ಇನ್ನೂ ಲಭ್ಯವಿದೆ ಸ್ಕೋಡಾ ಕಂಪನಿಯ ಈ ಪರ್ಫಾಮೆನ್ಸ್ ಕಾರು
ಸ್ಕೋಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 2020ರ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಎಲ್ಲಾ ಯುನಿಟ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು ಈ ಹಿಂದೆ ವರದಿಗಳು ಪ್ರಕಟವಾಗಿತ್ತು. ಆದರೆ ಇದರಲ್ಲಿ ಕೆಲವು ಗ್ರಾಹಕರು ಈ ಕಾರನ್ನು ಬುಕ್ಕಿಂಗ್ ಮಾಡಿ ನಂತರ ಅದನ್ನು ರದ್ದುಪಡಿಸಲಾಗಿದೆ.

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.36 ಲಕ್ಷಗಳಾಗಿದೆ. ಆದರೆ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಆನ್-ರೋಡ್ ಬೆಲೆಯನ್ನು ತಿಳಿದ ಬಳಿಕ ಹಲವು ಗ್ರಾಹಕರು ಹಿಂದೆ ಸರಿದಿದ್ದಾರೆ. ಬುಕ್ಕಿಂಗ್ ಮಾಡಿದ ಹಲವು ಗ್ರಾಹಕರು ಆನ್-ರೋಡ್ ಬೆಲೆ ತಿಳಿದು ರದ್ದುಗೊಳಿಸಲಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಆನ್-ರೋಡ್ ಬೆಲೆಯು ರೂ.45.08 ಲಕ್ಷಗಳಾಗಿದೆ. ಈ ಬೆಲೆಯಲ್ಲಿ ಬಿಎಂಡಬ್ಲ್ಯು, ಮರ್ಸಿಡಿಸ್ ಬೆಂಝ್ ಮತ್ತು ಜಾಗ್ವಾರ್ ಕಾರುಗಳಂತಹ ಐಷಾರಾಮಿ ಕಾರುಗಳ ಬೇಸ್ ಮಾದರಿಗಳನ್ನು ಖರೀದಿಸಬಹುದಾಗಿದೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರು ಪರ್ಫಾಮೆನ್ಸ್ ಮಾದರಿಯಾಗಿದೆ. ಈ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಹೆಚ್ಚು ಬೆಂಗಳೂರಿಗರು ಖರೀದಿಸಿದ್ದಾರೆ. ಇನ್ನು ಹಲವು ಜನರು ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಬುಕ್ಕಿಂಗ್ ಮಾಡಿ ಹಲವರು ರದ್ದುಗೊಳಿಸಿರುವುದರಿಂದ ಇನ್ನು ಕೂಡ ಖರೀದಿಗೆ ಲಭ್ಯವಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕಾರದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್‍ನಲ್ಲಿ ಆರ್‍ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್‍ಲ್ಯಾಂಪ್‍ಗಳನ್ನು ಒಳಗೊಂಡಿದೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆರ್‍ವಿಎಂಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್‍ಗಳು, ವೈಡರ್ ಏರ್ ಡ್ಯಾಮ್‍ಗಳು ಮತ್ತು ಫ್ರಂಟ್ ಬಂಪರ್‍ಗಳನ್ನು ಹೊಂದಿವೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್‍ಲ್ಯಾಂಪ್‍ಗಳನ್ನು ಒಳಗೊಂಡಿದೆ. ಇನ್ನೂ ಇಂಟಿರಿಯರ್‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍ನೆಟ್ ಕನೆಕ್ಟಿವಿಟಿ ಫೀಚರ್ಸ್‍ಗಳೊಂದಿಗೆ 8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ 2.0 ಲೀಟರ್ ಟಿಎಸ್‍ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 242 ಬಿಹೆಚ್‍ಪಿ ಪವರ್ ಮತ್ತು 370 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಸೆಡಾನ್ ಕೇವಲ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿಎಂಡಬ್ಲ್ಯೂ 3 ಸೀರಿಸ್ ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications