ಸ್ಕೋಡಾ ಬಿಡುಗಡೆ ಮಾಡಲಿರುವ ಹೊಸ ಕಾರಿನ ಅಧಿಕೃತ ಹೆಸರು ಬಹಿರಂಗ
ಸ್ಕೋಡಾ ಇಂಡಿಯಾ ಕಂಪನಿಯು ಇದೇ ವರ್ಷಾಂತ್ಯಕ್ಕೆ ಹೊಸ ಮಾದರಿಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಕ್ಲಿಕ್ ಎನ್ನುವ ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಕೆಲ ದಿನಗಳ ಹಿಂದಷ್ಟೇ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗುವ ಬಗ್ಗೆ ವರದಿಯಾಗಿತ್ತು. ಆದರೆ ಇದೀಗ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಹೊಸ ಕಾರು ಕ್ಲಿಕ್ ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರಿಗಾಗಿ ಅಧಿಕೃತ ಹೆಸರನ್ನು ಅಂತಿಮಗೊಳಿಸಿ ಹಕ್ಕುಸ್ವಾಮ್ಯ ದಾಖಲಿಸಿದೆ. ಹಕ್ಕುಸ್ವಾಮ್ಯ ಪಡೆದಿರುವ ಪ್ರತಿಯಲ್ಲಿ ಕ್ಲಿಕ್(kliq) ಎಂದು ನಮೂದಿಸಲಾಗಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿಗಾಗಿಯೇ ಈ ಪಡೆದುಕೊಂಡಿರುವ ಬಹುತೇಕ ಖಾತ್ರಿಯಾಗಿದೆ.

ಇನ್ನು ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‍ಯುವಿಯನ್ನು ಇತ್ತೀಚೆಗೆ 2020ರ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು.

ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ನೇರ ಪೈಪೋಟಿಯನ್ನು ನೀಡಲಿರುವ ಹೊಸ ಕಾರು ವಿಡಬ್ಲ್ಯೂ ಎಂಕ್ಯೂಬಿ ಎಒ ಇನ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿ ಅಭಿವೃದ್ದಿಗೊಂಡಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
MOST READ: ವಿದೇಶದಲ್ಲಿ ಹೆತ್ತವರಿಗೆ ಸರ್ಪೈಸ್ ಗಿಫ್ಟ್ ಕೊಟ್ಟಅನಿವಾಸಿ ಭಾರತೀಯ

ಕ್ಲಿಕ್ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍ಯುವಿಯ ಮಾದರಿಯಲ್ಲಿದ್ದು, ಹೊಸ ಸ್ಕೊಡಾ ಎಸ್‍ಯುವಿಯ ಮುಂಭಾಗ ದೊಡ್ಡ ಗ್ರಿಲ್ ಮತ್ತು ಹೆಚ್ಚು ವಿನ್ಯಾಸಗೊಳಿಸಲಾದ ಬಂಪರ್ ಅನ್ನು ಹೊಂದಿದೆ.

ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.
MOST READ: ಅತಿ ಕಡಿಮೆ ಬೆಲೆಯಲ್ಲಿ 'ಏರ್ 100' ವೆಂಟಿಲೆಟರ್ ಪರಿಚಯಿಸಿದ ಮಹೀಂದ್ರಾ

ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‍ಯುವಿಯ ಸೈಡ್ ಪ್ರೊಫೈಲ್‍ನಲ್ಲೂ ಶಾರ್ಪ್ ಲೈನ್‍ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೇಲ್‍ಲೈಟ್‍ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.

ಇನ್ನು ಹೊಸ ಎಸ್‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.
MOST READ: ಕೋವಿಡ್ 19 ಸೋಂಕಿತರನ್ನು ಪತ್ತೆಹಚ್ಚುತ್ತೆ ಈ ವಿಶೇಷ ಇನೋವಾ ಕಾರು..!

ಹಾಗೆಯೇ ಇಂಟಿರಿಯರ್ ಮಧ್ಯದಲ್ಲಿ ಸೆಂಟರ್ ಕನ್ಸೊಲ್, ಫ್ಲಾಟ್ ಬಾಟಮ್ ಸ್ಟಿರಿಂಗ್ ವ್ಹೀಲ್ ಮತ್ತು 12-ಇಂಚಿನ ಟಚ್‍ಸ್ಕ್ರೀನ್ ಡಿಸ್‍ಪ್ಲೇ ಅಳವಡಿಸಲಾಗಿದೆ. ವರ್ಚುವಲ್ ಕಾಕ್‍ಪಿಟ್, ಕಾನ್ಫಿಗೆರ್ ಮಾಡಬಹುದಾದ ಟಿಎಫ್‍ಟಿ ಇನ್‌ಸ್ಟ್ರುಮೆಂಟ್ ಪ್ಯಾನೆಲ್ ಅನ್ನು ಸಹ ಹೊಂದಿದೆ.

ಎಂಜಿನ್ ಸಾಮರ್ಥ್ಯ
ಹೊಸ ಕಾರಿನಲ್ಲಿ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಮಾತ್ರವೇ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟ ಉತ್ತಮ ಸಂಚಲನಕ್ಕೆ ಕಾರಣವಾಗಲಿರುವ ಹೊಸ ಕಾಸ್ಮಿಕ್ ಕಾರು ಮುಂದಿನ ನವೆಂಬರ್ ಹೊತ್ತಿಗೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುವ ಸಾಧ್ಯತೆಗಳಿವೆ.


Click it and Unblock the Notifications








