ಲಾಕ್‌ಡೌನ್ ವಿನಾಯ್ತಿ ನಂತರ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಫೋಕ್ಸ್‌ವ್ಯಾಗನ್ ಜೊತೆಗೂಡಿ ಭಾರತದಲ್ಲಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿರುವ ಸ್ಕೋಡಾ ಇಂಡಿಯಾ ಕಂಪನಿಯು ವಿವಿಧ ಮಾದರಿಯ ಹಲವು ಹೊಸ ಕಾರುಗಳನ್ನು ಪರಿಚಯಿಸುತ್ತಿದ್ದು, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಹೊಸ ಕಾರು ಮಾದರಿಗಳನ್ನು ಪರಿಚಯಿಸುವ ಯೋಜನೆಯಲ್ಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಸ್ಕೋಡಾ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಇಂಡಿಯಾ 2.0 ಪ್ರೋಜೆಕ್ಟ್‌ಗೆ ಚಾಲನೆ ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಸುಮಾರು ರೂ.7,500 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಯುರೋಪ್ ಮಾರುಕಟ್ಟೆಯಲ್ಲಿರುವ ಹಲವು ಕಾರುಗಳನ್ನು ಭಾರತದಲ್ಲೂ ಹೊಸ ವಿನ್ಯಾಸದೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿವೆ. ಇದಕ್ಕಾಗಿ ಸ್ಕೋಡಾ ಕಾರು ನಿರ್ಮಾಣ ಘಟಕಗಳನ್ನು ಉನ್ನತೀಕರಿಸುತ್ತಿರುವ ಸ್ಕೋಡಾ ಕಂಪನಿಯು 2025ರ ವೇಳೆಗೆ ಭಾರತದಲ್ಲಿ ವಾರ್ಷಿಕವಾಗಿ 1 ಲಕ್ಷ ಕಾರುಗಳ ಮಾರಾಟ ಮಾಡುವ ಗುರಿಹೊಂದಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಸದ್ಯ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸ್ಕೋಡಾ ಕಂಪನಿಯು ಶೀಘ್ರದಲ್ಲೇ ವಿವಿಧ ಮಾದರಿಯ ಹಲವು ಮಧ್ಯಮ ಗಾತ್ರದ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಕ್ಲಿಕ್ ಮತ್ತು ಕಾಮಿಕ್ ಕಾರುಗಳು ಭಾರತದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದೊಂದಿಗೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಮರುಚಾಲನೆ ಪಡೆದುಕೊಂಡಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿವೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಹೊಸ ಕಾಮಿಕ್ ಕಾರು ಕ್ಲಿಕ್ ಕಾರಿಗಿಂತಲೂ ಹೆಚ್ಚು ಬಲಿಷ್ಠ ಎಂಜಿನ್ ಮಾದರಿಯೊಂದಿಗೆ ಐಷಾರಾಮಿ ವೈಶಿಷ್ಟ್ಯತೆಗಳನ್ನು ಪಡೆದುಕೊಳ್ಳಲಿದ್ದು, 1.5-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಕಾಮಿಕ್ ಕಾರಿಗಿಂತಲೂ ಕೆಳ ದರ್ಜೆಯಲ್ಲಿ ಮಾರಾಟಗೊಳ್ಳಲಿರುವ ಕ್ಲಿಕ್ ಕಾರು 1.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದರೆ, ಕಾಮಿಕ್ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಬಿಡುಗಡೆಯಾಗಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಕಳೆದ ತಿಂಗಳು ಬಿಡುಗಡೆಯಾದ ಕರೋಕ್ ಎಸ್‌ಯುವಿ ಮಾದರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳಲಿರುವ ಕಾಮಿಕ್ ಕಾರು ಎಂಜಿ ಹೆಕ್ಟರ್, ಟಾಟಾ ಹ್ಯಾರಿಯರ್ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಕ್ಲಿಕ್ ಕಾರು ತುಸು ಕಡಿಮೆ ಬೆಲೆಯೊಂದಿಗೆ ಕಿಯಾ ಸೆಲ್ಟೊಸ್, ಹ್ಯುಂಡೈ ಕ್ರೆಟಾ ಕಾರುಗಳಿಗೆ ಪೈಪೋಟಿ ನೀಡಲಿದ್ದು, ಸ್ಕೋಡಾ ಹೊಸ ಕಾರುಗಳು ಇದೇ ವರ್ಷಾಂತ್ಯದೊಳಗೆ ಮಾರುಕಟ್ಟೆ ಪ್ರವೇಶಿಸಲಿವೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್

ಮಧ್ಯಮ ಕ್ರಮಾಂಕದಲ್ಲಿ ಬಿಡುಗಡೆಯಾಗಲಿರುವ ಕ್ಲಿಕ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.12 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಕಾಮಿಕ್ ಕಾರು ರೂ.15 ಲಕ್ಷದಿಂದ ರೂ. 19 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Kamiq SUV Spied In India. Read in Kannada.
Story first published: Monday, June 15, 2020, 11:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X