ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಕರೋಕ್ ಎಸ್‍‍‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ 2020ರ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಕರೋಕ್ ದುಬಾರಿಯಾಗಿದೆ ಎಂಬ ಟ್ವಿಟ್ಟರ್ ನಲ್ಲಿ ಒಬ್ಬರ ಪ್ರಶ್ನೆಗೆ ಉತ್ತರಿಸಿದ ಸ್ಕೋಡಾ ಆಟೋ ಇಂಡಿಯಾದ ಸೇಲ್ಸ್, ಸರ್ವಿಸ್ & ಮಾರ್ಕೆಟಿಂಗ್ ನಿರ್ದೇಶಕ ಜ್ಯಾಕ್ ಹೋಲಿಸ್ ಅವರು ಎಫ್‌ಬಿಯುನಂತೆ 1,000 ಕಾರುಗಳು ಮಾತ್ರ ಇದ್ದವು ಮತ್ತು ಅವೆಲ್ಲವನ್ನೂ ಮಾರಾಟ ಮಾಡಲಾಗಿದೆ ಎಂದು ಉತ್ತರಿಸಿದ್ದಾರೆ. ಕರೋಕ್ ಎಸ್‍ಯುವಿಯು ಭಾರತಕ್ಕೆ ಸಿಬಿಯು ಆಗಿ ತರಲಾಗಿದೆ. ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಗೆ ಹೋಲಿಸಿದರೆ ಪ್ರೀಮಿಯಂ ಬೆಲೆಗೆ ಮಾರಾಟ ಮಾಡಲಾಗಿದೆ.

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಆದರೆ ಈ ಸಂಕಷ್ಟದ ಸಮಯದಲ್ಲಿಯು ಸ್ಕೋಡಾ ಕಂಪನಿಯು ಸಿಬಿಯು ಮೂಲಕ ತರಲಾದ ಕರೋಕ್ 1000 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ . ಈ ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಸ್ಕೋಡಾ ಕರೋಕ್ ಎಸ್‍‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಈ ಎಸ್‍ಯುವಿಯ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್, ಸನ್‍ರೂಫ್ ಮತ್ತು ಲೆದರ್ ಅಪ್‍‍ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿ ಹಲವಾರು ಆಧುನಿಕ ಫೀಚರ್ಸ್‍‍ಗಳನ್ನು ಹೊಂದಿರಲಿದೆ. ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಎಎಫ್ಎಸ್ (ಅಡಾಪ್ಟಿವ್ ಫ್ರಂಟ್ ಲೈಟಿಂಗ್), ಸಿಗ್ನೇಚರ್ ಬಟರ್ಫ್ಲೈ ಗ್ರಿಲ್, ಸ್ಕ್ವೇರ್ ವೀಲ್ ಆರ್ಚ್, ಆರ್ 17 ಅರೋನಿಯಾ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಮತ್ತು ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್‌ಗಳೊಂದಿಗೆ ಸ್ಲಿಕ್ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಈ ಎಸ್‍ಯುವಿಯು 1.5 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿ‍‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಈ ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿಯನ್ನು ಡೀಸೆಲ್ ಎಂಜಿನ್‍‍ ಅಯ್ಕೆಯನ್ನು ಹೊಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಇನ್ನು ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 9 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಇಎಸ್‌ಸಿ, ಹಿಲ್-ಸ್ಟಾರ್ಟ್ ಅಸಿಸ್ಟ್ ಫ್ರಂಟ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಭರ್ಜರಿಯಾಗಿ ಮಾರಾಟವಾಯ್ತು ಸ್ಕೋಡಾ ಕರೋಕ್ ಎಸ್‍ಯುವಿ

ಈ ಜನಪ್ರಿಯ ಸ್ಕೋಡಾ ಕರೋಕ್ ಎಸ್‍‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಜಿ ಹೆಕ್ಟರ್, ಜೀಪ್ ಕಂಪಾಸ್, ಫೋಕ್ಸ್ ವ್ಯಾಗನ್ ಟಿ-ರಾಕ್ ಮತ್ತು ಹ್ಯುಂಡೈ ಟ್ಯೂಸಾನ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
Read more on ಸ್ಕೋಡಾ skoda
English summary
Skoda Karoq Almost Sold Out In India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X