ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‍‍‍ಯುವಿಯನ್ನು ಇತ್ತೀಚೆಗೆ 2020ರ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಸ್ಕೋಡಾ ಆಟೋ ಕಂಪನಿಯು ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಈ ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‍‍‍ಯುವಿಯನ್ನು ಭಾರತದಲ್ಲಿ ಇದೇ ವರ್ಷಾಂತ್ಯಕ್ಕೆ ಅಥವಾ ಮುಂದಿನ 2021ರ ಆರಂಭದಲ್ಲಿ ಬಿಡುಗಡೆಗೊಳಿಸಲಿದ್ದು, ಈ ಹೊಸ ಎಸ್‍‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ನೇರ ಪೈಪೋಟಿಯನ್ನು ನೀಡಲಿದೆ. ವಿಡಬ್ಲ್ಯೂ ಎಂಕ್ಯೂಬಿ ಎಒ ಇನ್ ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿ ಅಭಿವೃದ್ದಿಗೊಂಡಿರುವ ಹೊಸ ಕಾರು ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಕಾಸ್ಮಿಕ್ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍‍ಯುವಿಯ ಮಾದರಿಯಲ್ಲಿದೆ. ಹೊಸ ಸ್ಕೊಡಾ ಎಸ್‍‍ಯುವಿಯ ಮುಂಭಾಗ ದೊಡ್ಡ ಗ್ರಿಲ್ ಮತ್ತು ಹೆಚ್ಚು ವಿನ್ಯಾಸಗೊಳಿಸಲಾದ ಬಂಪರ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಚಾಲಕನ ಸೀಟ್ ಸ್ವಲ್ಪ ಎತ್ತರವನ್ನು ಹೊಂದಿದೆ. ಈ ಎಸ್‍ಯುವಿಯ ಮುಂಭಾಗವು ಸಿಗ್ನೆಚರ್ ವಿನ್ಯಾಸವನ್ನು ಹೊಂದಿದೆ.

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಡ್ಯುಯಲ್ ಹೆಡ್‍‍ಲ್ಯಾಂಪ್‍, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍‍ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‍‍ಯುವಿಯ ಸೈಡ್ ಪ್ರೊಫೈಲ್‍‍ನಲ್ಲೂ ಶಾರ್ಪ್ ಲೈನ್‍‍ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೇಲ್‍‍ಲೈಟ್‍ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇನ್ನು ಹೊಸ ಎಸ್‍‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍‍‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಇಂಟಿರಿಯರ್ ಮಧ್ಯದಲ್ಲಿ ಸೆಂಟರ್ ಕನ್ಸೊಲ್, ಫ್ಲಾಟ್ ಬಾಟಮ್ ಸ್ಟಿರಿಂಗ್ ವ್ಹೀಲ್ ಮತ್ತು 12-ಇಂಚಿನ ಟಚ್‍‍ಸ್ಕ್ರೀನ್ ಡಿಸ್‍‍ಪ್ಲೇ ಅಳವಡಿಸಲಾಗಿದೆ. ವರ್ಚುವಲ್ ಕಾಕ್‍‍ಪಿಟ್, ಕಾನ್ಫಿಗೆರ್ ಮಾಡಬಹುದಾದ ಟಿ‍ಎ‍ಫ್‍‍ಟಿ ಇನ್‌ಸ್ಟ್ರುಮೆಂಟ್ ಪ್ಯಾನೆಲ್ ಅನ್ನು ಸಹ ಹೊಂದಿದೆ.

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿನ್ ಸಾಮರ್ಥ್ಯ

ಹೊಸ ಕಾರಿನಲ್ಲಿ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಮಾತ್ರವೇ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟ ಉತ್ತಮ ಸಂಚಲನಕ್ಕೆ ಕಾರಣವಾಗಲಿರುವ ಹೊಸ ಕಾಸ್ಮಿಕ್ ಕಾರು ಮುಂದಿನ ನವೆಂಬರ್ ಹೊತ್ತಿಗೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

Most Read Articles

Kannada
Read more on ಸ್ಕೋಡಾ skoda
English summary
According to report, Skoda India likely to named its mid size SUV as Kosmiq and it will be based on Volkswagen MQB A0 IN platform.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X