ಆಟೋ ಎಕ್ಸ್‌ಪೋ 2020: ಅನಾವರಣವಾಯ್ತು ಹೊಸ ಸ್ಕೋಡಾ ಕರೋಕ್ ಎಸ್‍ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ಕರೋಕ್ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಹೊಸ ಕರೋಕ್ ಎಸ್‍ಯುವಿಯನ್ನು ಭಾರತದಲ್ಲಿ 2020ರ ಏಪ್ರಿಲ್‍ನಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

ಹೊಸ ಸ್ಕೋಡಾ ಕರೋಕ್ ಆರಂಭದಲ್ಲಿ (ಸಿಬಿಯು) ಕಂಪ್ಲೀಟ್ ಬಿಲ್ಟ್ ಯುನಿಟ್ ಆಗಿ ಲಭ್ಯವಿರುತ್ತದೆ. ಬಿಡುಗಡೆಯ ಸಮಯದಲ್ಲಿ ಪೆಟ್ರೋಲ್ ಎಂಜಿನ್‍ನೊಂದಿಗೆ ಮಾತ್ರ ಈ ಕಾರ್ ಲಭ್ಯವಿರುತ್ತದೆ. ಮುಂಬರುವ ಸ್ಕೋಡಾ ಕರೋಕ್ ಎಸ್‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಈ ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್ ಲೆದರ್ ಅಪ್‍ಹೋಲೆಸ್ಟರಿ ಸೀಟುಗಳನ್ನು ಹೊಂದಿದೆ.

ಸ್ಕೋಡಾ ಕರೋಕ್ ಎಸ್‍ಯುವಿ ಹಲವಾರು ಆಧುನಿಕ ಫೀಚರ್ಸ್‍ಗಳನ್ನು ಹೊಂದಿರಲಿದೆ. ಈ ಹೊಸ ಎಸ್‍ಯುವಿಯ ಕ್ಯಾಬಿನ್ ಬ್ಲಾಕ್ ಮತ್ತು ಬೀಜ್ ಬಣ್ಣಗಳಲ್ಲಿ ಲಭ್ಯವಿದೆ.

ಈ ಎಸ್‍ಯುವಿಯು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಕಂಪನಿಯು ಹೊಸ ಕರೋಕ್ ಎಸ್‍ಯುವಿಯನ್ನು ಡೀಸೆಲ್ ಎಂಜಿನ್‍ನಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.

ಸ್ಕೋಡಾ ಕರೋಕ್ ಎಸ್‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ. ಸ್ಕೋಡಾ ಕರೋಕ್ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟಕ್ಸನ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

ದೇಶಿಯ ಮಾರುಕಟ್ಟೆಯಲ್ಲಿ ಒಂದು ಕಾಲದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದ ಸ್ಕೋಡಾ ನಿಧಾನವಾಗಿ ತನ್ನ ಬೇಡಿಕೆಯನ್ನು ಕಳೆದುಕೊಂಡಿದೆ. ಇದರಿಂದ ಮತ್ತೆ ಭಾರತದ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಲು ಸಜ್ಜಾಗುತ್ತಿದೆ. ಸ್ಕೋಡಾ ಮುಂದಿನ ಎರಡು ವರ್ಷಗಳಲ್ಲಿ 2.0 ಯೋಜನೆಯಡಿಯಲ್ಲಿ ಆರು ಕಾರುಗಳನ್ನು ಬಿಡುಗಡೆಗೊಳಿಸುತ್ತಿದೆ.


Click it and Unblock the Notifications








