ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಕರೋಕ್ ಎಸ್‍‍‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.24.99 ಲಕ್ಷಗಳಾಗಿದೆ.

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಸ್ಕೋಡಾ ಕಂಪನಿಯು ಕರೋಕ್ ಎಸ್‍ಯುವಿಯನ್ನು ಸ್ಥಳೀಯವಾಗಿ ಅಭಿವೃದ್ದಿಪಡಿಸಲು ಚಿಂತಿಸಿದೆ. ಇದರ ಬಗ್ಗೆ ಸ್ಕೋಡಾ ಆಟೋ ಇಂಡಿಯಾದ ನಿರ್ದೇಶಕರಾದ ಝ್ಯಾಕ್ ಹೋಲಿಸ್ ಅವರು ಮಾತನಾಡಿ, ಸ್ಥಳೀಯವಾಗಿ ನಮ್ಮ ಕರೋಕ್ ಎಸ್‍ಯುವಿಯನ್ನು ಅಭಿವೃದ್ದಿಪಡಿಸಲು ಬಯಸುತ್ತೇವೆ. ಆದರೆ ಕೆಲವು ಕಾಲವಾಕಾಶ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಇದೀಗ ಸ್ಕೋಡಾ ಕಂಪನಿಯು ಭಾರತಕ್ಕೆ ತರಲಾದ ಕರೋಕ್ ಎಸ್‍ಯುವಿಯ 1,000 ಯುನಿಟ್ ಗಳ ಮಾರಾಟಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ.

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಮಹಾರಾಷ್ಟ್ರದಲ್ಲಿರುವ ಸ್ಕೋಡಾ ಘಟಕದಲ್ಲಿ ಸ್ಥಳೀಯವಾಗಿ ಕರೋಕ್ ಎಸ್‍ಯುವಿಯನ್ನು ಅಭಿವೃದ್ದಿಪಡಿಸಲು ಚಿಂತಿಸಿದೆ. 2,500 ಯುನಿಟ್ ಗಳನ್ನು ಭಾರತಕ್ಕೆ ಆಮದು ಮಾಡಿ ನಂತರ ಸ್ಥಳೀಯವಾಗಿ ಜೋಡಿಸುವ ಸಾಧ್ಯತೆಗಳಿದೆ ಎಂದು ವರದಿಗಳು ಪ್ರಕಟವಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಇತ್ತೀಚೆಗೆ ಈ ಹೊಸ ಸ್ಕೊಡಾ ಕರೋಕ್ ಎಸ್‍‍‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಿದ್ದರು. ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಸ್ಕೋಡಾ ಕರೋಕ್ ಎಸ್‍‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಈ ಎಸ್‍ಯುವಿಯ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್, ಸನ್‍ರೂಫ್ ಮತ್ತು ಲೆದರ್ ಅಪ್‍‍ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿ ಹಲವಾರು ಆಧುನಿಕ ಫೀಚರ್ಸ್‍‍ಗಳನ್ನು ಹೊಂದಿದೆ. ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಎಎಫ್ಎಸ್ (ಅಡಾಪ್ಟಿವ್ ಫ್ರಂಟ್ ಲೈಟಿಂಗ್), ಸಿಗ್ನೇಚರ್ ಬಟರ್ಫ್ಲೈ ಗ್ರಿಲ್, ಸ್ಕ್ವೇರ್ ವೀಲ್ ಆರ್ಚ್, ಆರ್ 17 ಅರೋನಿಯಾ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಮತ್ತು ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್‌ಗಳೊಂದಿಗೆ ಸ್ಲಿಕ್ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಈ ಎಸ್‍ಯುವಿಯು 1.5 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿ‍‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಸ್ಥಳೀಯವಾಗಿ ಅಭಿವೃದ್ಧಿಯಾಗಲಿದೆ ಸ್ಕೋಡಾ ಕರೋಕ್ ಎಸ್‌ಯುವಿ

ಈ ಹೊಸ ಕರೋಕ್ ಎಸ್‍‍ಯುವಿಯನ್ನು ಡೀಸೆಲ್ ಎಂಜಿನ್‍‍ ಅಯ್ಕೆಯನ್ನು ಹೊಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.

Most Read Articles

Kannada
Read more on ಸ್ಕೋಡಾ skoda
English summary
Would like to bring in local assembly for Karoq. Read In Kannada.
Story first published: Friday, June 5, 2020, 11:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X