Just In
- 11 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 14 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 14 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 16 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಆರಂಭವಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ ಕಾರಿನ ಬುಕ್ಕಿಂಗ್
ಸ್ಕೋಡಾ ಇಂಡಿಯಾ ತನ್ನ ಹೊಸ ಆಕ್ಟೀವಿಯಾ ಆರ್ಎಸ್ 245 ಕಾರನ್ನು 2020ರ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.36 ಲಕ್ಷಗಳಾಗಿದೆ.
ಹೊಸ ಆಕ್ಟೀವಿಯಾ ಆರ್ಎಸ್ 245 ಕಾರಿನ ಬುಕ್ಕಿಂಗ್ ಪ್ರಕ್ರಿಯೆಯು ಮಾರ್ಚ್ 1ರ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಈ ಹೊಸ ಕಾರಿಗಾಗಿ ಮಾರ್ಚ್ 1ರಂದು ಸ್ಕೋಡಾ ಕಂಪನಿಯ ಅಧಿಕೃತ ವೆಬ್ಸೈಟ್ ಮೂಲಕ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಆಕ್ಟೀವಿಯಾ ಆರ್ಎಸ್ 245 ಕಾರನ್ನು ಕೇವಲ 200 ಯುನಿಟ್ಗಳಿಗೆ ಸೀಮಿತಗೊಳಿಸಿ ಬಿಡುಗಡೆಗೊಳಿಸಿದೆ.
ಇದೇ ಕಾರಣದಿಂದ ಈ ಕಾರನ್ನು ಖರೀದಿಸಲು ಬಯಸುವವರು ಮಾರ್ಚ್ 1ರಂದು ಬುಕ್ಕಿಂಗ್ ಖಚಿತಪಡಿಸಿಕೊಳ್ಳುವುದು ಉತ್ತಮವಾಗಿದೆ. ಈ ಕಾರನ್ನು ಸಿಬಿಯು ಮೂಲಕ ಭಾರತಕ್ಕೆ ತರಲಾಗುತ್ತದೆ. ಏಪ್ರಿಲ್ ತಿಂಗಳಿನಿಂದ ಆಕ್ಟೀವಿಯಾ ಆರ್ಎಸ್ 245 ಕಾರಿನ ವಿತರಣೆಯು ಆರಂಭವಾಗಲಿದೆ.
ಆಕ್ಟೀವಿಯಾ ಆರ್ಎಸ್ 245 ಕಾರು ರ್ಯಾಲಿ ಗ್ರೀನ್, ರೇಸ್ ಬ್ಲೂ, ಕೊರಿಡಾ ರೆಡ್, ಮ್ಯಾಜಿಕ್ ಬ್ಲ್ಯಾಕ್ ಮತ್ತು ಕ್ಯಾಂಡಿ ವೈಟ್ ಎಂಬ 5 ಬಣ್ಣಗಳಲ್ಲಿ ಲಭ್ಯವಿರಲಿದೆ. ಆರ್ಎಸ್ ಮಾದರಿಯು ಪ್ರಸ್ತುತ ತಲೆಮಾರಿನ ಸ್ಕೋಡಾ ಆಕ್ಟೀವಿಯಾವನ್ನು ಆಧರಿಸಿದೆ.
ಸ್ಕೋಡಾ ಅಕ್ಟೀವಿಯಾ ಆರ್ಎಸ್ ಕಾರ್ ಅನ್ನು ಮೊದಲ ಬಾರಿಗೆ 2017ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಆಕ್ಟೀವಿಯಾ ಆರ್ಎಸ್ ಮಾದರಿಯು ಬಿಡುಗಡೆಯಾದ ಮೊದಲ ವಾರದಲ್ಲಿ 250 ಯುನಿಟ್ಗಳು ಮಾರಾಟವಾಗಿದ್ದವು. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಆಕ್ಟೀವಿಯಾ ಆರ್ಎಸ್ ಒಂದಾಗಿದೆ.
ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಸೆಡಾನ್ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್ನಲ್ಲಿ ಆರ್ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್ಲ್ಯಾಂಪ್ಗಳನ್ನು ಒಳಗೊಂಡಿದೆ. ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆರ್ವಿಎಂಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್ಗಳು, ವೈಡರ್ ಏರ್ ಡ್ಯಾಮ್ಗಳು ಮತ್ತು ಫ್ರಂಟ್ ಬಂಪರ್ಗಳನ್ನು ಹೊಂದಿವೆ.
ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್ಲ್ಯಾಂಪ್ಗಳನ್ನು ಒಳಗೊಂಡಿದೆ. ಇನ್ನೂ ಇಂಟಿರಿಯರ್ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್ನೆಟ್ ಕನೆಕ್ಟಿವಿಟಿ ಫೀಚರ್ಸ್ಗಳೊಂದಿಗೆ ಎಂಟು ಇಂಚಿನ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.
ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಸೆಡಾನ್ 2.0 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 242 ಬಿಹೆಚ್ಪಿ ಪವರ್ ಮತ್ತು 370 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಎಂಜಿನ್ನೊಂದಿಗೆ 7 ಸ್ಪೀಡ್ ಡಿಎಸ್ಜಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್245 ಸೆಡಾನ್ ಕೇವಲ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.
ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿಎಂಡಬ್ಲ್ಯೂ 3 ಸೀರಿಸ್ ಮತ್ತು ಜಾಗ್ವಾರ್ ಎಕ್ಸ್ಇ ಕಾರುಗಳಿಗೆ ಪೈಪೋಟಿ ನೀಡಲಿದೆ.