ಭಾರತದಲ್ಲಿ ಮೂರು ಹೊಸ ಕಾರು ಮಾದರಿಗಳಿಗೆ ಟ್ರೇಡ್ ಮಾರ್ಕ್ ದಾಖಲಿಸಿದ ಸ್ಕೋಡಾ
ಭಾರತದಲ್ಲಿ ಫೋಕ್ಸ್‌ವ್ಯಾಗನ್ ಜೊತೆಗೂಡಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿರುವ ಸ್ಕೋಡಾ ಇಂಡಿಯಾ ಕಂಪನಿಯು ವಿವಿಧ ಮಾದರಿಯ ಹಲವು ಹೊಸ ಕಾರುಗಳನ್ನು ಪರಿಚಯಿಸುತ್ತಿದ್ದು, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಬಜೆಟ್ ಬೆಲೆಯ ಮಧ್ಯಮ ಕ್ರಮಾಂಕದ ಕಾರು ಮಾದರಿಗಳನ್ನು ಪರಿಚಯಿಸುವ ಯೋಜನೆಯಲ್ಲಿದೆ.

ಸ್ಕೋಡಾ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಇಂಡಿಯಾ 2.0 ಪ್ರೋಜೆಕ್ಟ್‌ಗೆ ಚಾಲನೆ ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಸುಮಾರು ರೂ.7,500 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಯುರೋಪ್ ಮಾರುಕಟ್ಟೆಯಲ್ಲಿರುವ ಹಲವು ಕಾರುಗಳನ್ನು ಭಾರತದಲ್ಲೂ ಹೊಸ ವಿನ್ಯಾಸದೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿವೆ. ಇದಕ್ಕಾಗಿ ಸ್ಕೋಡಾ ಕಾರು ನಿರ್ಮಾಣ ಘಟಕಗಳನ್ನು ಉನ್ನತೀಕರಿಸುತ್ತಿರುವ ಸ್ಕೋಡಾ ಕಂಪನಿಯು 2025ರ ವೇಳೆಗೆ ಭಾರತದಲ್ಲಿ ವಾರ್ಷಿಕವಾಗಿ 1 ಲಕ್ಷ ಕಾರುಗಳ ಮಾರಾಟ ಮಾಡುವ ಗುರಿಹೊಂದಿದೆ.

ಸದ್ಯ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸ್ಕೋಡಾ ಕಂಪನಿಯು ಶೀಘ್ರದಲ್ಲೇ ಹಲವು ಮಧ್ಯಮ ಗಾತ್ರದ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ಸ್ಕೋಡಾ ಹೊಸ ಕಾರು ಮಾದರಿಗಳಿಗಾಗಿ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಲಾದ ಟ್ರೇಡ್ ಮಾರ್ಕ್ ಹೆಸರುಗಳಲ್ಲಿ ಹೊಸ ಕಾರು ಮಾಹಿತಿ ಲಭ್ಯವಾಗಿದ್ದು, ವಿವಿಧ ಸೆಗ್ಮೆಂಟ್‌ನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳು ಕಾಸ್ಮಿಕ್, ಕೂಷಾಕ್, ಕಾರ್ಮಿಕ್ ಹೆಸರನ್ನು ಕಾಯ್ದಿರಿಸಿದೆ.

ಹೊಸ ಕಾರುಗಳನ್ನು ಎಂಕ್ಯೂ ಎ0 ಇನ್ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಕಾರುಗಳು ಅಭಿವೃದ್ದಿಗೊಳ್ಳಲಿದ್ದು, ಫೋರ್ಕ್ಸ್‌ವ್ಯಾಗನ್ ಕಂಪನಿಯು ಕೂಡಾ ಇದೇ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿಯೇ ಹೊಸ ಕಾರುಗಳನ್ನು ನಿರ್ಮಾಣ ಮಾಡುತ್ತಿದೆ. ಹೊಸ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣಗೊಳ್ಳುವ ಕಾರುಗಳು ಭಾರತೀಯ ಗ್ರಾಹಕರ ಅಭಿರುಚಿ ತಕ್ಕಂತೆ ಸಿದ್ದಗೊಳ್ಳುತ್ತಿದ್ದು, ಸ್ಕೋಡಾ ಹೊಸ ಕಾರುಗಳಲ್ಲಿ ವಿಷನ್ ಕಾನ್ಸೆಪ್ಟ್ ಮಾದರಿಯು ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಕಾನ್ಸೆಪ್ಟ್ ಮಾದರಿಯಾಗಿರುವ ವಿಷನ್-ಇನ್ ಕಾರನ್ನು ಉತ್ಪಾದನಾ ಆವೃತ್ತಿಯೊಂದಿಗೆ 2021ರ ಜನವರಿಯಲ್ಲಿ ಅನಾವರಣಗೊಳಿಸಲಿರುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರನ್ನು ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ಸಿದ್ದತೆಯಲ್ಲಿದೆ.

ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಪೂರ್ಣಗೊಳಿಸುತ್ತಿದ್ದು, ಹೊಸ ಕಾರನ್ನು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಬಿಡುಗಡೆ ಮಾಡಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.

ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‍ಯುವಿಯ ಸೈಡ್ ಪ್ರೊಫೈಲ್‍ನಲ್ಲೂ ಶಾರ್ಪ್ ಲೈನ್‍ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೈಲ್‍ಲೈಟ್‍ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.


Click it and Unblock the Notifications