ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ರ‍್ಯಾಪಿಡ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ರ‍್ಯಾಪಿಡ್ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಈ ಹೊಸ ಸ್ಕೋಡಾ ರ‍್ಯಾಪಿಡ್ ಕಾರಿನಲ್ಲಿ ಬಿಎಸ್-6 ಮಾದರಿಯ ಟಾರ್ಕ್ ಕರ್ನ್‍‍ವಾಟರ್ ಅನ್ನು ನೀಡಲಾಗುವುದು ಎಂದು ಸ್ಕೋಡಾ ಆಟೋ ಇಂಡಿಯಾದ ಮಾರಾಟ ಮತ್ತು ಮಾರುಕಟ್ಟೆ ನಿರ್ದೇಶಕ ಝಾಕ್ ಹೋಲಿಸ್ ಖಚಿತಪಡಿಸಿದ್ದಾರೆ. ಹೊಸ ಸ್ಕೋಡಾ ರ‍್ಯಾಪಿಡ್ ಕಾರನ್ನು ಮುಂದಿನ ಏಪ್ರಿಲ್ ತಿಂಗಳಲ್ಲಿ ಭಾರತೀಯ ಮಾರುಕಟ್ಟಿಯಲ್ಲಿ ಬಿಡಗಡೆಗೊಳಿಸಬಹುದು. 2020ರ ಸ್ಕೋಡಾ ರ‍್ಯಾಪಿಡ್ ಕಾರಿನಲ್ಲಿ ಹೊಸದಾಗಿ 1.0 ಲೀಟರ್ ಟಿ‍ಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಈ ಎಂಜಿನ್ 115 ಬಿ‍‍ಹೆಚ್‍‍ಪಿ ಪವರ್ ಮತ್ತು 200 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಈಂಜಿನ್‍‍ನೊಂದಿಗೆ 6-ಸ್ಪೀಡ್ ಟಾರ್ಕ್ ಕರ್ನ್‍‍ವಾಟರ್ ಅನ್ನು ಹೊಂದಿರುತ್ತದೆ. ಹೊಸ ರ‍್ಯಾಪಿಡ್ ಕಾರು ಡೀಸೆಲ್ ಎಂಜಿನ್‍‍ನಲ್ಲಿ ಲಭ್ಯವಿರುವುದಿಲ್ಲ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಹೊಸ ಸ್ಕೋಡಾ ರ‍್ಯಾಪಿಡ್ ಮ್ಯಾಟ್ ಕಾನ್ಸೆಪ್ಟ್ ಮತ್ತು ಮಾಂಟೆ ಕಾರ್ಲೊ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಈ ಎರಡು ರೂಪಾಂತರಗಳು ವಿನ್ಯಾಸ ಬದಲಾವಣೆಗಳಿಂದ ಪ್ರತ್ಯೇಕಿಸಲಾಗಿದೆ. ಈ ರ‍್ಯಾಪಿಡ್ ಮ್ಯಾಟ್ ರೂಪಾಂತರದ ಹೆಸರೇ ಸೂಚಿಸುವಂತೆ ಮ್ಯಾಟ್ ಬ್ಲ್ಯಾಕ್ ಫಿನಿಶ್ ಜೊತೆಗೆ ಕಾಂಟ್ರಾಸ್ಟ್ ರೆಡ್ ಹೈಲೈಟ್‍ಗಳನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಹೊಸ 2020ರ ಸ್ಕೋಡಾ ರ‍್ಯಾಪಿಡ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಕಾರಿನ ಮುಂಭಾಗವು ಸ್ಲೀಕ್ ಶಾರ್ಪಡ್ ಹೆಡ್‍‍‍ಲೈಟ್‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಎಲ್ ಆಕಾರದ ಟೇಲ್‍‍ಲೈಟ್‍‍ಗಳನ್ನು ಹೊಂದಿದೆ. ಸ್ಕೋಡಾ ಬ್ರ್ಯಾಂಡಿಗ್ ಬುಟ್‍ ಲಿ‍‍ಡ್‍‍ಗಳನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಮರುವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ ಹೊಸದಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಸ್ಪೋಕ್ ಅಲಾಯ್ ವ್ಹೀಲ್‍‍ಗಳ ಜೊತೆಗೆ ಫಾಗ್ ಲ್ಯಾಂಪ್‍ಗಳನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಕಾರಿನ ಇಂಟಿರಿಯರ್‍‍ನಲ್ಲಿ ಹಿಂದಿನ ಆವೃತ್ತಿಗಿಂತ ಹೆಚ್ಚು ಬದಲಾವಣೆಗಳನ್ನು ಮಾಡಲಾಗಿದ್ದು, ಹೆಚ್ಚಿನ ಪ್ರೀಮಿಯಂ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ. ಇಂಟಿರಿಯರ್‍ ಇನ್ಪೋಟೇನ್‍ಮೆಂಟ್ ಯುನಿ‍‍ಟ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ಕ್ಯಾಬಿನ್‍‍ನಲ್ಲಿ ಅಬ್ಯಾಂಟ್ ಲೈಟ್ ಹೆಚ್ಚು ಪ್ರೀಮಿಯಂ ಲುಕ್ ಅನ್ನು ನೀಡಿದೆ. ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಫುಲ್ ಡಿಜಿಟಲ್ ಯುನಿಟ್ ಅನ್ನು ಹೊಂದಿದೆ. ಹೊಸ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರೇರ್ ಪಾರ್ಕಿಂಗ್ ಸೆನ್ಸಾರ್, ಆ್ಯಂಟಿ-ಗ್ಲೆರ್ ವ್ಯೂ‍‍ಮಿರರ್ ಗಳನ್ನು ಅಳವಡಿಸಲಾಗಿವೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ

ರ‍್ಯಾಪಿಡ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವರ್ನಾ, ಟೊಯೊಟಾ ಯಾರಿಸ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತವೆ.

Article Published On: Monday, March 2, 2020, 15:36 [IST]
English summary
The 2020 Skoda Rapid TSI Will Ditch DSG Automatic Transmission. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+