹೊಸ ವಿನ್ಯಾಸದೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿವೆ. ಇದಕ್ಕಾಗಿ ಸ್ಕೋಡಾ ಕಾರು ನಿರ್ಮಾಣ ಘಟಕಗಳನ್ನು ಉನ್ನತೀಕರಿಸುತ್ತಿರುವ ಸ್ಕೋಡಾ ಕಂಪನಿಯು 2025ರ ವೇಳೆಗೆ ಭಾರತದಲ್ಲಿ ವಾರ್ಷಿಕವಾಗಿ 1 ಲಕ್ಷ ಕಾರುಗಳ ಮಾರಾಟ ಮಾಡುವ ಗುರಿಹೊಂದಿದೆ.

ಸದ್ಯ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸ್ಕೋಡಾ ಕಂಪನಿಯು ಶೀಘ್ರದಲ್ಲೇ ಹಲವು ಮಧ್ಯಮ ಗಾತ್ರದ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಕ್ಲಿಕ್ ಹೆಸರಿನ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಹೊಸ ಕ್ಲಿಕ್ ಕಾರು ವಿಡಬ್ಲ್ಯೂ ಎಂಕ್ಯೂಬಿ ಎಒ ಇನ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿ ಅಭಿವೃದ್ದಿಗೊಂಡಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದೆ. ಹೊಸ ಕಾರು ಸ್ಕೋಡಾ ಸರಣಿಯಲ್ಲಿರುವ ಕಾಮಿಕ್ ಎಸ್‍ಯುವಿಯ ಮಾದರಿಯಲ್ಲಿದ್ದು, ಹೊಸ ಎಸ್‍ಯುವಿಯು ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಹೆಚ್ಚು ವಿನ್ಯಾಸಗೊಳಿಸಲಾದ ಬಂಪರ್ ಅನ್ನು ಹೊಂದಿದೆ.

ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‍ಯುವಿಯ ಸೈಡ್ ಪ್ರೊಫೈಲ್‍ನಲ್ಲೂ ಶಾರ್ಪ್ ಲೈನ್‍ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೈಲ್‍ಲೈಟ್‍ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.

ಹಾಗೆಯೇ ಹೊಸ ಎಸ್‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇಂಟಿರಿಯರ್ ಮಧ್ಯದಲ್ಲಿ ಸೆಂಟರ್ ಕನ್ಸೊಲ್, ಫ್ಲಾಟ್ ಬಾಟಮ್ ಸ್ಟಿರಿಂಗ್ ವ್ಹೀಲ್ ಮತ್ತು 12-ಇಂಚಿನ ಟಚ್‍ಸ್ಕ್ರೀನ್ ಡಿಸ್‍ಪ್ಲೇ ಅಳವಡಿಸಲಾಗಿದೆ. ವರ್ಚುವಲ್ ಕಾಕ್‍ಪಿಟ್, ಕಾನ್ಫಿಗೆರ್ ಮಾಡಬಹುದಾದ ಟಿಎಫ್‍ಟಿ ಇನ್‌ಸ್ಟ್ರುಮೆಂಟ್ ಪ್ಯಾನೆಲ್ ಅನ್ನು ಸಹ ಹೊಂದಿದೆ.

ಎಂಜಿನ್ ಸಾಮರ್ಥ್ಯ
ಹೊಸ ಕಾರಿನಲ್ಲಿ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಮಾತ್ರವೇ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟ ಉತ್ತಮ ಸಂಚಲನಕ್ಕೆ ಕಾರಣವಾಗಲಿರುವ ಹೊಸ ಕಿಕ್ಲ್ ಕಾರು ಮುಂದಿನ ನವೆಂಬರ್ ಹೊತ್ತಿಗೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುವ ಸಾಧ್ಯತೆಗಳಿವೆ.


Click it and Unblock the Notifications








