ಮಧ್ಯಮ ಕ್ರಮಾಂಕದ ಸೆಡಾನ್ ಆವೃತ್ತಿಯಲ್ಲಿ 2021ಕ್ಕೆ ಮತ್ತೊಂದು ಸ್ಕೋಡಾ ಹೊಸ ಕಾರು

ಭಾರತದಲ್ಲಿ ಫೋಕ್ಸ್‌ವ್ಯಾಗನ್ ಜೊತೆಗೂಡಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿರುವ ಸ್ಕೋಡಾ ಇಂಡಿಯಾ ಕಂಪನಿಯು ವಿವಿಧ ಮಾದರಿಯ ಹಲವು ಹೊಸ ಕಾರುಗಳನ್ನು ಪರಿಚಯಿಸುತ್ತಿದ್ದು, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಬಜೆಟ್ ಕಾರು ಮಾದರಿಗಳನ್ನು ರಸ್ತೆಗಿಳಿಸುತ್ತಿದೆ.

ಮತ್ತೊಂದು ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸ್ಕೋಡಾ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಇಂಡಿಯಾ 2.0 ಪ್ರೋಜೆಕ್ಟ್‌ಗೆ ಚಾಲನೆ ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಸುಮಾರು ರೂ.7,500 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಯುರೋಪ್ ಮಾರುಕಟ್ಟೆಯಲ್ಲಿರುವ ಹಲವು ಕಾರುಗಳನ್ನು ಭಾರತದಲ್ಲೂ ಹೊಸ ವಿನ್ಯಾಸದೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿವೆ.

ಮತ್ತೊಂದು ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಇದಕ್ಕಾಗಿ ಸ್ಕೋಡಾ ಕಾರು ನಿರ್ಮಾಣ ಘಟಕಗಳನ್ನು ಉನ್ನತೀಕರಿಸುತ್ತಿರುವ ಸ್ಕೋಡಾ ಕಂಪನಿಯು 2025ರ ವೇಳೆಗೆ ಭಾರತದಲ್ಲಿ ವಾರ್ಷಿಕವಾಗಿ 1 ಲಕ್ಷ ಕಾರುಗಳ ಮಾರಾಟ ಮಾಡುವ ಗುರಿಹೊಂದಿದೆ.

ಮತ್ತೊಂದು ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸದ್ಯ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸ್ಕೋಡಾ ಕಂಪನಿಯು ಶೀಘ್ರದಲ್ಲೇ ಹಲವು ಮಧ್ಯಮ ಗಾತ್ರದ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆ ಅಡಿ ಮೊದಲ ಕಾರು ಮಾದರಿಯಾಗಿ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ನಂತರ ಮಧ್ಯಮ ಕ್ರಮಾಂಕದ ಸೆಡಾನ್ ಮಾದರಿಯೊಂದನ್ನು ಬಿಡುಗಡೆ ಮಾಡಲಿದೆ.

ಮತ್ತೊಂದು ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದ್ದು, 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಆವೃತ್ತಿಯನ್ನು ಸಹ ಪಡೆದುಕೊಳ್ಳಲಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಮತ್ತೊಂದು ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಮಾಧ್ಯಮ ಸಂದರ್ಶನದಲ್ಲಿ ಮಾತನಾಡಿದ ಸ್ಕೋಡಾ ಇಂಡಿಯಾ ಮುಖ್ಯಸ್ಥ ಜಾಕ್ ಹೊಲಿಸ್ ಅವರು ಇಂಡಿಯಾ 2.0 ಪ್ರೋಜೆಕ್ಟ್‌ ಅಡಿ ನಿರ್ಮಾಣವಾಗುತ್ತಿರುವ ಹೊಸ ಕಾರುಗಳ ಕುರಿತಂತೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಂದು ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಮೊದಲ ಹಂತವಾಗಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಬಿಡುಗಡೆಯಾಗಲಿದ್ದರೆ ಎರಡನೇ ಕಾರು ಮಾದರಿಯಾಗಿ ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆಗೊಳಿಸುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.11 ಲಕ್ಷದಿಂದ ರೂ. 15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ಲಾಕ್‌ಡೌನ್ ವಿನಾಯ್ತಿ ನಂತರ ಮೊದಲ ಬಾರಿಗೆ ನೆಕ್ಸಾನ್ ಇವಿ ವಿತರಣೆ ಪುನಾರಂಭಿಸಿದ ಟಾಟಾ

ಮತ್ತೊಂದು ಮಧ್ಯಮ ಕ್ರಮಾಂಕದ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸದ್ಯ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಮಾದರಿಗಿಂತಲೂ ಹೊಸ ಕಾರು ಹೆಚ್ಚು ಪ್ರೀಮಿಯಂ ಫೀಚರ್ಸ್ ಜೊತೆಗೆ ಬಲಿಷ್ಠ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, ಹೊಸ ಕಾರು 2021ರ ಮಧ್ಯಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Most Read Articles

Kannada
Read more on ಸ್ಕೋಡಾ skoda
English summary
Zac Hollis: Skoda ANB sedan looks “absolutely fantastic”, arriving in 2021. Read in Kannada.
Story first published: Friday, May 29, 2020, 20:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X