ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ಕೊಡಿಯಾಕ್ ಎಸ್‍‍‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಇದು ಆಕರ್ಷಕ ಲುಕ್ ಮತ್ತು ಉನ್ನತ ಫೀಚರ್ಸ್‍‍ಗಳನ್ನು ಹೊಂದಿರುವ ಪ್ರೀಮಿಯಂ ಎಸ್‍ಯುವಿಯಾಗಿದೆ.

ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು ಡೀಸೆಲ್ ಎಂಜಿನ್‍‍ನೊಂದಿಗೆ ಮಾತ್ರ ಲಭ್ಯವಿತ್ತು. ಆದರೆ 2020ರ ಆಟೋ ಎಕ್ಸ್ ಪೋದಲ್ಲಿ ಮೊದಲ ಬಾರಿಗೆ ಸ್ಕೋಡಾ ಕೊಡಿಯಾಕ್ 2.0 ಟಿ‍ಎಸ್‍ಐ ಪೆಟ್ರೋಲ್ ಎಂಜಿನ್‍‍ನ ಆವೃತ್ತಿಯನ್ನು ಪರಿಚಯಿಸಿದೆ. ಈ ಎಸ್‍‍ಯುವಿಯ ಅಳವಡಿಸಿರುವ 2.0 ಲೀಟರ್ ಟಿ‍ಎಸ್‍ಐ ಎಂಜಿನ್ 190 ಬಿ‍‍ಹೆಚ್‍ಪಿ ಪವರ್ ಮತ್ತು 320 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿ‍‍ಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಕೊಡಿಯಾಕ್ ಆಲ್-ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಸ್‍‍ಯುವಿಯಲ್ಲಿ 360 ಡಿಗ್ರಿ ಕ್ಯಾಮರವನ್ನು ಅಳವಡಿಸಲಾಗಿದೆ.

ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಕೊಡಿಯಾಕ್ ಆಫ್-ರೋಡ್ ಫೀಚರ್ಸ್‍‍ಗಳನ್ನು ಹೊಂದಿದೆ. ಹೊಸ ಎಸ್‌ಯುವಿಯು ಸ್ಟೈಲ್ ಎಂಬ ಮೂಲ ಮಾದರಿ ಹಾಗೂ ಲೌರಿನ್ ಅಂಡ್ ಕ್ಲೆಮೆಂಟ್ ಎಂಬ ಟಾಪ್ ಮಾದರಿಗಳಲ್ಲಿ ಲಭ್ಯವಿದೆ. ಕೊಡಿಯಾಕ್ ಸ್ಕೌಟ್ ಈ ಸೆಗ್‍‍ಮೆಂಟಿನಲ್ಲಿರುವ ಇತರ ಎರಡು ರೂಪಾಂತರಗಳಿಗಿಂತ ಉತ್ತಮವಾದ ಆಫ್-ರೋಡರ್ ಆಗಿರಲಿದೆ.

ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಈ ಎಸ್‍‍ಯು‍ವಿನಲ್ಲಿ 18 ಇಂಚಿನ ಅಲಾಯ್ ವ್ಹೀಲ್‍‍ಗಳು, ಎಲ್‍ಇ‍ಡಿ ಹೆಡ್‍‍ಲ್ಯಾಂಪ್, ಗ್ರಿಲ್, ರೂಫ್ ರೈಲ್ಸ್, ವಿಂಡೋಸ್ ಮತ್ತು ಒಆರ್‍‍ವಿಎಂ ಹೌಸಿಂಗ್, ಮುಂಭಾಗ ಮತ್ತು ಹಿಂಭಾಗದ ಅಂಡ‍‍ರ್‍‍ಬಾಡಿ ಪ್ರೊಟೆಕ್ಷನ್ ಸೇರಿದಂತೆ ಹಲವಾರು ಫೀಚರ್‍‍ಗಳಿವೆ. ಸ್ಕೋಡಾ ಕೊಡಿಯಾಕ್ ಇಂಟಿರಿಯರ್‍‍ನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.

ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಇಂಟಿರಿಯರ್ ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಇಂಟಿರಿಯರ್‍‍ನಲ್ಲಿ ಸೀಟ್‍ಗಳು, ಏರ್‍‍ಬ್ಯಾಗ್‍ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಪವರ್ ಹೊಂದಾಣಿಕೆ ಮಾಡಬಹುದಾದ ಫ್ರಂಟ್ ಡ್ರೈವರ್ ಮತ್ತು ಪ್ರಯಾಣಿಕರ ಸೀಟ್‍‍ಗಳು ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್‍‍ಗಳಿವೆ.

ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಇದರೊಂದಿಗೆ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ 9.2 ಇಂಚಿನ ಟಚ್‍‍ಸ್ಕ್ರೀನ್ ಇನ್ಪೋಟೈನ್‍‍ಮೆಂಟ್ ಸಿಸ್ಟಂ ಅನ್ನು 10 ಸ್ಪೀಕರ್ 575 ಡಬ್ಲ್ಯು ಕ್ಯಾಂಟನ್ ಸೌಂಡ್ ಸಿಸ್ಟಂಗೆ ಜೋಡಿಸಲಾಗಿದೆ. ಸ್ಟ್ಯಾಂಡರ್ಡ್ ಕೊಡಿಯಾಕ್‍‍ನಲ್ಲಿರುವ ಟಯರ್ ಫ್ರೆಶರ್ ಮಾನಿಟರಿಂಗ್ ಸಿಸ್ಟಂ ಮತ್ತು ಆಫ್ ರೋಡ್ ಡ್ರೈವ್ ಮೋಡ್ ವೈಶಿಷ್ಟ್ಯಗಳು ಈ ಟಾಪ್ ಎಂಡ್ ಎಸ್‍‍ಯುವಿಯಲ್ಲಿ ಲಭ್ಯವಿಲ್ಲ.

ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍ಯುವಿ ಅನಾವರಣ

ಕೊಡಿಯಾಕ್ ಎಸ್‍ಯುವಿಯು ಸ್ಕೋಡಾ ಕಂಪನಿಯ ಪ್ರಮುಖ ಎಸ್‍‍ಯು‍ವಿಗಳಲ್ಲಿ ಒಂದಾಗಿದೆ. ಕೊಡಿಯಾಕ್ ಎಸ್‍‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಜಿ4, ಟೊಯೋಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

More from DriveSpark

Article Published On: Sunday, February 9, 2020, 13:00 [IST]
English summary
Skoda Kodiaq transitions into BS6 era with 2.0-litre petrol engine. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+