ಆಟೋ ಎಕ್ಸ್‌ಪೋ 2020: ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ರ‍್ಯಾಪಿಡ್ ಕಾರನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ. ಈ ಹೊಸ ಕಾರು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಪ್‍‍ಗ್ರೇಡ್ ಮಾಡಲಾಗಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

2020ರ ಸ್ಕೋಡಾ ರ‍್ಯಾಪಿಡ್ ಕಾರಿನಲ್ಲಿ ಹೊಸದಾಗಿ 1.0 ಲೀಟರ್, ಮೂರು ಟಿ‍ಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 110 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಹೊಸ ರ‍್ಯಾಪಿಡ್ ಕಾರು ಡೀಸೆಲ್ ಎಂಜಿನ್‍‍ನಲ್ಲಿ ಲಭ್ಯವಿರುವುದಿಲ್ಲ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

ಹೊಸ ಸ್ಕೋಡಾ ರ‍್ಯಾಪಿಡ್ ಮ್ಯಾಟ್ ಕಾನ್ಸೆಪ್ಟ್ ಮತ್ತು ಮಾಂಟೆ ಕಾರ್ಲೊ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಈ ಎರಡು ರೂಪಾಂತರಗಳು ವಿನ್ಯಾಸ ಬದಲಾವಣೆಗಳಿಂದ ಪ್ರತ್ಯೇಕಿಸಲಾಗಿದೆ. ಈ ರ‍್ಯಾಪಿಡ್ ಮ್ಯಾಟ್ ರೂಪಾಂತರದ ಹೆಸರೇ ಸೂಚಿಸುವಂತೆ ಮ್ಯಾಟ್ ಬ್ಲ್ಯಾಕ್ ಫಿನಿಶ್ ಜೊತೆಗೆ ಕಾಂಟ್ರಾಸ್ಟ್ ರೆಡ್ ಹೈಲೈಟ್‍ಗಳನ್ನು ಹೊಂದಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

ಹೊಸ 2020ರ ಸ್ಕೋಡಾ ರ‍್ಯಾಪಿಡ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಕಾರಿನ ಮುಂಭಾಗವು ಸ್ಲೀಕ್ ಶಾರ್ಪಡ್ ಹೆಡ್‍‍‍ಲೈಟ್‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಎಲ್ ಆಕಾರದ ಟೇಲ್‍‍ಲೈಟ್‍‍ಗಳನ್ನು ಹೊಂದಿದೆ. ಸ್ಕೋಡಾ ಬ್ರ್ಯಾಂಡಿಗ್ ಬುಟ್‍ ಲಿ‍‍ಡ್‍‍ಗಳನ್ನು ಹೊಂದಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

ಮರುವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ ಹೊಸದಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಸ್ಪೋಕ್ ಅಲಾಯ್ ವ್ಹೀಲ್‍‍ಗಳ ಜೊತೆಗೆ ಫಾಗ್ ಲ್ಯಾಂಪ್‍ಗಳನ್ನು ಹೊಂದಿರಲಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

ಕಾರಿನ ಇಂಟಿರಿಯರ್‍‍ನಲ್ಲಿ ಹಿಂದಿನ ಆವೃತ್ತಿಗಿಂತ ಹೆಚ್ಚು ಬದಲಾವಣೆಗಳನ್ನು ಮಾಡಲಾಗಿದ್ದು, ಹೆಚ್ಚಿನ ಪ್ರೀಮಿಯಂ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ. ಇಂಟಿರಿಯರ್‍ ಇನ್ಪೋಟೇನ್‍ಮೆಂಟ್ ಯುನಿ‍‍ಟ್ ಅನ್ನು ಹೊಂದಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

ಕ್ಯಾಬಿನ್‍‍ನಲ್ಲಿ ಅಬ್ಯಾಂಟ್ ಲೈಟ್ ಹೆಚ್ಚು ಪ್ರೀಮಿಯಂ ಲುಕ್ ಅನ್ನು ನೀಡಿದೆ. ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಫುಲ್ ಡಿಜಿಟಲ್ ಯುನಿಟ್ ಅನ್ನು ಹೊಂದಿದೆ. ಹೊಸ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರೇರ್ ಪಾರ್ಕಿಂಗ್ ಸೆನ್ಸಾರ್, ಆ್ಯಂಟಿ-ಗ್ಲೆರ್ ವ್ಯೂ‍‍ಮಿರರ್ ಗಳನ್ನು ಅಳವಡಿಸಲಾಗಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಆವೃತ್ತಿ ಅನಾವರಣ

ರ‍್ಯಾಪಿಡ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವರ್ನಾ, ಟೊಯೊಟಾ ಯಾರಿಸ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Skoda Rapid gets fresh lease of life with 1.0-litre TSI petrol engine. Read in Kannada.
Story first published: Thursday, February 6, 2020, 21:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X