ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಸ್ಕೋಡಾ ಇಂಡಿಯಾ ತನ್ನ ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ ಎಂದು ಕಂಪನಿಯು ಅಧಿಕೃತವಾಗಿ ಖಚಿತಪಡಿಸಿದೆ. ಮುಂದಿನ ವಾರ ನಡೆಯಲಿರುವ ಆಟೋ ಎಕ್ಸ್ ಪೋದಲ್ಲಿ ಆಕ್ಟೀವಿಯಾ ಆರ್‍ಎಸ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಈ ಹೊಸ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಲ್ಲಿ ಒಂದಾಗಿದೆ. ಸ್ಕೋಡಾ ಅಕ್ಟೀವಿಯಾ ಆರ್‍ಎಸ್ ಕಾರ್ ಅನ್ನು ಮೊದಲ ಬಾರಿಗೆ 2017ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಆಕ್ಟೀವಿಯಾ ಆರ್‍ಎಸ್ ಮಾದರಿಯು ಬಿಡುಗಡೆಯಾದ ಮೊದಲ ವಾರದಲ್ಲಿ 250 ಯು‍‍ನಿ‍‍ಟ್‍ಗಳು ಮಾರಾಟವಾಗಿದ್ದವು. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಆಕ್ಟೀವಿಯಾ ಆರ್‍ಎಸ್ ಒಂದಾಗಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಆರ್‍ಎಸ್ ಮಾದರಿಯು ಪ್ರಸ್ತುತ ತಲೆಮಾರಿನ ಸ್ಕೋಡಾ ಆಕ್ಟೀವಿಯಾವನ್ನು ಆಧರಿಸಿದೆ. ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್‍‍ನಲ್ಲಿ ಆರ್‍ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆ‍‍ರ್‍‍ವಿಎಂ‍ಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್‍‍ಗಳು, ವೈಡರ್ ಏ‍‍ರ್ ಡ್ಯಾಮ್‍‍ಗಳು ಮತ್ತು ಫ್ರಂಟ್ ಬಂಪರ್‍‍ಗಳನ್ನು ಹೊಂದಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಈ ಸೆಡಾನ್ 30 ಎಂಎಂ ಅಗಲದ ರೇರ್ ಟ್ರ್ಯಾಕ್‍ನಲ್ಲಿ 15 ಎಂಎಂ ಕಡಿಮೆ ಇರುತ್ತದೆ. ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಇನ್ನೂ ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ ಎಂಟು ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಅಳವಡಿಸಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಮುಂಬರುವ ಸ್ಕೋಡಾ ಆಕ್ಟೀವಿಯಾ ಆರ್‍ಎಸ್‍ 2.0 ಲೀಟರ್ ಟರ್ಬೋಜಾರ್ಜ್ಡ್ ಟಿ‍ಎಸ್ಐ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 245 ಬಿ‍‍ಹೆಚ್‍‍ಪಿ ಪವರ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 7 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಮತ್ತು 7 ಸ್ಪೀಡ್ ಡಿ‍ಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಈ ಸೆಡಾನ್ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಮುಂದಿನ ಎರಡು ವರ್ಷಗಳಲ್ಲಿ ಸ್ಕೋಡಾ ಭಾರತದಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಆರು ಕಾರುಗಳಲ್ಲಿ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ ಕೂಡ ಒಂದಾಗಿದೆ. ಸ್ಕೋಡಾ 2.0 ಯೋಜನೆಯಡಿಯಲ್ಲಿ ಈ ಕಾರ್ ಅನ್ನು ಕೂಡ ಬಿಡುಗಡೆ ಮಾಡಲಿದೆ.

ಬಿಡುಗಡೆಯಾಗಲಿದೆ 2020ರ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245

ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಬಹುನೀರಿಕ್ಷಿತ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ ಕಾರು ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245, ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.35 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸಬಹುದು.

Most Read Articles

Kannada
Read more on ಸ್ಕೋಡಾ skoda
English summary
Skoda Octavia RS relaunch confirmed, returning in the RS 245 variant. Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X