6 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಕರೋಕ್ ಎಸ್‍‍‍ಯುವಿಯನ್ನು ಇತ್ತೀಚಿಗೆ ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಕರೋಕ್ ಎಸ್‍‍‍ಯುವಿಯನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ಎಸ್‍‍‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಿದೆ. ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಹೊಸ ಸ್ಕೋಡಾ ಕರೋಕ್ ಆರಂಭದಲ್ಲಿ (ಸಿಬಿ‍ಯು) ಕಂಪ್ಲೀಟ್ ಬಿಲ್ಟ್ ಯುನಿಟ್ ಆಗಿ ಲಭ್ಯವಿರುತ್ತದೆ. ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಬಿಡುಗಡೆಗೊಳಿಸಲಾಗುತ್ತದೆ. ಕರೋನಾ ಭೀತಿಯು ಕಡಿಮೆಯಾಗಿ ಸಹಜ ಸ್ಥಿತಿಗೆ ಬಂದಾಗ ಈ ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಗ್ರಾಹಕರಿಗೆ ವಿತರಿಸಲಾಗುತ್ತದೆ.

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ಬಿಡುಗಡೆಯಾಗಲಿರುವ ಸ್ಕೋಡಾ ಕರೋಕ್ ಎಸ್‍‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿರಲಿದೆ. ಈ ಸ್ಕೋಡಾ ಕರೋಕ್ ಎಸ್‍‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ. ಈ ಹೊಸ ಕರೋಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.23 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ಈ ಎಸ್‍ಯುವಿಯ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್ ಲೆದರ್ ಅಪ್‍‍ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿ ಹಲವಾರು ಆಧುನಿಕ ಫೀಚರ್ಸ್‍‍ಗಳನ್ನು ಹೊಂದಿರಲಿದೆ. ಈ ಹೊಸ ಸ್ಕೋಡಾ ಕರೋಕ್ ಆರು ಬಣ್ಣಗಳ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಇದು ಕ್ಯಾಂಡಿ ವೈಟ್, ಮ್ಯಾಗ್ನೆಟಿಕ್ ಬ್ರೌನ್, ಲಾವಾ ಬ್ಲೂ, ಮ್ಯಾಜಿಕ್ ಬ್ಲ್ಯಾಕ್, ಬ್ರಿಲಿಯಂಟ್ ಸಿಲ್ವರ್ ಮತ್ತು ಕ್ವಾಟರ್ಸ್ ಗ್ರೇ ಬಣ್ಣಗಳಾಗಿದೆ.

MOST READ: ಮಾರಾಟದಲ್ಲಿ ಶೂನ್ಯ ಸಾಧನೆ ಮಾಡಿದ ಎಂಜಿ ಮೋಟಾರ್

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ಈ ಎಸ್‍ಯುವಿಯು 1.5 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿ‍‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ಕಂಪನಿಯು ಹೊಸ ಕರೋಕ್ ಎಸ್‍‍ಯುವಿಯನ್ನು ಡೀಸೆಲ್ ಎಂಜಿನ್‍‍ನಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.

MOST READ: ಬಹಿರಂಗವಾಯ್ತು ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಮಾಹಿತಿ

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ದೇಶಿಯ ಮಾರುಕಟ್ಟೆಯಲ್ಲಿ ಒಂದು ಕಾಲದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದ ಸ್ಕೋಡಾ ನಿಧಾನವಾಗಿ ತನ್ನ ಬೇಡಿಕೆಯನ್ನು ಕಳೆದುಕೊಂಡಿದೆ. ಇದರಿಂದ ಮತ್ತೆ ಭಾರತದ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಲು ಸಜ್ಜಾಗುತ್ತಿದೆ. ಸ್ಕೋಡಾ ಮುಂದಿನ ಎರಡು ವರ್ಷಗಳಲ್ಲಿ 2.0 ಯೋಜನೆಯಡಿಯಲ್ಲಿ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ.

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಸ್ಕೋಡಾ ಕರೋಕ್ ಎಸ್‍‍‍ಯುವಿ

ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟಕ್ಸನ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
Read more on ಸ್ಕೋಡಾ skoda
English summary
Skoda Karoq SUV To Be Launched In One Variant, 6 Colours. Read in Kannada.
Story first published: Monday, May 4, 2020, 13:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X