ಸ್ಕೋಡಾ ರ‍್ಯಾಪಿಡ್ ಪೆಟ್ರೋಲ್ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ
ಸ್ಕೋಡಾ ಇಂಡಿಯಾ ಕಂಪನಿಯು ರ‍್ಯಾಪಿಡ್ ಸೆಡಾನ್ ಮಾದರಿಯಲ್ಲಿ ಪೆಟ್ರೋಲ್ ಆಟೋಮ್ಯಾಟಿಕ್ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.49 ಲಕ್ಷ ಬೆಲೆ ಹೊಂದಿದೆ.

ರ‍್ಯಾಪಿಡ್ ರೈಡರ್ ಬೆಸಿಕ್ ವೆರಿಯೆಂಟ್ ಹೊರತುಪಡಿಸಿ ಇನ್ನುಳಿದ ಐದು ವೆರಿಯೆಂಟ್‌ಗಳಾದ ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದ್ದು, ಆಟೋಮ್ಯಾಟಿಕ್ ಆವೃತ್ತಿಯು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9.49 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ 13.29 ಲಕ್ಷ ಬೆಲೆ ಹೊಂದಿದೆ.

ರ‍್ಯಾಪಿಡ್ ಬಿಎಸ್-6 ಮಾದರಿಯಲ್ಲಿ ಈಗಾಗಲೇ 1.0-ಲೀಟರ್ ಪೆಟ್ರೋಲ್ ಆವೃತ್ತಿಯಲ್ಲಿ ಮ್ಯಾನುವಲ್ ಆವೃತ್ತಿಯನ್ನು ಮಾತ್ರವೇ ಬಿಡುಗಡೆ ಮಾಡಿದ್ದ ಸ್ಕೋಡಾ ಕಂಪನಿಯು ಇದೀಗ ಆಟೋಮ್ಯಾಟಿಕ್ ಆವೃತ್ತಿಯನ್ನು ಸಹ ಬಿಡುಗಡೆಗೊಳಿಸಿದೆ.

ರ‍್ಯಾಪಿಡ್ ಹೊಸ ಕಾರು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಗ್ರಾಹಕರು ತಮ್ಮ ಬೇಡಿಕೆ ಅನುಗುಣವಾಗಿ ಇದೀಗ ಎರಡು ಮಾದರಿಯಲ್ಲೂ ಖರೀದಿ ಮಾಡಬಹುದಾಗಿದೆ.
| ವೆರಿಯೆಂಟ್‌ಗಳು | ಬೆಲೆ(ಎಕ್ಸ್‌ಶೋರೂಂ ಪ್ರಕಾರ) |
| ರೈಡರ್ ಪ್ಲಸ್ ಆಟೋಮ್ಯಾಟಿಕ್ | ರೂ. 9,49,000 |
| ಆ್ಯಂಬಿಯೆಷನ್ ಆಟೋಮ್ಯಾಟಿಕ್ | ರೂ. 11,29,000 |
| ಆನೆಕ್ಸ್ ಆಟೋಮ್ಯಾಟಿಕ್ | ರೂ. 11,49,000 |
| ಸ್ಟೈಲ್ ಆಟೋಮ್ಯಾಟಿಕ್ | ರೂ. 12,99,000 |
| ಮಾಂಟೆ ಕಾರ್ಲೋ ಆಟೋಮ್ಯಾಟಿಕ್ | ರೂ. 13,29,000 |

ಮ್ಯಾನುವಲ್ ರ‍್ಯಾಪಿಡ್ ಆವೃತ್ತಿಯು ರೈಡರ್, ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳೊಂದಿಗೆ ಮಾರಾಟವಾಗಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಮ್ಯಾನುವಲ್ ಮಾದರಿಯು ಆರಂಭಿಕವಾಗಿ ರೂ. 7.49 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆ ಪಡೆದುಕೊಂಡಿದೆ.

ರ‍್ಯಾಪಿಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳ ಬೆಲೆ ನಡುವೆ ಎಕ್ಸ್‌ಶೋರೂಂ ಪ್ರಕಾರ ರೂ.2 ಲಕ್ಷದಷ್ಟು ಬೆಲೆ ಅಂತರವಿದ್ದು, ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 999-ಸಿಸಿ ಟಿಎಸ್ಐ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯನ್ನು ಜೋಡಿಸಲಾಗಿದೆ.

1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಉತ್ಪಾದನಾ ಗುಣಹೊಂದಿದ್ದು, ಆಟೋಮ್ಯಾಟಿಕ್ ಆವೃತ್ತಿಯು ಸೆಡಾನ್ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದೆ.

ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದ್ದು, ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

999-ಸಿಸಿ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು 16.24 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.


Click it and Unblock the Notifications