ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಸ್ಕೋಡಾ ನಿರ್ಮಾಣದ ರ‍್ಯಾಪಿಡ್ ಸೆಡಾನ್ ಮಾದರಿಯು ಸದ್ಯ ಸಿ ಸೆಗ್ಮೆಂಟ್ ಕಾರುಗಳಲ್ಲಿ ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟ ಲಭ್ಯವಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಹೋಲಿಕೆ ಮಾಡಿದ್ದಲ್ಲಿ ರ‍್ಯಾಪಿಡ್ ಬೆಲೆ ಉತ್ತಮವಾಗಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಹೊಸ ರ‍್ಯಾಪಿಡ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಮಾರುತಿ ಸುಜುಕಿ ಸಿಯಾಜ್, ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರುಗಳು ದುಬಾರಿ ಬೆಲೆ ಹೊಂದಿವೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಹ್ಯುಂಡೈ ವೆರ್ನಾ ಹೊರತುಪಡಿಸಿ ರ‍್ಯಾಪಿಡ್ ಸೇರಿದಂತೆ ಬಹುತೇಕ ಸೆಡಾನ್ ಕಾರುಗಳಲ್ಲಿ ಸದ್ಯ ಡೀಸೆಲ್ ಎಂಜಿನ್‌ಗಳು ಸ್ಧಗಿತಗೊಂಡಿದ್ದು, ಪೆಟ್ರೋಲ್ ಮಾದರಿಗಳು ಮಾತ್ರವೇ ಖರೀದಿಗೆ ಲಭ್ಯವಿವೆ. ಈ ಕಾರಣದಿಂದಲೂ ರ‍್ಯಾಪಿಡ್ ಬೆಲೆಯು ಇಳಿಕೆಯಲ್ಲಿದ್ದು, ಡೀಸೆಲ್ ಎಂಜಿನ್ ನಂತರ ಮತ್ತಷ್ಟು ದುಬಾರಿಯಾಗಲಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ರ‍್ಯಾಪಿಡ್ 2020ರ ಮಾದರಿಯು ಬಿಎಸ್-6 ಎಮಿಷನ್ ಜಾರಿ ನಂತರ 1.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು,ಹೊಸ ರ‍್ಯಾಪಿಡ್ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಐದು ವೆರಿಯೆಂಟ್‌ಗಳಲ್ಲಿ ಅಭಿವೃದ್ದಿಗೊಂಡಿದ್ದು, ರೈಡರ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ವೆರಿಯೆಂಟ್‌ಗಳನ್ನು ಪಡೆದುಕೊಂಡಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಇದರಲ್ಲಿ ರೈಡರ್ ಮಾದರಿಯು ಆರಂಭಿಕ ಆವೃತ್ತಿಯಾಗಿದ್ದರೆ ಮಾಂಟೆ ಕಾರ್ಲೋ ಆವೃತ್ತಿಯು ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ಜೋಡಣೆ ಮಾಡಿರುವ 999-ಸಿಸಿ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಹೊಸ ಕಾರಿನಲ್ಲಿ ಸದ್ಯಕ್ಕೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಆಟೋಮ್ಯಾಟಿಕ್ ಕಾರು ಮಾದರಿಯೂ ಮುಂದಿನ ಕೆಲವೇ ತಿಂಗಳಿನಲ್ಲಿ ಖರೀದಿಗೆ ಲಭ್ಯವಾಗಲಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಹೊಸ ಎಂಜಿನ್ ಮಾದರಿಯು ಬಿಎಸ್-6 ನಿಯಮ ಜಾರಿ ನಂತರ ಹೊಸ ಎಮಿಷನ್‌ಗೆ ಅನುಗುಣವಾಗಿ ಅಭಿವೃದ್ದಿಗೊಂಡಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿರುವುದಲ್ಲದೆ ಮೈಲೇಜ್ ಪ್ರಮಾಣದಲ್ಲಿ ಶೇ.23ರಷ್ಟು ಸುಧಾರಣೆಗೊಳ್ಳುವ ಮೂಲಕ ಪ್ರತಿ ಲೀಟರ್ ಪೆಟ್ರೋಲ್‌ಗೆ 18.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಇನ್ನು ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್‌ಪ್ಲೇ, ಆಂಡ್ರಾಯಿಡ್ ಆಟೋ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಇದೇ ಅತಿ ಕಡಿಮೆ ಬೆಲೆಯ ಕಾರು..!

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.

Article Published On: Saturday, May 30, 2020, 21:49 [IST]
English summary
Skoda Rapid Is Most Affordable C-Segment Sedan In India. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+