2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಸ್ಕೋಡಾ ಕಂಪನಿಯು ರ‍್ಯಾಪಿಡ್ ಸೆಡಾನ್ ಮಾದರಿಯ ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದ್ದು, ಹೊಸ ಕಾರು 2021ರ ಮಧ್ಯಂತರದಲ್ಲಿ ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗುವ ಬಗ್ಗೆ ಸುಳಿವು ನೀಡಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಭಾರತದಲ್ಲಿ ರ‍್ಯಾಪಿಡ್ ಸೆಡಾನ್ ಮಾದರಿಯನ್ನು ಈ ಹಿಂದೆ 2011ರಲ್ಲಿ ಮೊದಲ ಬಾರಿಗೆ ಬಿಡುಗಡೆ ಮಾಡಿದ್ದ ಸ್ಕೋಡಾ ಕಂಪನಿಯು ಇದುವರೆಗೂ ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡಿಲ್ಲ. ಕಾಲ ಕಾಲಕ್ಕೆ ಕಾರಿನ ತಾಂತ್ರಿಕ ಅಂಶಗಳಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದ್ದು, ಕಳೆದ ತಿಂಗಳು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಲಾಗಿದೆ. ಆದರೆ ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡಬೇಕೆಂಬ ಯೋಜನೆಯನ್ನು ಮುಂದೂಡುತ್ತಲೇ ಬಂದಿರುವ ಸ್ಕೋಡಾ ಕಂಪನಿಯು 2021ಕ್ಕೆ ಬಿಡುಗಡೆ ಮಾಡಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಹೊಸ ಕಾರು ಮಾದರಿಗಳ ವಿನ್ಯಾಸ ಮತ್ತು ಕಾರ್ಯಕ್ಷಮತೆ ಹೆಚ್ಚಿಸಲು ನೆರವಾಗುವಂತ ಎಂಕ್ಯೂಬಿ ಪ್ಲ್ಯಾಟ್‌ಫಾರ್ಮ್ ಅಡಿ ಹೊಸ ಕಾರು ಅಭಿವೃದ್ದಿಗೊಳ್ಳಲಿದ್ದು, ಹೊಸ ತಲೆಮಾರಿನ ಕಾರಿನಲ್ಲಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುವ ಮೂಲಕ ಮತ್ತಷ್ಟು ಸೆಡಾನ್ ಪ್ರಿಯರನ್ನು ಸೆಳೆಯಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಜೊತೆಗೆ ಹೊಸ ಕಾರಿನ ಎಂಜಿನ್ ಆಯ್ಕೆಯಲ್ಲೂ ತುಸು ಬದಲಾವಣೆಗೊಳ್ಳುವ ಸಾಧ್ಯತೆಗಳಿದ್ದು, ಸದ್ಯ ಬಿಎಸ್-6 ರ‍್ಯಾಪಿಡ್ ಕಾರಿನಲ್ಲಿ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಎಂಜಿನ್ ಮಾತ್ರ ಬಳಕೆ ಮಾಡಲಾಗುತ್ತಿದೆ. ಆದರೆ ಹೊಸ ತಲೆಮಾರಿನ ರ‍್ಯಾಪಿಡ್‍ನಲ್ಲಿ ಹೊಸದಾಗಿ ಮತ್ತೊಂದು ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿವೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಬಿಎಸ್-6 ಜಾರಿ ನಂತರ ರ‍್ಯಾಪಿಡ್ ಸೆಡಾನ್‌ನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಿರುವ ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್‌ನಿಂದ ಎರವಲು ಪಡೆದುಕೊಳ್ಳಲಾದ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟಮಾಡುತ್ತಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

1.0-ಲೀಟರ್ ಟಿಎಸ್ಐ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಉತ್ಪಾದನಾ ಗುಣಹೊಂದಿದ್ದು, ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿರುವ ಹೊಸ ಎಂಜಿನ್ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯಲ್ಲಿ ಇದೇ ತಿಂಗಳು 17ಕ್ಕೆ ಆಟೋಮ್ಯಾಟಿಕ್ ಆವೃತ್ತಿಯನ್ನು ಸಹ ಬಿಡುಗಡೆ ಮಾಡುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆ ಹೊಂದಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಇದೀಗ ಬಿಡುಗಡೆಯಾಗಲಿರುವ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯು ಹೋಂಡಾ ಸಿಟಿ ಮತ್ತು ಹ್ಯುಂಡೆ ವೆರ್ನಾ ಕಾರುಗಳಿಗೆ ಪೈಪೋಟಿ ನೀಡಲಿದ್ದು, ಆಟೋಮ್ಯಾಟಿಕ್ ಆವೃತ್ತಿಯ ಮ್ಯಾನುವಲ್ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 20 ಸಾವಿರ ರೂ.40 ಸಾವಿರದಷ್ಟು ಹೆಚ್ಚಳವಾಗಿರಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ‌ರ‍್ಯಾಪಿಡ್ ಸೆಡಾನ್

ಬಿಎಸ್-6 ರ‍್ಯಾಪಿಡ್ ಕಾರು ರೈಡರ್, ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳೊಂದಿಗೆ ಮಾರಾಟವಾಗುತ್ತಿದ್ದು, ನ್ಯೂ ಜನರೇಷನ್ ಮಾದರಿಯು ಬಿಎಸ್-6 ಮಾದರಿಗಿಂತಲೂ ವಿಭಿನ್ನ ತಾಂತ್ರಿಕ ಅಂಶಗಳೊಂದಿಗೆ ಹೆಚ್ಚುವರಿ ಬೆಲೆ ಹೊಂದಿರಲಿದೆ.

Most Read Articles

Kannada
Read more on ಸ್ಕೋಡಾ skoda
English summary
New-Generation Skoda Rapid To Launch In India Next Year. Read in Kannada.
Story first published: Saturday, September 12, 2020, 10:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X