ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ಕೊಡಿಯಾಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಕೊಡಿಯಾಕ್ ಆಕರ್ಷಕ ಲುಕ್ ಮತ್ತು ನೂತನ ಫೀಚರ್ಸ್‍ಗಳನ್ನು ಬಿಡುಗಡೆಯಾಗಲಿದೆ.

ಸ್ಕೋಡಾ ಆಟೋ ಇಂಡಿಯಾ ಈ ವರ್ಷದ ಆರಂಭದಲ್ಲಿ ಕರೋಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು, ಇದೀಗ ಅದರ ದೊಡ್ಡ ಸಹೋದರ ಕೊಡಿಯಾಕ್ ಎಸ್‍ಯುವಿಯನ್ನು ಬಿಎಸ್ 6 ಆವೃತ್ತಿಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲು ಸ್ಕೋಡಾ ಸಜ್ಜಾಗಿದೆ. ರ‍್ಯಾಪಿಡ್ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ, ಸ್ಕೋಡಾ ಇಂಡಿಯಾ ಕಂಪನಿಯ ಸೇಲ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ಝ್ಯಾಗ್ ಹೋಲಿಸ್ ಅವರು ಬಿಎಸ್ 6 ಕೊಡಿಯಾಕ್ ಎಸ್‍ಯುವಿಯು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದ್ದೇವೆ ಎಂದು ಹೇಳಿದ್ದಾರೆ.

ಹೊಸ ಕೊಡಿಯಾಕ್ ಎಸ್‍ಯುವಿಯು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. 2020ರ ಆಟೋ ಎಕ್ಸ್ ಪೋದಲ್ಲಿ ಈ ಹೊಸ ಕೊಡಿಯಾಕ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿತ್ತು.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಕೊಡಿಯಾಕ್ ಎಸ್‍ಯುವಿಯು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. 2020ರ ಆಟೋ ಎಕ್ಸ್ ಪೋದಲ್ಲಿ ಈ ಹೊಸ ಕೊಡಿಯಾಕ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿತ್ತು.

ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷ ಅನ್ನು ನೀಡಲಾಗುತ್ತದೆ. ಕೊಡಿಯಾಕ್ ಆಲ್-ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಸ್‍ಯುವಿಯಲ್ಲಿ 360 ಡಿಗ್ರಿ ಕ್ಯಾಮರವನ್ನು ಅಳವಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಕೊಡಿಯಾಕ್ ಆಫ್-ರೋಡ್ ಫೀಚರ್ಸ್‍ಗಳನ್ನು ಹೊಂದಿದೆ. ಹೊಸ ಎಸ್‌ಯುವಿಯು ಸ್ಟೈಲ್ ಎಂಬ ಮೂಲ ಮಾದರಿ ಹಾಗೂ ಲೌರಿನ್ ಅಂಡ್ ಕ್ಲೆಮೆಂಟ್ ಎಂಬ ಟಾಪ್ ಮಾದರಿಗಳಲ್ಲಿ ಲಭ್ಯವಿದೆ. ಕೊಡಿಯಾಕ್ ಸ್ಕೌಟ್ ಈ ಸೆಗ್‍ಮೆಂಟಿನಲ್ಲಿರುವ ಇತರ ಎರಡು ರೂಪಾಂತರಗಳಿಗಿಂತ ಉತ್ತಮವಾದ ಆಫ್-ರೋಡರ್ ಆಗಿರಲಿದೆ.

ಈ ಎಸ್‍ಯುವಿನಲ್ಲಿ 18 ಇಂಚಿನ ಅಲಾಯ್ ವ್ಹೀಲ್‍ಗಳು, ಎಲ್‍ಇಡಿ ಹೆಡ್‍ಲ್ಯಾಂಪ್, ಗ್ರಿಲ್, ರೂಫ್ ರೈಲ್ಸ್, ವಿಂಡೋಸ್ ಮತ್ತು ಒಆರ್‍ವಿಎಂ ಹೌಸಿಂಗ್, ಮುಂಭಾಗ ಮತ್ತು ಹಿಂಭಾಗದ ಅಂಡರ್‍ಬಾಡಿ ಪ್ರೊಟೆಕ್ಷನ್ ಸೇರಿದಂತೆ ಹಲವಾರು ಫೀಚರ್‍ಗಳಿವೆ. ಸ್ಕೋಡಾ ಕೊಡಿಯಾಕ್ ಇಂಟಿರಿಯರ್‍ನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇಂಟಿರಿಯರ್ ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಇಂಟಿರಿಯರ್‍ನಲ್ಲಿ ಸೀಟ್‍ಗಳು, ಏರ್‍ಬ್ಯಾಗ್‍ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಪವರ್ ಹೊಂದಾಣಿಕೆ ಮಾಡಬಹುದಾದ ಫ್ರಂಟ್ ಡ್ರೈವರ್ ಮತ್ತು ಪ್ರಯಾಣಿಕರ ಸೀಟ್‍ಗಳು ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್‍ಗಳಿವೆ.

ಇದರೊಂದಿಗೆ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ 9.2 ಇಂಚಿನ ಟಚ್‍ಸ್ಕ್ರೀನ್ ಇನ್ಪೋಟೈನ್‍ಮೆಂಟ್ ಸಿಸ್ಟಂ ಅನ್ನು 10 ಸ್ಪೀಕರ್ 575 ಡಬ್ಲ್ಯು ಕ್ಯಾಂಟನ್ ಸೌಂಡ್ ಸಿಸ್ಟಂಗೆ ಜೋಡಿಸಲಾಗಿದೆ. ಇನ್ನು ಸ್ಟ್ಯಾಂಡರ್ಡ್ ಕೊಡಿಯಾಕ್‍ನಲ್ಲಿರುವ ಟಯರ್ ಫ್ರೆಶರ್ ಮಾನಿಟರಿಂಗ್ ಸಿಸ್ಟಂ ಮತ್ತು ಆಫ್ ರೋಡ್ ಡ್ರೈವ್ ಮೋಡ್ ವೈಶಿಷ್ಟ್ಯಗಳು ಈ ಟಾಪ್ ಎಂಡ್ ಎಸ್‍ಯುವಿಯಲ್ಲಿ ಲಭ್ಯವಿರುವುದಿಲ್ಲ.

ಕೊಡಿಯಾಕ್ ಎಸ್‍ಯುವಿಯು ಸ್ಕೋಡಾ ಕಂಪನಿಯ ಪ್ರಮುಖ ಎಸ್‍ಯುವಿಗಳಲ್ಲಿ ಒಂದಾಗಿದೆ. ಕೊಡಿಯಾಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಹೀಂದ್ರಾ ಜಿ4, ಟೊಯೋಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








