Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇಯರ್ ಎಂಡ್ ಆಫರ್: ಸ್ಕೋಡಾ ರ‍್ಯಾಪಿಡ್ ಸೆಡಾನ್ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್
ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಸೆಡಾನ್ ಕಾರು ಮಾದರಿಯಾದ ರ‍್ಯಾಪಿಡ್ ಆವೃತ್ತಿಯ ಮೇಲೆ ವರ್ಷಾಂತ್ಯದ ಆಫರ್ ಘೋಷಣೆ ಮಾಡಿದ್ದು, ಸೆಡಾನ್ ಕಾರು ಖರೀದಿಯ ಮೇಲೆ ಗ್ರಾಹಕರು ಗರಿಷ್ಠ ರೂ.75 ಸಾವಿರ ಉಳಿತಾಯ ಮಾಡಬಹುದುದಾಗಿದೆ.

2020ರ ಅಂತ್ಯದಲ್ಲಿ ಹಲವಾರು ಕಾರು ಕಂಪನಿಗಳು ವಿವಿಧ ಆಫರ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಸ್ಕೋಡಾ ಕಂಪನಿಯು ರ‍್ಯಾಪಿಡ್ ಸೆಡಾನ್ ಕಾರು ಖರೀದಿಸುವ ಗ್ರಾಹಕರಿಗಾಗಿ ವಿವಿಧ ಡಿಸ್ಕೌಂಟ್‌ಗಳೊಂದಿಗೆ ವಿಸ್ತರಿತ ವಾರಂಟಿ ಅವಧಿಯ ಆಫರ್ ನೀಡುತ್ತಿದೆ. ಹೊಸ ಆಫರ್ ಈ ತಿಂಗಳ ಕೊನೆಯವರೆಗೂ ಲಭ್ಯವಿರಲಿದ್ದು, ಸೆಡಾನ್ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಹೊಸ ಆಫರ್ ಅತ್ಯುತ್ತಮ ಆಯ್ಕೆಯಾಗಿದೆ.

ಸ್ಕೋಡಾ ಕಂಪನಿಯು ಘೋಷಣೆ ಮಾಡಿರುವ ಆಫರ್‌ನಲ್ಲಿ ರ‍್ಯಾಪಿಡ್ ಖರೀದಿ ಮಾಡುವ ಗ್ರಾಹಕರಿಗೆ ನೇರವಾಗಿ ರೂ. 50 ಸಾವಿರ ಕ್ಯಾಶ್ ಡಿಸ್ಕೌಂಟ್ ಲಭ್ಯವಾಗಲಿದ್ದು, ಇನ್ನುಳಿದ ರೂ. 25 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿರುತ್ತದೆ.

ಇದರ ಜೊತೆಗೆ ಕಂಪನಿಯು ನಿಗದಿತ ಅವಧಿಯಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ರೂ.26,250 ಮೌಲ್ಯದ 5ನೇ ಮತ್ತು 6ನೇ ವರ್ಷದ ವಾರಂಟಿ ಪ್ಯಾಕೇಜ್ ಅನ್ನು ಉಚಿತವಾಗಿ ನೀಡಲಿದ್ದು, ಹೊಸ ಕಾರು ಖರೀದಿ ಮೇಲೆ ನಾಲ್ಕು ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿಯು ಒಳಗೊಂಡಿರುತ್ತದೆ.

ಇನ್ನು ಸ್ಕೋಡಾ ಇಂಡಿಯಾ ಕಂಪನಿಯು ಬಿಎಸ್-6 ರ‍್ಯಾಪಿಡ್ ಸೆಡಾನ್ ಮಾದರಿಯೊಂದಿಗೆ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆಯ ನಂತರ ಮತ್ತಷ್ಟು ಬೇಡಿಕೆ ಹೆಚ್ಚಳವಾಗಿದೆ. ರ‍್ಯಾಪಿಡ್ ಬಿಎಸ್-6 ಮಾದರಿಯನ್ನು ಸದ್ಯ ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳೊಂದಿಗೆ ಮಾರಾಟಗೊಳಿಸುತ್ತಿರುವ ಸ್ಕೋಡಾ ಕಂಪನಿಯು ಗ್ರಾಹಕರ ಬೇಡಿಕೆ ಆಧಾರ ಮೇಲೆ ಬೆಸ್ ವೆರಿಯೆಂಟ್ ರೈಡರ್ ಮಾದರಿಯ ಮಾರಾಟವನ್ನು ಸ್ಥಗಿತಗೊಳಿಸಿದೆ.

ಸೆಡಾನ್ ಕಾರು ಮಾದರಿಯಲ್ಲೇ ರ‍್ಯಾಪಿಡ್ ಕಾರು ಮಾದರಿಯನ್ನು ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳಿಸುವ ಸಂಬಂಧ ರೈಡರ್ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದ ಸ್ಕೋಡಾ ಕಂಪನಿಯು ಬೆಸ್ ಮಾದರಿಯನ್ನು ಸ್ಥಗಿತಗೊಳಿಸಿದ್ದು, ಸ್ಟಾಕ್ ಮುಕ್ತಾಯದ ತನಕ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ಇನ್ನುಳಿದಂತೆ ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳ ಮಾರಾಟವು ಎಂದಿನಂತೆ ಮುಂದುವರಿಯಲಿದ್ದು, ಪ್ರತಿ ಮಾದರಿಯಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳ ಆಯ್ಕೆ ಲಭ್ಯವಿದೆ.

ರೈಡರ್ ಮಾದರಿಯ ಸ್ಥಗಿತ ನಂತರ ರ‍್ಯಾಪಿಡ್ ಕಾರಿನ ಬೆಲೆಯು ಆರಂಭಿಕವಾಗಿ ರೂ.7.49 ಲಕ್ಷದಿಂದ ರೂ. 7.99 ಲಕ್ಷಕ್ಕೆ(ಎಕ್ಸ್‌ಶೋರೂಂ ಪ್ರಕಾರ) ಏರಿಕೆಯಾಗಿದ್ದು, ಟಾಪ್ ಎಂಡ್ ಮಾಂಟೆ ಕಾರ್ಲೋ ಆಟೋಮ್ಯಾಟಿಕ್ ಆವೃತ್ತಿಯು ರೂ. 13.29 ಲಕ್ಷ ಬೆಲೆ ಹೊಂದಿದೆ. ಆಟೋಮ್ಯಾಟಿಕ್ ಆವೃತ್ತಿಯು ಸದ್ಯ ಸೆಡಾನ್ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಸೆಡಾನ್ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ.

1.0-ಲೀಟರ್(999 ಸಿಸಿ) ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು 16.24 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.