ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ಸ್ಕೋಡಾ ಇಂಡಿಯಾ ಕಂಪನಿಯು ಬಿಎಸ್-6 ರ‍್ಯಾಪಿಡ್ ಸೆಡಾನ್ ಮಾದರಿಯೊಂದಿಗೆ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆಯ ನಂತರ ಮತ್ತಷ್ಟು ಬೇಡಿಕೆ ಹೆಚ್ಚಳವಾಗಿದೆ.

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ರ‍್ಯಾಪಿಡ್ ಬಿಎಸ್-6 ಮಾದರಿಯನ್ನು ರೈಡರ್, ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳೊಂದಿಗೆ ಮಾರಾಟಗೊಳಿಸುತ್ತಿರುವ ಸ್ಕೋಡಾ ಕಂಪನಿಯು ಗ್ರಾಹಕರ ಬೇಡಿಕೆ ಆಧಾರ ಮೇಲೆ ಬೆಸ್ ವೆರಿಯೆಂಟ್ ರೈಡರ್ ಮಾದರಿಯ ಮಾರಾಟವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ರ‍್ಯಾಪಿಡ್ ಖರೀದಿಸುವ ಬಹುತೇಕ ಗ್ರಾಹಕರು ಮಧ್ಯಮ ಕ್ರಮಾಂಕದಲ್ಲಿನ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳಿಗೆ ಹೆಚ್ಚಿನ ಬೇಡಿಕೆ ಸಲ್ಲಿಸುತ್ತಿದ್ದಾರೆ.

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ಸೆಡಾನ್ ಕಾರು ಮಾದರಿಯಲ್ಲೇ ರ‍್ಯಾಪಿಡ್ ಕಾರು ಮಾದರಿಯನ್ನು ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳಿಸುವ ಸಂಬಂಧ ರೈಡರ್ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದ ಸ್ಕೋಡಾ ಕಂಪನಿಯು ಇದೀಗ ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಸ್ಟಾಕ್ ಮುಕ್ತಾಯದ ತನಕ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ಇನ್ನುಳಿದಂತೆ ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳ ಮಾರಾಟವು ಎಂದಿನಂತೆ ಮುಂದುವರಿಯಲಿದ್ದು, ಪ್ರತಿ ಮಾದರಿಯಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳ ಆಯ್ಕೆ ಹೊಂದಿದೆ.

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ರೈಡರ್ ಮಾದರಿಯ ಸ್ಥಗಿತ ನಂತರ ರ‍್ಯಾಪಿಡ್ ಕಾರಿನ ಬೆಲೆಯು ಆರಂಭಿಕವಾಗಿ ರೂ.7.49 ಲಕ್ಷದಿಂದ ರೂ. 7.99 ಲಕ್ಷಕ್ಕೆ ಏರಿಕೆಯಾಗಿದ್ದು, ಟಾಪ್ ಎಂಡ್ ಮಾಂಟೆ ಕಾರ್ಲೋ ಆಟೋಮ್ಯಾಟಿಕ್ ಆವೃತ್ತಿಯು ರೂ. 13.29 ಲಕ್ಷ ಬೆಲೆ ಹೊಂದಿದೆ. ಆಟೋಮ್ಯಾಟಿಕ್ ಆವೃತ್ತಿಯು ಸದ್ಯ ಸೆಡಾನ್ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಸೆಡಾನ್ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದೆ.

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

1.0-ಲೀಟರ್(999 ಸಿಸಿ) ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು 16.24 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ರ‍್ಯಾಪಿಡ್ ಬೆಸ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದ ಸ್ಕೋಡಾ

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.

More from DriveSpark

Article Published On: Thursday, December 10, 2020, 11:19 [IST]
English summary
Skoda Rapid Base Variant Rider Discontinued. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+